ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್.ಡಿ(PhD Scholarship Application) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾಸಿಕ ₹10,000 ರೂ ವ್ಯಾಸಂಗ ವೇತನ/ ಫೆಲೋಶಿಪ್ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ? ಯಾರೆಲ್ಲಾ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ? ಅಭ್ಯರ್ಥಿಯ ಆಯ್ಕೆ ವಿಧಾನ ಹೇಗಿರುತ್ತದೆ? ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿಗದಿಪಡಿಸಿರುವ ಅರ್ಹತೆಗಳೇನು? ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಸಹಿತ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದ್ದು ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಇದನ್ನೂ ಓದಿ: Bus Ticket Price- ಬಸ್ ಟಿಕೆಟ್ ದರದಲ್ಲಿ ಶೇ 15% ಏರಿಕೆ! ಇಲ್ಲಿದೆ ಟಿಕೆಟ್ ದರ ವಿವರ!
PhD Scholarship Amount-ಎಷ್ಟು ವ್ಯಾಸಂಗ ವೇತನ/ಫೆಲೋಶಿಪ್ ಪಡೆಯಬಹುದು?
ಒಟ್ಟು 3 ವರ್ಷಗಳ ಅವಧಿಗೆ ಪ್ರತಿ ತಿಂಗಳು ರೂ.10,000 ವ್ಯಾಸಂಗ ವೇತನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತದೆ.
PhD Monthly Fellowship Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
20 ಜನವರಿ 2025 ರ ಸಂಜೆ 5.30 ಗಂಟೆ
ಇದನ್ನೂ ಓದಿ: Togari bembala bele-ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ! ದರ ಎಷ್ಟು?
Phd fellowship eligibility-ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು:
A) ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ- I, II(ಎ), III(ಎ) ಅಥವಾ III(ಬಿ) ಗೆ ಸೇರಿರಬೇಕು.
B) ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಕರ್ನಾಟಕದಲ್ಲಿರುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ (Full Time) ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
C) ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
D) ಅಭ್ಯರ್ಥಿಗಳು ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನಕ್ಕಾಗಿ ಮಾಡಿಸಿರುವ ನೋಂದಾಣಿ ದಿನಾಂಕವು, ಹಿಂದುಳಿದ ವರ್ಗಗಳ ಕಲಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿರಬೇಕು.
ಇದನ್ನೂ ಓದಿ: Ration Card Application-ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!
Age Limit-ಅರ್ಜಿ ಸಲ್ಲಿಸಲು ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು(ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಅನ್ವಯಿಸುವಂತೆ).
How to Apply-ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಆಫ್-ಲೈನ್ ಮೂಲಕ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವುದು. ಅಭ್ಯರ್ಥಿಗಳು ತಾವು ಪಿಎಚ್.ಡಿ ಅಧಯನ ಮಾಡುತ್ತಿರುವ ವಿಶ್ವವಿದ್ಯಾಲಯ/ಸಂಸ್ಥೆ ಇರುವಂತಹ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಇದನ್ನು ಸಲ್ಲಿಸುವುದು. ಅರ್ಜಿ ನಮೂನೆ ಡೌನ್ಲೋಡ್ ಲಿಂಕ್ ಈ ಅಂಕಣದ ಕೊನೆಯಲ್ಲಿ ಹಾಕಲಾಗಿದೆ.
ಇದನ್ನೂ ಓದಿ: Ration Card list-ಆಹಾರ ಇಲಾಖೆಯಿಂದ ಪರಿಷ್ಕೃತ ಪಡಿತರ ಚೀಟಿದಾರರ ಪಟ್ಟಿ ಬಿಡುಗಡೆ!
Documents-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು:
1) SSLC ಅಂಕಪಟ್ಟಿ
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3) ವಾಸಸ್ಥಳ ಪ್ರಮಾಣ ಪತ್ರ
4) ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳು
5) ಪಿಹೆಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿರುವ 6) ಬಗ್ಗೆ ವಿಶ್ವವಿಧ್ಯಾಲಯ/ಆಧಿಕೃತ ಸಂಸ್ಥೆಯಿಂದ ಪ್ರಮಾಣ ಪತ್ರ
7) ಬ್ಯಾಂಕ್ ಖಾತೆ ವಿವರ
8) ಆಧಾರ್ ಕಾರ್ಡ ಪ್ರತಿ
9) ಪೋಟೋ-2
10) 100 ರೂ ಛಾಪಾ ಕಾಗದ
ಇದನ್ನೂ ಓದಿ: Land ownership act-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಲು ಕಾನೂನು ಏನು ಹೇಳುತ್ತದೆ?
Selection Procces-ಅಭ್ಯರ್ಥಿ ಆಯ್ಕೆ ವಿಧಾನ:
ಸ್ನಾತಕೋತ್ತರ ಪದವಿಯಲ್ಲಿ ಪಡೆದಿರುವ ಅಂಕಗಳು, ಪ್ರವರ್ಗವಾರು ಮೀಸಲಾತಿ ಹಾಗೂ ಅನುದಾನ ಲಭ್ಯತೆಗೆ ಅನುಗುಣವಾಗಿ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Application Download link-ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಲು ಲಿಂಕ್- Download Now
ಮುಚ್ಚಳಕೆ ಪತ್ರ ಡೌನ್ಲೋಡ್ ಮಾಡಲು ಲಿಂಕ್- Download Now
Helpline-ಸಹಾಯವಾಣಿ ಸಂಖ್ಯೆ: 8050770004 (ಕಛೇರಿ ಕಾರ್ಯನಿರ್ವಹಿಸುವ ಸಮಯ ಬೆಳಗ್ಗೆ 10.00 ರಿಂದ ಸಂಜೆ 05.30 ರವರೆಗೆ)