ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ(village administrative officer karnataka) ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ಇಲಾಖೆಯಿಂದ ಹೊಸ ಪ್ರಕಟಣೆಯನ್ನು ಹೊರಡಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ(Village Administrative Officer Recruitment) ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ದಾವಣಗೆರೆ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪತ್ರ ಹೊರಡಿಸಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಸಲ್ಲಿಸಿ ಪರೀಕ್ಷೆಯನ್ನು ಪೂರ್ಣಗೊಳಿಸಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇಲಾಖೆಯಿಂದ ಸಿಹಿ ಸುದ್ದಿಯನ್ನು ನೀಡಿದ್ದು ನೇಮಕಾತಿ ಆದೇಶ ಹೊರಡಿಸಲು ಮತ್ತು ಇನ್ನಿತರೆ ನೇಮಕಾತಿ ಪೂರಕ ಕ್ರಮಗಳನ್ನು ಜಿಲ್ಲಾಧಿಕಾರಿಗಳು ತೆಗೆದುಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
ಇದನ್ನೂ ಓದಿ: Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!
Village Administrative Officer-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಸಲ್ಲಿಸಿದವರ ವಿವರ ಹೀಗಿದೆ:
ಇಲಾಖೆಯಿಂದ ಹೊರಡಿಸಿರುವ ಆದೇಶದಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಟ್ಟು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದರಿ ಅಭ್ಯರ್ಥಿಗಳಿಗೆ ದಿನಾಂಕ: 29-09-2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿ ಸದರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಒಟ್ಟು 4,16,459 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೇನೆನಿ 2024 ದಿನಾಂಕ: 10-09-2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ
ಪಸ್ತಾಪಿತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಲಾಗಿರುತ್ತದೆ. ಅದರಂತೆ ಒಟ್ಟು 62,927 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ:26.10.2024 ರಂದು ಕಡ್ಡಾಯ ಕನ್ನಡ ಮತ್ತು ಒಟ್ಟು 4,79,386 ಅಭ್ಯರ್ಥಿಗಳಿಗೆ ದಿನಾಂಕ:27.10.2024 ರಂದು ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕೆ -1 ಮತ್ತು ಪತ್ರಿಕೆ -2 ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: Free Scooty Yojana Fact Check-ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಸ್ಕೂಟಿ ಯೋಜನೆ! ಇಲ್ಲಿದೆ ಅಧಿಕೃತ ಮಾಹಿತಿ!
ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಹೊರಡಿಸಲು ಇಲಾಖೆಯಿಂದ ನಿಗದಿಪಡಿಸಿದ ವೇಳಾಪಟ್ಟಿ:
ದಿನಾಂಕ | ವಿವರ |
ದಿನಾಂಕ: 20 ಡಿಸೆಂಬರ್ 2024 ರಿಂದ 24 ಡಿಸೆಂಬರ್ 2024 ರವರೆಗೆ | ಅಧಿಸೂಚನೆಯಲ್ಲಿ ನಿಗಧಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ದಾಖಲೆ ಪರಿಶೀಲನೆಗಾಗಿ ಪ್ರಕಟಿಸುವುದು. |
ದಿನಾಂಕ: 02 ಜನವರಿ 2025 ರಿಂದ 10 ಜನವರಿ 2025 ರವರೆಗೆ | 1:3 ಅನುಪಾತದಲ್ಲಿನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಮತ್ತು ವಿಕಲ ಚೇತನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸುವುದು. |
ದಿನಾಂಕ: 15 ಜನವರಿ 2025 | ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸುವುದು. |
ದಿನಾಂಕ: 16 ಜನವರಿ 2025 ರಿಂದ 23 ಜನವರಿ 2025 ರವರೆಗೆ | ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸುವುದು. |
ದಿನಾಂಕ: 27 ಜನವರಿ 2025 | ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸುವುದು. |
ಇದನ್ನೂ ಓದಿ: Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!
ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಲ್ಲಿ ನಿರ್ದೇಶಿಸಿರುವಂತೆ, ಅರ್ಹತೆ ಹೊಂದಲು ಅಭ್ಯರ್ಥಿಗಳು ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳು ಮತ್ತು ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಶೇ. 35 ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಿರುತ್ತದೆ ಹಾಗೂ ಪ್ರತಿ ತಪ್ಪು ಉತ್ತರಕ್ಕೆ ¾ ಅಂಕಗಳನ್ನು ಋಣಾತ್ಮಕ ಮೌಲ್ಯಮಾಪನ ಮಾಡಿರುವುದರಿಂದ, 30 ಜಿಲ್ಲೆಗಳ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಒಟ್ಟು 45,933 ಅಭ್ಯರ್ಥಿಗಳು ಅರ್ಹತೆ ಪಡೆದಿರುತ್ತಾರೆ.
ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರಂತೆ ಅರ್ಹತೆ ವಡೆದಿರುವ ಒಟ್ಟು 45,933 ಅಭ್ಯರ್ಥಿಗಳ ಪೈಕಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 13 ಅನುಪಾತದಂತೆ ದಾಖಲಾತಿ ಪರಿಶೀಲನೆಗೆ ಆಹ್ವಾನಿಸಿ,
ಇದನ್ನೂ ಓದಿ: Ration card-ಪಡಿತರ ಚೀಟಿಗೆ ಹೆಂಡತಿ ಮತ್ತು ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!
ದಾಖಲಾತಿ ಪರಿಶೀಲಿಸಿ 1:1 ಅನುಪಾತದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಅವಕಾಶ ನೀಡಿ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ಸಿಂಧುತ್ವ ಪ್ರಮಾಣ ಪತ್ರ ಮತ್ತು ಪೊಲೀಸ್ ವರದಿ, PUC/12ನೇ ತರಗತಿ ಅಂಕ ಪಟ್ಟಿಯ ನೈಜತೆಯನ್ನು ಪರಿಶೀಲಿಸಿಕೊಂಡು ನೇಮಕಾತಿ ಅದೇಶ ನೀಡಲು ಈ ಕೆಳಕಂಡ ವೇಳಾ ಪಟ್ಟಿಯಂತೆ ಕಡ್ಡಾಯವಾಗಿ ಕ್ರಮವಹಿಸುವಂತೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ.
ಅಧಿಕೃತ ಆದೇಶದ ಪ್ರತಿಗಳು:
ಇದನ್ನೂ ಓದಿ: Gold Rate India-ಇಲ್ಲಿದೆ ಇಂದಿನ ಚಿನ್ನದ ದರ! ಇಂದು ವಿವಿಧ ನಗರಗಳಲ್ಲಿ ಮತ್ತು ವಿದೇಶದಲ್ಲಿ ಚಿನ್ನದ ದರ ಎಷ್ಟಿದೆ?