Madras Eye : ರಾಜ್ಯದಲ್ಲಿ ಕೆಂಗಣ್ಣು ಕಾಯಿಲೆ, ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

ಗ್ರಾಮೀಣ ಮತ್ತು ನಗರ ಭಾಗ ಜನರು ಈ ಸಮಸ್ಯೆಯಿಂದ ಚಿಕಿತ್ಸೆಗಾಗಿ ದಿನ ದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅಸ್ಪತ್ರೆಗಳ ಕಡೆಗೆ ಬರ ತೊಡಗಿದ್ದು ಸಾಮಾನ್ಯವಾಗಿ ಮಳೆಗಾಲದಲ್ಲಿ ಬ್ಯಾಕ್ಟೀರಿಯಯಾ ಮತ್ತು ವೈರಾಣುಗಳು ಹೆಚ್ಚು ಕ್ರಿಯಾಶೀಲ ಅಗುವುದರಿಂದ ಕೆಂಗಣ್ಣು ಸಮಸ್ಯೆ ಉದ್ಬವಿಸುತ್ತದೆ.

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ವಾತಾವರಣದ ವ್ಯತ್ಯಾಸದಿಂದ ಜನರಲ್ಲಿ ಕಣ್ಣಿನ ಉರಿ-ಊತ ಕೆಂಗಣ್ಣು(Madras eye) ಕಾಯಿಲೆ ಕಂಡು ಬರುತ್ತಿರುವುದರಿಂದ. ಈ ಕಾರಣದಿಂದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತ್ರ ಚಿಕಿತ್ಸಾ ವಿಭಾಗದ ಜಂಟಿ ನಿರ್ದೇಶಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕಳೆದ 3-4 ವಾರದಿಂದ ಬಿಟ್ಟು ಬಿಡದೆ ಅಧಿಕ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ರಾಜ್ಯಾದಂತ್ಯ ಕೆಂಗಣ್ಣು(Madras eye) ಸಮಸ್ಯೆಯೂ ಹೆಚ್ಚುತ್ತಿದ್ದು, ಮಕ್ಕಳಲ್ಲಿ, ಮಧ್ಯಮ ವಯಸ್ಸಿನವರಲ್ಲಿ ಮತ್ತು ವಯಸ್ಕರಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ.

ಗ್ರಾಮೀಣ ಮತ್ತು ನಗರ ಭಾಗ ಜನರು ಈ ಸಮಸ್ಯೆಯಿಂದ ಚಿಕಿತ್ಸೆಗಾಗಿ ದಿನ ದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅಸ್ಪತ್ರೆಗಳ ಕಡೆಗೆ ಬರ ತೊಡಗಿದ್ದು ಸಾಮಾನ್ಯವಾಗಿ ಮಳೆಗಾಲದಲ್ಲಿ ಬ್ಯಾಕ್ಟೀರಿಯಯಾ ಮತ್ತು ವೈರಾಣುಗಳು ಹೆಚ್ಚು ಕ್ರಿಯಾಶೀಲ ಅಗುವುದರಿಂದ ಕೆಂಗಣ್ಣು ಸಮಸ್ಯೆ ಉದ್ಬವಿಸುತ್ತದೆ.

ಮಕ್ಕಳಲ್ಲಿ ಕೆಂಗಣ್ಣು ಕಾಣಿಸಿಕೊಂಡಿರುವುದರಿಂದ ಈ ಕುರಿತು ಒಂದಿಷ್ಟು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವ ಕಾರಣದಿಂದಾಗಿ ಈ ಕೆಂಗಣ್ಣು(Madras eye) ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗದೆ ಸೂಕ್ತ ಚಿಕಿತ್ಸಾ ಕ್ರಮ ಪಾಲನೆ ಮಾಡಿದರೆ ಈ ಸಮಸ್ಯೆ ಬೇಗ ಗುಣ ಮುಖವಾಗುತ್ತದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ರೋಗದ ಲಕ್ಷಣಗಳು:

  • ರೋಗಿಯ ಕಣ್ಣಿನ ಬಿಳಿ ಭಾಗವು ಕೆಂಪಾಗುತ್ತದೆ.
  • ಕಣ್ಣುಗಳಲ್ಲಿ ಉರಿ ಮತ್ತು ನೋವು ಇರುತ್ತದೆ.
  • ಕಣ್ಣುಗಳಿಂದ ನಿರಂತರವಾಗಿ ನೀರು ಹೊರಬರುತ್ತಿರುತ್ತದೆ.
  • ಕಣ್ಣುಗಳು ಊದಿಕೊಳ್ಳುತ್ತದೆ.

ಮುನ್ನೆಚ್ಚರಿಕೆ ಕ್ರಮಗಳು:

  • ಹೆಚ್ಚಿನ ಜನ ಇರುವ ಪ್ರದೇಶಗಳಿಗೆ ಹೋಗುವುದನ್ನು ಕಡಿಮೆ ಮಾಡಬೇಕು.
  • ಪದೇ ಪದೇ ಕಣ್ಣುಗಳನ್ನು ಮುಟ್ಟುವುದನ್ನು ಕಡಿಮೆ ಮಾಡಬೇಕು.
  • ಸೋಪ್ ನಲ್ಲಿ ಆಗಾಗ ಕೈ ತೊಳೆಯುವುದನ್ನು ಅಭ್ಯಾಸ ಮಾಡಬೇಕು.
  • ಕಣ್ಣಿನ ಉರಿ ಊತ ಬಂದ ವ್ಯಕ್ತಿ ಬೇರೆಯವರ ಜೊತೆ ನಿಕಟ ಸಂಪರ್ಕ ಹೊಂದುವುದನ್ನು ತಪ್ಪಿಸಬೇಕು.
  • ರೋಗಿಯು ಉಪಯೋಗಿಸಿದ ಟವೆಲ್, ತಲೆ ದಿಂಬನ್ನು ಇತರರು ಉಪಯೋಗಿಸದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: Ration Card application-2023: ಇಂದಿನಿಂದ ರೇಷನ್ ಕಾರ್ಡ ಕುಟುಂಬದ ಮುಖ್ಯಸ್ಥರ ಬದಲಾವಣೆ ಮತ್ತು ತಿದ್ದುಪಡಿ ಪ್ರಾರಂಭ! ಇಲ್ಲಿದೆ ಅರ್ಜಿ ಸ್ಥಿತಿ ಚೆಕ್ ಮಾಡುವ ವೆಬ್ಸೈಟ್ ಲಿಂಕ್.