ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KEB) ಭರ್ಜರಿ ಉದ್ಯೋಗವಾಕಾಶ! 2,679 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ(Junior Power Man Job application) ಆಹ್ವಾನಿಸಲಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(hescom job notification) ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 (1818 + 450 ಬ್ಯಾಕ್‌ಲಾಗ್) ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಂಪನಿವಾರು ಹುದ್ದೆಗಳ ಮತ್ತು ಮೀಸಲಾತಿ ವಿವರ ಈ ಕೆಳಕಂಡಂತಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಮುಖ ದಿನಾಂಕ? ಆಯ್ಕೆ ವಿಧಾನ ಮತ್ತು ಅಧಿಕೃತ ನೇಮಕಾತಿಯ ಅಧಿಸೂಚನೆ ಡೌನ್ಲೋಡ್ ಲಿಂಕ್ ಸೇರಿದಂತೆ ಇತರೆ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ: Bigg boss kannada-ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್!
Monthly Salary-ವೇತನ ವಿವರ ಹೀಗಿದೆ:
ಕ್ರೋಢೀಕೃತ ಸಂಭಾವನೆ (ಮೊದಲ 3 ವರ್ಷಗಳು):
1ನೇ ವರ್ಷ- 17,000/- ತಿಂಗಳಿಗೆ
2ನೇ ವರ್ಷ-19,000/- ತಿಂಗಳಿಗೆ
3ನೇ ವರ್ಷ- 21,000/- ತಿಂಗಳಿಗೆ
ಮೂರು ವರ್ಷದ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ ನಂತರ ಅಭ್ಯರ್ಥಿಗಳನ್ನು ವೇತನ ಶ್ರೇಣಿ ₹28550-600(5)-31550-750(5)-35300-950(5)-40050-1200(5)-46050-1450(6)-54750-1650(5)-63000 ಎರಡು(2) ವರ್ಷಗಳ ಕಾಲ ಪರೀಕ್ಷಾರ್ಥ ಅವಧಿಯಲ್ಲಿ ಇರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Monthly pension scheme- ರೈತರಿಗೆ ಈ ಯೋಜನೆಯಡಿ ಸಿಗುತ್ತೆ ತಿಂಗಳಿಗೆ ರೂ 3,000 ಪಿಂಚಣಿ!
Qualification For junior power man job-ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಅಗತ್ಯ ವಿದ್ಯಾರ್ಹತೆ:
ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಮೇಲೆ ತಿಳಿಸಿರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ವಿಷೇಶ ಸೂಚನೆಗಳು:
i) ಮೇಲೆ ತಿಳಿಸಲಾದ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಯಾವುದೇ ಸಮನಾಂತರ ವಿದ್ಯಾರ್ಹತೆಯನ್ನು (Equivalent Qualification) ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
ii) ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ ಎಸ್.ಎಸ್.ಎಲ್.ಸಿ./10ನೇ ತರಗತಿ (ಬ್ರಿಡ್ಜ್ ಕೋರ್ಸ್) ಉತ್ತೀರ್ಣತೆಯನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
iii) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅಭ್ಯರ್ಥಿಗಳು ಈ ಮೇಲೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಉತ್ತೀರ್ಣಗೊಂಡಿರತಕ್ಕದ್ದು ಹಾಗೂ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.
iv) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
v) ಈ ಅಧಿಸೂಚನೆಯನ್ವಯ ನೇಮಕಾತಿಗೆ ಪರಿಗಣಿಸಬೇಕಾಗುವ ವಿದ್ಯಾರ್ಹತೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಹಕ್ಕನ್ನು ಕವಿಪ್ರನಿನಿ/ಎಸ್ಕಾಂಗಳು ಮಾತ್ರ ಹೊಂದಿರುತ್ತದೆ ಹಾಗೂ ಅಭ್ಯರ್ಥಿಗಳು ಅದಕ್ಕೆ ಬದ್ಧರಾಗಿರತಕ್ಕದ್ದು.
ಇದನ್ನೂ ಓದಿ: Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!
ಇತರೆ ಅರ್ಹತೆಗಳು:
1) ಕನ್ನಡದಲ್ಲಿ ಓದುವ ಮತ್ತು ಬರೆಯುವ ಜ್ಞಾನ ಹೊಂದಿರತಕ್ಕದ್ದು.
2) ತೃಪ್ತಿಕರವಾದ ನೇತ್ರದೃಷ್ಟಿಯನ್ನು ಹೊಂದಿರತಕ್ಕದ್ದು.
3) ತೃಪ್ತಿಕರ ದೇಹದಾರ್ಡ್ಯವನ್ನು ಹೊಂದಿರತಕ್ಕದ್ದು. ಕಠಿಣ ಕಲಸಗಳಾದ ಗುಂಡಿ ತೆಗೆಯುವುದು, ಗೋಪುರ ಅಥವಾ ಕಂಬ ಹತ್ತುವುದು, ಭಾರವಾದ ವಸ್ತುಗಳನ್ನು ಸಾಗಿಸುವುದು, ತಂತಿಗಳನ್ನು ಅಳವಡಿಸುವುದು, ಕಂಬಗಳನ್ನು ಬದಲಾಯಿಸುವುದು, ಇತ್ಯಾದಿ ಕೆಲಸಕಾರ್ಯಗಳನ್ನು ನಿರ್ವಹಿಸಲು ಶಕ್ತರಿರಬೇಕು ಮತ್ತು ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹತೆ ಗಳಿಸಬೇಕು. ಈ ಮೇಲೆ ತಿಳಿಸಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಎಲ್ಲಾ ರೀತಿಯಲ್ಲಿಯೂ ದೈಹಿಕವಾಗಿ ಸಾಮರ್ಥ್ಯ ಹೊಂದಿರತಕ್ಕದ್ದು.
ಇದನ್ನೂ ಓದಿ: RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!
Selection procces- ಆಯ್ಕೆ ವಿಧಾನ:
‘ಸಹನ ಶಕ್ತಿ ಪರೀಕ್ಷೆ’ಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳನ್ನು, ಎಸ್.ಎಸ್.ಎಲ್.ಸಿ ಅಥವಾ 10ನೇ ತರಗತಿಯ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಜೇಷ್ಠತೆ ಆಧಾರದ ಮೇಲೆ ಕರ್ನಾಟಕ ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಪಾಲಿಸಿ, ಆಯ್ಕೆ ಮಾಡಲಾಗುವುದು.
ಸಹನ ಶಕ್ತಿ ಪರೀಕ್ಷೆಗೆ ಈ ಕೆಳಗಿನ ಸ್ಪರ್ಧೆಗಳನ್ನು ನಿಗದಿಪಡಿಸಲಾಗಿದೆ:
A) ವಿದ್ಯುತ್ ಕಂಬ ಹತ್ತುವುದು : 8 ಮೀಟರ್ ಎತ್ತರ (ಕಡ್ಡಾಯ)
B) 100 ಮೀಟರ್ ಓಟ: 14 ಸೆಕೆಂಡ್‌ಗಳು
C) ಸ್ಕಿಪ್ಪಿಂಗ್ : ಒಂದು ನಿಮಿಷಕ್ಕೆ 50 ಬಾರಿ
D) ಶಾಟ್‌ಫುಟ್ (12 ಪೌಂಡ್ ಗಳು) : 8 ಮೀಟರ್ ಎಸೆತ (3 ಅವಕಾಶಗಳು)
E) 800 ಮೀಟರ್ ಓಟ : 3 ನಿಮಿಷಗಳು
ಇದನ್ನೂ ಓದಿ: BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!
Important dates for Junior powerman job- ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ | 21-10-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-11-2024 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | 25-11-2024 |
Age limit for Junior powerman job-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು, ಈ ಕೆಳಕಂಡ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು:
ಕನಿಷ್ಠ ವಯೋಮಿತಿ (ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ) | 18 ವರ್ಷಗಳು |
ಗರಿಷ್ಠ ವಯೋಮಿತಿ(ಸಾಮಾನ್ಯ ವರ್ಗದ ಅಭ್ಯರ್ಥಿಗಳು) | 35 ವರ್ಷಗಳು |
ಪ್ರವರ್ಗ-2(ಎ), 2(ಬಿ), 3(ಎ) ಮತ್ತು 3(ಬಿ) | 38 ವರ್ಷಗಳು |
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1 | 40 ವರ್ಷಗಳು |
Junior powerman application link-ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಯನ್ನು ಕಡ್ಡಾಯವಾಗಿ ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗೆ ತಿಳಿಸಿರುವ ಯಾವುದಾದರೊಂದು ವೆಬ್-ಸೈಟ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Escom helpline numbers-ಎಸ್ಕಾಂವಾರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಗಳು:
ಹೆಚ್ಚಿನ ಮಾಹಿತಿ ತಿಳಿಯಲು ಅರ್ಜಿ ಸಲ್ಲಿಕೆ ಕುರಿತು ವಿಚಾರಣೆ ಮಾಡಲು ಎಸ್ಕಾ ವಾರು ಸಹಾಯವಾಣಿ ಸಂಖ್ಯೆಗಳು:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ | 080-22211527 |
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ | 080-22258788 |
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ | 0821-2343384 |
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ | 0824-2885759 |
ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ | 08472-256647, 08472-239004 |
ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ | 0836-2223865, 0836-2223867 |
Karnataka government jobs-ನೇಮಕಾತಿಗೆ ಸಂಬಂಧಪಟ್ತ ಪ್ರಮುಖ ಸೂಚನೆಗಳು:
i) ಈ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ, ಕಿರಿಯ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳು, ಇವುಗಳಲ್ಲಿ ಯಾವುದಾದರೂ ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ii) ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕವಿಪ್ರನಿನಿಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
iii) ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದು ಅರ್ಜಿಗಿಂತ ಹೆಚ್ಚಿನ ಅರ್ಜಿ ಸಲ್ಲಿಸಿದ್ದಲ್ಲಿ, ಕೊನೆಯದಾಗಿ ಸಲ್ಲಿಸಿರುವ ಅರ್ಹ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಇನ್ನುಳಿದ ಅರ್ಜಿಗಳೊಂದಿಗೆ ಸಲ್ಲಿಸಿರುವ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂಪಾವತಿಸಲಾಗುವುದಿಲ್ಲ. ಅಭ್ಯರ್ಥಿಗಳು ಅರ್ಜಿಯಲ್ಲಿ ತಿಳಿಸಿರುವ ಕಂಪನಿ ಆಯ್ಕೆಯು ಅಂತಿಮವಾಗಿರುತ್ತದೆ.
Junior powerman job notification- ನೇಮಕಾತಿಯ ಅಧಿಕೃತ ಪ್ರಕಟಣೆ ಪ್ರತಿಯನ್ನು ಡೌನ್ಲೋಡ್ ಮಾಡಲು ಲಿಂಕ್- Download Now