ಯುವ ನಿಧಿ ಮತ್ತು ಅನ್ನ ಭಾಗ್ಯ ಯೋಜನೆಯ ಅಧಿಕೃತ ಮಾರ್ಗಸೂಚಿ ಬಿಡುಗಡೆ.

ರಾಜ್ಯ ಸರಕಾರದ ಹೊಸ ಯೋಜನೆಗಳಲ್ಲಿ ಯುವ ನಿಧಿ ಮತ್ತು ಅನ್ನ  ಭಾಗ್ಯ ಯೋಜನೆಯಡಿ ಯಾವೆಲ್ಲ ನಿಯಮಗಳು ಇರಲಿವೆ ಎನ್ನುವುದರ ಕುರಿತು ಸಾರ್ವಜನಿಕರಿಗೆ ಮತ್ತು ಯೋಜನೆ ಅನುಷ್ಠಾನಕ್ಕೆ ಸಂಭಂದಿಸಿದಂತೆ ಅಧಿಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

“ಯುವ ನಿಧಿ ಯೋಜನೆ”(Yuva nidhi yojane) ಮಾರ್ಗಸೂಚಿ ಹೀಗಿದೆ:

ರಾಜ್ಯದ ಪದವೀಧರರ ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ಪಾವತಿಸಲು “ಕರ್ನಾಟಕ ಯುವ ನಿಧಿ ಯೋಜನೆ” ಯನ್ನು ಜಾರಿಗೆ ತರಲಾಗಿದೆ.

ರಾಜ್ಯದಲ್ಲಿ 2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂಗಳು ಮಾತ್ರ) ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ ಯೋಜನೆ” ಯನ್ನು ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿತ್ತು.

ಈಗ ಸಚಿವ ಸಂಪುಟದ ಅನುಮೋದನೆ ನಂತರ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಷರತ್ತು ಮತ್ತು ನಿಬಂಧನೆಗಳು ಹಾಗೂ ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಲು ಸರ್ಕಾರವು ತೀರ್ಮಾನಿಸಿದ್ದು. 

2023 ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ವಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ, ಎರಡು ವರ್ಷಗಳ ಅವಧಿಗೆ ನೀಡಲು “ಯುವ ನಿಧಿ ಯೋಜನೆ” ಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಅನುಷ್ಟಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತು ಮತ್ತು ನಿಬಂಧನೆಗಳು:

1. ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. 

2. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು. 

3. ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

4. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು, ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಯೋಜನೆಗೆ ಅರ್ಹರಾಗದೇ ಇರುವವರು:

1, ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.

2, ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು. 

3. ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.

3. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕಿಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

ಇದನ್ನೂ ಓದಿ: Nano DAP: ನ್ಯಾನೋ ಡಿಎಪಿ ರಸಗೊಬ್ಬರ ಎಲ್ಲಿ ಖರೀದಿಸಬೇಕು? ಇದರ ಬಳಕೆಯ ಲಾಭಗಳೇನು? ಯಾವೆಲ್ಲ ಬೆಳೆಗೆ ಸಿಂಪರಣೆ ಮಾಡಬವುದು.


“ಅನ್ನ ಭಾಗ್ಯ”(Anna bhagya yojane) ಯೋಜನೆ ಮಾರ್ಗಸೂಚಿ ವಿವರ:

ದಿನಾಂಕ: 02.06.2023 ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆ.ಜಿ, ಆಹಾರ ಧಾನ್ಯವನ್ನು ವಿತರಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಮಾರ್ಗಸೂಚಿಯನು ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗಿರುವ ಅಂತ್ಯೋದಯ ಯೋಜನೆ (AAY) ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯವನ್ನು ವಿತರಿಸುವ ಸಲುವಾಗಿ ನೂತನ ಮಾರ್ಗಸೂಚಿಯನ್ನು ರಾಜ್ಯ ಸರಕಾರದಿಂದಾ ಹೊರಡಿಸಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರವು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗಿರುವ ಅಂತ್ಯೋದಯ ಅನ್ನ  ಭಾಗ್ಯ  ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಕ್ಕೆ, ಪ್ರತಿ ತಿಂಗಳು ಫಲಾನುಭವಿಗಳ ಪರಿಗಣನೆಗೆ ತೆಗೆದುಕೊಳ್ಳದೇ 35 ಕೆ.ಜಿ, ಆಹಾರ ಧಾನ್ಯವನ್ನು ಹಾಗೂ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ಒದಗಿಸುತ್ತಿದೆ. ಇದರೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯವನ್ನು ರಾಜ್ಯ ಸರ್ಕಾರದ ವೆಚ್ಚದಲ್ಲಿ, ಉಚಿತವಾಗಿ ವಿತರಿಸಲಾಗುತ್ತಿದೆ.

ರಾಜ್ಯದಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುತ್ತಿರುವ 5ಕೆ.ಜಿ, ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 01 ಕೆ.ಜಿ, ಅಕ್ಕಿಯನ್ನು ಉಚಿತವಾಗಿ ವಿತರಿಸಲು ಆದೇಶಿಸಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನಯ ವಿತರಿಸಲಾಗಿರುವ ಅಂತ್ಯೋದಯ ಅನ್ನ ಯೋಜನೆ (AAY), ಆದ್ಯತಾ ಕುಟುಂಬ ಪಡಿತರ ಚೀಟಿಗಳು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ ಆಹಾರ ಧಾನ್ಯವನ್ನು ದಿನಾಂಕ: 01.07.2023 ರಿಂದ ಅನ್ವಯವಾಗುವಂತೆ ಉಚಿತವಾಗಿ ವಿತರಿಸಲು ಆದೇಶ ನೀಡಲಾಗಿದೆ.