ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ನಮಸ್ಕಾರಗಳು ಇಂದಿನ ಈ ಅಂಕಣದಲ್ಲಿ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ(Voter Id List) ಸಾರ್ವಜನಿಕರು ತಮ್ಮ ಹೆಸರನ್ನು ಇರುವುದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಹಾಗೂ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡುವುದು ಮತ್ತು ತಿದ್ದುಪಡಿ ಮಾಡಿಕೊಳ್ಳುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ.
ಸಾರ್ವಜನಿಕರು ಅಧಿಕೃತ Voter ತಂತ್ರಾಂಶವನ್ನು ಭೇಟಿ ಮಾಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ತಮ್ಮ ಮೊಬೈಲ್ ನಲ್ಲೇ ಖಚಿತಪಡಿಸಿಕೊಳ್ಳಬಹುದು ಇದಲ್ಲದೇ ಪಟ್ಟಿಯಲ್ಲಿ ನಮೂದಿಸಿರುವ ವಿವರಗಳಲ್ಲಿ ಯಾವುದೇ ಬಗ್ಗೆ ತಿದ್ದುಪಡಿ ಇದ್ದಲ್ಲಿಯೂ ಸಹ ಆನ್ಲೈನ್ ಮೂಲಕವೇ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!
Voter Id List-2025: ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ:
ಮತದಾರರ ಗುರುತಿನ ಚೀಟಿಯನ್ನು ಹೊಂದಿರುವವರು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದಿಯೋ ಇಲ್ಲವೋ ಎಂದು ಪರೀಶಿಲನೆ ಮಾಡಿಕೊಳ್ಳಬಹುದು.
Step-1: ಮೊದಲಿಗೆ ಈ Voter Id List-2025 ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಮತದಾರ ಐಡಿಯ ಜಾಲತಾಣವನ್ನು ಪ್ರವೇಶ ಮಾಡಬೇಕು.
Step-2: ಇದಾದ ಬಳಿಕ ಈ ಪೇಜ್ ನಲ್ಲಿ ಒಟ್ಟು ಮೂರು(3) ಆಯ್ಕೆಗಳು ತೋರಿಸುತ್ತವೆ 1)Search by EPIC 2) Search by Details 3) Search by Mobile ಇದರಲ್ಲಿ ಯಾವುದಾದರು ಒಂದನ್ನು ಆಯ್ಕೆ ಮಾಡಿಕೊಂಡು ಮುಂದುವರೆಯಬೇಕು.
ವಿಶೇಷ ಸೂಚನೆಗಳು: 1)Search by EPIC ನಂಬರ್ ಎಂದರೆ ಮತದಾರ ಗುರುತಿನ ಚೀಟಿಯನ್ನು ಸಂಖ್ಯೆಯ ಆಧಾರದ ಮೇಲೆ ಹುಡುಕುವುದು 2) Search by Details ಎಂದರೆ ನಿಮ್ಮ ಹೆಸರು, ವಿಳಾಸ ಮತ್ತು ಹುಟ್ಟಿದ ದಿನಾಂಕ ನಮೂದಿಸಿ ಹುಡುಕುವುದು 3) Search by Mobile ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವಾಗ ಸಲ್ಲಿಸಿರುವ ಮೊಬೈಲ್ ನಂಬರ್ ಅನ್ನು ಹಾಕಿ ಹುಡುಕುವುದು ಎಂದರ್ಥ.
ಇದನ್ನೂ ಓದಿ: Gruhalakshmi 16th installment-ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!
Step-3: ಎರಡನೇಯ ಆಯ್ಕೆ “Search by Details” ಮೇಲೆ ಕ್ಲಿಕ್ ಮಾಡಿ ರಾಜ್ಯ/State , Select Language ಆಯ್ಕೆಯಲ್ಲಿ ಕನ್ನಡ ಎಂದು ಸೆಲೆಕ್ಟ್ ಮಾಡಿಕೊಂಡು ಕೆಳಗೆ ಕಾಣುವ “Name” ಕಾಲಂ ನಲ್ಲಿ ನಿಮ್ಮ ಹೆಸರನ್ನು ನಮೂದಿಸಿ ಇತರೆ ಕಾಲಂ ಗಳಲ್ಲಿ ಕೇಳಿರುವ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ ನಿಮ್ಮ ಜಿಲ್ಲೆ/District ಅನ್ನು ಆಯ್ಕೆ ಮಾಡಿಕೊಂಡು ಇಲ್ಲೇ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ “Serach” ಬಟನ್ ಮೇಲೆ ಕ್ಲಿಕ್ ಮಾಡಿದರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ವಿವರ ಈ ಕೆಳಗೆ ತೋರಿಸುತ್ತದೆ.
Voter Id Application-ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶ:
2) 18 ವರ್ಷ ತುಂಬಿರುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.
3) ಈಗಾಗಲೇ ಮತದಾರರ ಚೀಟಿಯನ್ನು ಹೊಂದಿರುವವರು ವಿಳಾಸ ಮತ್ತು ಇನ್ನಿತರೆ ವಿವರ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು.
4) ಮೃತಪಟ್ಟವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಸಹ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!
How To Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಲು ಮತ್ತು ತಿದ್ದುಪಡಿ ಮಾಡಿಸಲು ಅರ್ಹ ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ನೇರವಾಗಿ ಅಧಿಕೃತ Voter ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು.
Voter Id Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now
Required Documents For Voter ID- ಅರ್ಜಿ ಸಲ್ಲಿಸಲು ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
2) ಮೊಬೈಲ್ ನಂಬರ್.
3) ವಿಳಾಸ ಪೂರಾವೆ ಗುರುತಿನ ಚೀಟಿ/ಪಾನ್ ಕಾರ್ಡ/ಬ್ಯಾಂಕ್ ಪಾಸ್ ಬುಕ್ ಪ್ರತಿ ಇತ್ಯಾದಿ.
4) ಜನ್ಮ ದಿನಾಂಕ ದೃಡೀಕರಣ.