Gruhajoyti scheme- ಗೃಹ ಜ್ಯೋತಿ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಬೆಸ್ಕಾಂ! ಆಗಸ್ಟ್ ತಿಂಗಳಲ್ಲಿ ಉಚಿತ ಬಿಲ್ ಪಡೆಯಲು ಈ ಕೆಲಸ ತಪ್ಪದೇ ಮಾಡಿ

ಗೃಹ ಜ್ಯೋತಿ(Gruhajoyti scheme) ಮಹತ್ವದ ಪ್ರಕಟಣೆ ಹೊರಡಿಸಿದೆ ಆಗಸ್ಟ್ ತಿಂಗಳಲ್ಲಿ ಉಚಿತ ಬಿಲ್ ಪಡೆಯಲು ಈ ಕೆಳಗೆ ತಿಳಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು ತಡವಾದಲ್ಲಿ ಆಗಸ್ಟ್ ತಿಂಗಳ ವಿದುತ್ಯ್ ಬಿಲ್ ಅನ್ನು ಗ್ರಾಹಕರು ಪಾವತಿಸಬೇಕಾಗುತ್ತದೆ.

ಗೃಹ ಜ್ಯೋತಿ ಯೋಜನೆಯ ಕುರಿತು ಬೆಸ್ಕಾಂ ನಿಂದ ಮಹತ್ವದ ಪ್ರಕಟಣೆ ಹೊರಡಿಸಿದೆ ಆಗಸ್ಟ್ ತಿಂಗಳಲ್ಲಿ ಉಚಿತ ಬಿಲ್ ಪಡೆಯಲು ಈ ಕೆಳಗೆ ತಿಳಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು ತಡವಾದಲ್ಲಿ ಆಗಸ್ಟ್ ತಿಂಗಳ ವಿದುತ್ಯ್ ಬಿಲ್ ಅನ್ನು ಗ್ರಾಹಕರು ಪಾವತಿಸಬೇಕಾಗುತ್ತದೆ.

Gruhajoyti application last date-ಗೃಹ ಜ್ಯೋತಿ ಯೋಜನೆಯ ನೋಂದಣಿಗೆ ಕೊನೆಯ ದಿನಾಂಕ ಯಾವಾಗ? ಆಗಸ್ಟ್ ತಿಂಗಳಲ್ಲಿ ಉಚಿತ ಬಿಲ್ ಪಡೆಯಲು ಈ ಕೆಲಸ ತಪದೇ ಮಾಡಿ

ಜೂನ್ 18 ರಿಂದ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಾರಂಭವಾಗಿದ್ದು, ಅರ್ಜಿ ನೋಂದಣಿಗೆ ಯಾವುದೇ ಕೊನೆಯ ದಿನಾಂಕ ಇಲ್ಲ. ಅದರೆ ನೀವು ಜುಲೈ 25 ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ, ಆಗಸ್ಟ್ ತಿಂಗಳ ಬಿಲ್'ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25 ರೊಳಗೆ ನೋಂದಾಯಿಸಿಕೊಂಡಲ್ಲಿ, ಸೆಪ್ಟೆಂಬರ್ ತಿಂಗಳ ಬಿಲ್'ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ (ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25 ನೇ ತಾರೀಖಿನಿಂದ ಮುಂದಿನ ತಿಂಗಳ 25 ತಾರೀಖಿನವರೆಗೆ) ಅದರಿಂದ ಆಗಸ್ಟ್ ತಿಂಗಳಲ್ಲಿ ಉಚಿತ ಬಿಲ್ ಪಡೆಯಲು ಜುಲೈ 25ರ ಒಳಗೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ ಅದರಿಂದ ಕೂಡಲೇ ಅರ್ಜಿ ಸಲ್ಲಿಸದವರು ಅರ್ಜಿ ಸಲ್ಲಿಸಿ.

Gruhajoyti scheme- ಗೃಹಜ್ಯೋತಿ - ಹಿಂಬಾಕಿ ಇದ್ದರೂ ದೊರಕಲಿದೆ ಯೋಜನೆಯ ಪ್ರಯೋಜನ.

1. ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆಪ್ಟಂಬರ್ 30 ರೊಳಗೆ ಪಾವತಿಸಬೇಕು (ಮೂರು ತಿಂಗಳು ಕಾಲಾವಕಾಶ ಇದೆ).

2. ನೀವು ಜುಲೈ 25 ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ, ಆಗಸ್ಟ್ ತಿಂಗಳ ಬಿಲ್'ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25 ರೊಳಗೆ ನೋಂದಾಯಿಸಿಕೊಂಡಲ್ಲಿ, ಸೆಪ್ಟೆಂಬರ್ ತಿಂಗಳ ಬಿಲ್'ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ (ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25 ನೇ ತಾರೀಖಿನಿಂದ ಮುಂದಿನ ತಿಂಗಳ 25 ತಾರೀಖಿನವರೆಗೆ).

3. ಈ ಪ್ರಯೋಜನ ಪಡೆಯಲು ನಿಮ್ಮ ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್ ಮೀರಿರಬಾರದು.

4. ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್'ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ ಯೋಜನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ.

ಯೋಜನೆಯ ನೋಂದಣಿಗೆ ವಿಳಂಬ ಬೇಡ. ಪ್ರಯೋಜನ ಪಡೆಯಲು ಇಂದೇ ನೋಂದಾಯಿಸಿಕೊಳ್ಳಿ. https://sevasindhugs.karnataka.gov.in/

ಇದನ್ನೂ ಓದಿ: Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ವೇಳಾಪಟ್ಟಿಯ ಮೇಸೆಜ್ ಪಡೆಯಲು ವೆಬ್ಸೈಟ್ ನಲ್ಲಿ ಬದಲಾವಣೆ!

Gruhajoyti website link- ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ತಮ್ಮ ಮೊಬೈಲ್ ನಲ್ಲೇ ನೋಂದಾಯಿಸಿಕೊಳ್ಳುವುದು ಹೇಗೆ?

Step-1: https://sevasindhugs.karnataka.gov.in ಭೇಟಿ ನೀಡಿ, ನಂತರ Acknowledgement ಓದಿ ಮತ್ತು ಪರಿಶೀಲನೆಗಾಗಿ Captcha ನಮೂದಿಸಿ Submit ಮಾಡಿ.

Step-2: ಆಧಾರ್ ಸಂಖ್ಯೆಯನ್ನು ನಮೂದಿಸಿ, ನಿಮ್ಮ ಹೆಸರು ಸರಿಯಾಗಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ.

Step-3: ಎಸ್ಕಾಂ ಹೆಸರನ್ನು ಆಯ್ಕೆಮಾಡಿ.

Step-4:  ನಿಮ್ಮ ವಿದ್ಯುತ್ ಬಿಲ್‌ನಲ್ಲಿ ಕಾಣುವ ಖಾತೆ ಸಂಖ್ಯೆಯನ್ನು ನಮೂದಿಸಿ. ಖಾತೆದಾರರ ಹೆಸರು ಮತ್ತು ವಿಳಾಸವನ್ನು ಪರೀಕ್ಷಿಸಿಕೊಳ್ಳಿ.

Step-5:  ನಿಮ್ಮ ನಿವಾಸಿ ವಿಧವನ್ನು ಆಯ್ಕೆಮಾಡಿ.

Step-6: ಸಂವಹನಕ್ಕಾಗಿ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

Step-7: ನಿಮ್ಮ ವಿವರಗಳನ್ನು ಇನ್ನೊಮ್ಮೆ ಪರೀಕ್ಷಿಸಿಕೊಳ್ಳಿ.

Step-8: ನಮೂದಿಸಲಾದ ದೂರವಾಣಿ ಸಂಖ್ಯೆಗೆ ಬಂದ OTP ಅನ್ನು ನಮೂದಿಸಿ ನಂತರ Submit ಮಾಡಿದ್ದರೆ ಸಾಕು ನಿಮ್ಮ ಅರ್ಜಿ ಸಲ್ಲಿಕೆಯಾಗಿ ಸ್ವೀಕೃತಿ ದೊರೆಯುತ್ತದೆ.

ಬೆಸ್ಕಾಂ(Bescome helpline number) ವ್ಯಾಪ್ತಿಯ 8 ಜಿಲ್ಲೆಗಳ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು:

ವಿದ್ಯುತ್ ಸಂಬಂಧಿತ ಕುರಿತಾದ ದೂರುಗಳನ್ನು ಸಂದೇಶ, ಫೋಟೋ/ ವೀಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ ಪರಿಹಾರ ಪಡೆಯಿರಿ. 
ಬೆಂಗಳೂರು ನಗರ: 82778 84011, 82778 84012, 82778 84013, 82778 84014, ಕೋಲಾರ- 82778 84015, ಚಿಕ್ಕಬಳ್ಳಾಪುರ -82778 84016, ಬೆಂಗಳೂರು ಗ್ರಾಮಾಂತರ- 82778 84017, ರಾಮನಗರ- 82778 84018, ತುಮಕೂರು- 82778 84019, ಚಿತ್ರದುರ್ಗ- 82778 84020, ದಾವಣಗೆರೆ- 82778 84021,