Gruha Lakshmi : ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಈಗ ಮತ್ತಷ್ಟು ಸರಳ! ಅರ್ಜಿ ಸಲ್ಲಿಸಲು ಇನ್ನು ಮುಂದೆ ಮೇಸೆಜ್ ಗಾಗಿ ಕಾಯಬೇಕಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಲಕರ್.

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana) ಅರ್ಹ ಫಲಾನುಭವಿಗಳು ಈ ಹಿಂದೆ ಅರ್ಜಿ ಸಲ್ಲಿಸಲು ತಮ್ಮ ಮೊಬೈಲ್ ಗಳಿಗೆ ಅರ್ಜಿ ಸಲ್ಲಿಸುವ ಕೇಂದ್ರದ ವಿಳಾಸ ಮತ್ತು ದಿನಾಂಕ ಸಮಯ ಮೇಸೆಜ್ ಬಂದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಹೋಗಬೇಕಿತ್ತು ಅದರೆ ಇನ್ನು ಮುಂದೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮೇಸೆಜ್ ಬರುವವರೆಗೆ ಕಾಯಬೇಕಿಲ್ಲ.

ಹೌದು ಮಿತ್ರರೇ, ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana) ಅರ್ಹ ಫಲಾನುಭವಿಗಳು ಈ ಹಿಂದೆ ಅರ್ಜಿ ಸಲ್ಲಿಸಲು ತಮ್ಮ ಮೊಬೈಲ್ ಗಳಿಗೆ ಅರ್ಜಿ ಸಲ್ಲಿಸುವ ಕೇಂದ್ರದ ವಿಳಾಸ ಮತ್ತು ದಿನಾಂಕ ಸಮಯ ಮೇಸೆಜ್ ಬಂದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಹೋಗಬೇಕಿತ್ತು ಅದರೆ ಇನ್ನು ಮುಂದೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮೇಸೆಜ್ ಬರುವವರೆಗೆ ಕಾಯಬೇಕಿಲ್ಲ. 

ಅರ್ಜಿ ಸಲ್ಲಿಸಲು ದಿನಾಂಕ ಮತ್ತು ಸ್ಥಳ, ಸಮಯದ ಮೇಸೆಜ್ ಬರದಿದ್ದರು ನಿಮ್ಮ ಹತ್ತಿರದ ಗ್ರಾಮ ಪಂಚಾಯತ್ ಭಾಪೂಜಿ ಸೇವಾ ಕೇಂದ್ರ, ಗ್ರಾಮ್, ಒನ್(Grama one), ಕರ್ನಾಟಕ ಒನ್(karnataka one) ಅಥವಾ ಬೆಂಗಳೂರು ಒನ್(Bengalore one) ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬವುದು  ಎಂದು ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್, ಸಚಿವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ರವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿರುವ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಚಾಲನೆ ಸಿಕ್ಕ ಕೇವಲ 7 ದಿನಗಳಲ್ಲಿ 50 ಲಕ್ಷಕ್ಕೂ ಅಧಿಕ ಜನ ಅರ್ಜಿ ಸಲ್ಲಿಕೆ ಮಾಡಿದ್ದು ಈ ರೀತಿಯ ಜನರ ಉತ್ತಮ ಪ್ರತಿಕ್ರಿಯೆಯಿಂದ ತುಂಬ ಖುಷಿ ತಂದಿದೆ ಮತ್ತು ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಹಿಂದಿನ ಅರ್ಜಿ ಸಲ್ಲಿಕೆ ವಿಧಾನದ ಪ್ರಕಾರ ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್ಎಂಎಸ್ ಅವಲಂಭಿಸದೇ  ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ: Pm kisan: ಪಿ ಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಿಸಿದ ಕೇಂದ್ರ ಸರಕಾರ! 

Gruhalakshmi Yojana required Documents- ಅಗತ್ಯ ದಾಖಲಾತಿಗಳ ವಿವರ ಹೀಗಿದೆ:

1)ಅರ್ಜಿದಾರ ಕುಟುಂಬದ ರೇಷನ್ ಕಾರ್ಡ ಪ್ರತಿ.(Ration card)
2)ಅಧಾರ್ ಕಾರ್ಡ ಪ್ರತಿ.(Aadhar card)
3)ಬ್ಯಾಂಕ್ ಪಾಸ್ ಬುಕ್ ಪ್ರತಿ.(Bank passbook)
4)ಮೊಬೈಲ್ ಸಂಖ್ಯೆ.(Mobile number)
5)ಪತಿಯ ಅಧಾರ್ ಕಾರ್ಡ ಪ್ರತಿ.(husband aadhar card)

How to Find Gram One and karnataka one, benagalore one centers- ನಿಮ್ಮ ಹತ್ತಿರದ ಸ್ಥಳದಲ್ಲಿ ಗ್ರಾಮ್ ಒನ್ , ಕರ್ನಾಟಕ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಗಳು ಎಲ್ಲಿವೆ? ಎಂದು ಹೇಗೆ ತಿಳಿಯುವುದು?

ರಾಜ್ಯ ಮತ್ತು ಕೇಂದ್ರ ಸರಕಾರಗಳ ಯೋಜನೆಯನ್ನು ಅರ್ಹ ಎಲ್ಲಾ ನಾಗರಿಕರಿಗೆ ಸಮರ್ಪಕವಾಗಿ ಡಿಜಿಟಲ್ ಮಾದ್ಯಮದ ಮೂಲಕ ಅರ್ಜಿ ಸಲ್ಲಿಸಿ ನೇರವಾಗಿ ಅವರ ಖಾತೆಗೆ ವಿವಿಧ ಯೋಜನೆಯ  ಅರ್ಥಿಕ ನೆರವಿನ ಹಣವನ್ನು ತಲುಪಿಸುವ ದೇಸೆಯಲ್ಲಿ ನಮ್ಮ ರಾಜ್ಯದಲ್ಲಿ ಗ್ರಾಮ್ ಒನ್ , ಕರ್ನಾಟಕ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ನಿಮ್ಮ ಹತ್ತಿರದ ಕರ್ನಾಟಕ ಒನ್ ಸೇವಾ ಕೇಂದ್ರದ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಪಡೆಯಲು ಈ https://www.karnatakaone.gov.in/Public/CenterDetails ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಜಿಲ್ಲೆಯನ್ನು ಹೆಸರಿನ ಕೆಳಗೆ ತೋರಿಸುವ "View centers" ಬಟನ್ ಮೇಲೆ ಕ್ಲಿಕ್ ಮಾಡಿ ಕರ್ನಾಟಕ ಒನ್ ಸೇವಾ ಕೇಂದ್ರದ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಪಡೆಯಬವುದಾಗಿದೆ.

ಗ್ರಾಮೀಣ ಭಾಗದವರು ನಿಮ್ಮ ಹತ್ತಿರದ ಗ್ರಾಮ್ ಒನ್ ಸೇವಾ ಕೇಂದ್ರದ ವಿಳಾಸವನ್ನು ತಿಳಿಯಲು https://gramaone.karnataka.gov.in/GramaOneDept/Sevasindhu/ServicecentersKannada ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆ ತಾಲ್ಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರದ ವಿಳಾಸ ತಿಳಿಯಬವುದು.

https://www.karnatakaone.gov.in/Info/Public/eAasthiBengaluru ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಬೆಂಗಳೂರು ಕೇಂದ್ರಗಳು ಎಲ್ಲೆಲಿ? ಇವೆ ಎಂದು ಪಟ್ಟಿ ಗೋಚರಿಸುತ್ತದೆ.

ಈ ಕುರಿತು ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವುದು:

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಬೆಸ್ಕಾಂ! ಆಗಸ್ಟ್ ತಿಂಗಳಲ್ಲಿ ಉಚಿತ ಬಿಲ್ ಪಡೆಯಲು ಈ ಕೆಲಸ ತಪ್ಪದೇ ಮಾಡಿ