Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಗೆ ಹಾನಿಯಾದ 1.58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೆ(Bele hani) ಸುಮಾರು ₹120 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಖಾತೆಗೆ ಒಂದು ವಾದ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ತಿಳಿಸಿದ್ದಾರೆ.

ಯಾರಿಗೆಲ್ಲ ಹಿಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರದ(Parihara amount) ಜಮಾ ಅಗಲಿದೆ? ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಹರು ಯಾರು? ಬೆಳೆ ಹಾನಿ ಪರಿಹಾರದ ಅರ್ಜಿ ಸ್ಥಿತಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡುವುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Bele vime-71,117 ಸಾವಿರ ರೈತ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

ಅಕಾಲಿಕ ಮಳೆಯಿಂದ ಉಂಟಾಗುವ ಬೆಳೆ ಹಾನಿಗೆ ಪರಿಹಾರವನ್ನು ಒದಗಿಸಲು ಹಣ ವರ್ಗಾವಣೆಯಲ್ಲಿ(Bele hani parihara status) ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೆ ತರಲು ಕಂದಾಯ ಇಲಾಖೆಯಿಂದ ಪರಿಹಾರ(www.parihara.gov.in) ತಂತ್ರಾಂಶವನ್ನು ಬಳಕೆ ಮಾಡಲಾಗುತ್ತದೆ ಈ ತಂತ್ರಾಂಶದಲ್ಲಿ ಬೆಳೆ ಹಾನಿಯಾದ ರೈತರ ವಿವರವನ್ನು ದಾಖಲಿಸಿ ಅರ್ಹ ರೈತರಿಗೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ.

Bele hani parihara-ಒಂದು ವಾರದ ಒಳಗಾಗಿ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ:

ಈ ವರ್ಷ ಹಿಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆ ನಷ್ಟಕ್ಕೆ ಪರಿಹಾರವನ್ನು ಒದಗಿಸಲು ಕಂದಾಯ ಇಲಾಖೆಯಿಂದ ಪೂರಕ ಸಿದ್ದತೆಯನ್ನು ನಡೆಸಿದ್ದು, 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಅಗಿದ್ದು, ಇದಕ್ಕೆ ಪರಿಹಾರವನ್ನು ನೀಡಲು ಸುಮಾರು ₹120 ಕೋಟಿ ವೆಚ್ಚ ಭರಿಸಬೇಕಾಗುತ್ತದೆ ಎಂದು ಕಂದಾಯ ಸಚಿವರು ವಾರ್ತಾ ಇಲಾಖೆಯ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಹಿಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ರೈತರಿಗೆ ಒಂದು ವಾರದ ಒಳಗಾಗಿ ನೇರ ನಗದು ವರ್ಗಾವಣೆ ಮೂಲಕ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ವಾರ್ತಾ ಇಲಾಖೆಯ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

bele parihara

Bele parihara- ಪರಿಹಾರ ಹಣ ನೇರ ನಗದು ವರ್ಗಾವಣೆ ಮೂಲಕ ಜಮಾ ಅಗಲಿದೆ:

ಈ ಹಿಂದೆ ಬೆಳೆ ಹಾನಿ ಯಾದ ಸಮಯದಲ್ಲಿ ರೈತರಿಂದ ಅರ್ಜಿಯನ್ನು ಸಂಗ್ರಹಣೆ ಮಾಡಿ NDRF ಮಾರ್ಗಸೂಚಿಯ ಪ್ರಕಾರ ಯಾವುದೇ ಡಿಜಿಟಲ್ ಮಾದ್ಯಮದಲ್ಲಿ ರೈತರ ವಿವರವನ್ನು ದಾಖಲಿಸಿದೆ ರೈತರಿಗೆ ಪರಿಹಾರವನ್ನು ನೀಡಲಾಗುತ್ತಿತ್ತು ಈ ವಿಧಾನದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಅನರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಅಗುತ್ತಿತ್ತು.

ಈ ನಕಲಿ ಹಾವಳಿಯನ್ನು ತಪ್ಪಿಸಲು ಅರ್ಹ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಜಮಾ ಮಾಡಲು Parihara ತಂತ್ರಾಂಶವನ್ನು ಅಭಿವೃದ್ದಿಪಡಿಸಿ ಈ ವೆಬ್ಸೈಟ್ ನಲ್ಲಿ ರೈತರ ಬೆಳೆ ಹಾನಿ ಅರ್ಜಿಯನ್ನು ದಾಖಲಿಸಿ ಇಲ್ಲಿ ದಾಖಲಾದ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ.

ಇದನ್ನೂ ಓದಿ: Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Bele parihara status-ಬೆಳೆ ಹಾನಿ ಪರಿಹಾರದ ಅರ್ಜಿಯ ಸ್ಥಿತಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು:

ಬೆಳೆ ಹಾನಿ ಪರಿಹಾರದ ಅರ್ಜಿಯ ಸ್ಥಿತಿಯನ್ನು ಮತ್ತು ಹಣ ಜಮಾ ಅಗಿರುವ ವಿವರವನ್ನು ರೈತರು ತಮ್ಮ ಮೊಬೈಲ್ ನಲ್ಲೇ ಕೇವಲ ಒಂದೆರಡು ಕ್ಲಿಕ್ ನಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬಹುದು.

Step-1: Parihara status check ಮೊದಲಿಗೆ ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: DBT Status- ಎಲ್ಲಾ ಯೋಜನೆಯ ಹಣ ಜಮಾ ಅಗಿರುವುದನ್ನು ಚೆಕ್ ಮಾಡಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

bele parihara

Step-2: ತದನಂತರ ಈ ವೆಬ್ಸೈಟ್ ನಲ್ಲಿ ಕನ್ನಡ/English ಎರಡು ಆಯ್ಕೆಗಳು ಗೋಚರಿಸುತ್ತವೆ ಇದರಲ್ಲಿ ಕನ್ನಡ ಎಂದು ಆಯ್ಕೆ ಮಾಡಿಕೊಂಡು ಮುಂದುವರೆಯಬಹುದು. ಇದಾದ ನಂತರ “Parihara Payment Reports” ವಿಭಾಗದಲ್ಲಿ “Village Wise List” ಬಟನ್ ಮೇಲೆ ಕ್ಲಿಕ್ ಮಾಡಿ “Select year/ವರ್ಷ ಆಯ್ಕೆಮಾಡಿ” ಆಯ್ಕೆಯಲ್ಲಿ ಎಂದು ಅಯ್ಕೆ ಮಾಡಿಕೊಂಡು “Select season/ಋತು ಆಯ್ಕೆ ಮಾಡಿ ” Calamity Type/ವಿಪತ್ತಿನ ವಿಧ ಹಾಗೂ

Step-3: ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಸೆಲೆಕ್ಟ್ ಮಾಡಿಕೊಂಡು Get Report/ವರದಿ ಪಡೆಯಿರಿ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯಲ್ಲಿ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಹರಿರುವ/ ಹಣ ಜಮಾ ಅಗಿರುವ ರೈತರ ಪಟ್ಟಿ ತೋರಿಸುತ್ತದೆ ಇದರಲ್ಲಿ ನಿಮ್ಮ ಹೆಸರು ಇರುವುದನ್ನು ಗುರುತಿಸಿ ಅದರ ಮುಂದಿನ ಕಾಲಂ ನಲ್ಲಿ ಎಷ್ಟು ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ನೋಡಬಹುದು.