ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮಾರ್ಗಸೂಚಿ ಪ್ರಕಾರ ಕೆಲವು ಆಯ್ದ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara Amount) ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರದ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಸಲಾಗಿದೆ.
ಕೃಷಿ ಮತ್ತು ಕಂದಾಯ ಇಲಾಖೆಯ ಸಹಯೋಗದಲ್ಲಿ(Bele Parihara) ರೈತರು ಬೆಳೆದ ಬೆಳೆಯು ಅಕಾಲಿಕ ಮಳೆಯಿಂದ ಹಾಗೂ ಇನ್ನಿತರ ಪ್ರಕೃತಿ ವಿಕೋಪಗಳಿಂದ ಹಾನಿಯಾದ ಸಂದರ್ಭದಲ್ಲಿ ಈ ಎರಡು ಇಲಾಖೆಯ ಅಧಿಕಾರಿಗಳು ಸ್ಥಳ ಭೇಟಿ ಮಾಡಿ ಜಂಟಿ ಸಮೀಕ್ಷೆಯನ್ನು ಮಾಡಿಕೊಂಡು ಅರ್ಹ ರೈತರಿಂದ ಅರ್ಜಿಯನ್ನು ಸಂಗ್ರಹಣೆ ಮಾಡಿ NDRF ಮಾರ್ಗಸೂಚಿ ಪ್ರಕಾರ ಬೆಳೆ ಪರಿಹಾರವನ್ನು ಒದಗಿಸಲಾಗುತ್ತದೆ.
ಪ್ರಸ್ತುತ ಯಾವ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ? ಇನ್ನುಳಿದ ಜಿಲ್ಲೆಯ ರೈತರು ಬೆಳೆ ಹಾನಿ(Bele Hani Parihara) ಪರಿಹಾರದ ಅರ್ಜಿ ಸ್ಥಿತಿಯನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: Voter Id List-ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!
Bele Parihara Amount-2025: ಈ ಜಿಲ್ಲೆಯ ರೈತರ ಖಾತೆಗೆ ₹48.45 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ:
ಕಂದಾಯ ಇಲಾಖೆಯಿಂದ Parihara ತಂತ್ರಾಂಶದಲ್ಲಿ ದಾಖಲಿಸಿದ ಅರ್ಹ ರೈತರ ಖಾತೆಗೆ ಧಾರವಾಡ ಜಿಲ್ಲಾಡಳಿತದಿಂದ ₹48.45 ಕೋಟಿ ಬೆಳೆ ಹಾನಿ ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಜಿಲ್ಲಾಡಳಿತದಿಂದ ಬೆಳೆ ಹಾನಿಯಾದ(Bele Hani) ಕುರಿತು ಪರಿಹಾರ ತಂತ್ರಾಂಶದಲ್ಲಿ ವಿವರ ದಾಖಲಿಸಿದ ಅರ್ಹ ರೈತರಿಗೆ ಮೊದಲ ಮತ್ತು ಎರಡನೇ ಹಂತದಲ್ಲಿ ಒಟ್ಟು 69,573 ರೈತರ ಬ್ಯಾಂಕ್ ಖಾತೆಗೆ ನೇರವಾಗಿ ₹48.45 ಕೋಟಿ ಬೆಳೆ ಹಾನಿ ಪರಿಹಾರವನ್ನು ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಓದಿ: E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!
ತಾಲ್ಲೂಕುವಾರು ರೈತರ ಅಂಕಿ ಅಂಶ:
ದಾರವಾಡ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಹಣ ಪಡೆದ ರೈತರ ಅಂಕಿ-ಅಂಶದ ವಿವರ ಹೀಗಿದೆ ಅಳ್ನಾವರ- 69, ಹುಬ್ಬಳಿ- 8,616, ಹುಬ್ಬಳಿ ನಗರ- 741, ಕುಂದಗೋಳ ನವಲಗುಂದ, ಅಣ್ಣಿಗೇರಿ ಸೇರಿ ಎರಡು ಹಂತದಲ್ಲಿ ಒಟ್ಟು ಏಳು ತಾಲ್ಲೂಕುಗಳಿಗೆ 69,573 ಫಲಾನುಭವಿಗಳಿಗೆ 55 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೆ ಪರಿಹಾರವನ್ನು ಜಮಾ ಮಾಡಲಾಗಿದೆ.
Bele Parihara Status- ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ಪರಿಹಾರದ ಜಮಾ ವಿವರ ತಿಳಿಯುವ ವಿಧಾನ:
ರೈತರು ತಮ್ಮ ಮೊಬೈಲ್ ನಲ್ಲಿ ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶವನ್ನು ಭೇಟಿ ಮಾಡಿ ಈ ಕೆಳಗಿನ ಹಂತಗಳನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರದ ಹಣ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ: Gruhalakshmi 16th installment-ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!
Step-1: ಪ್ರಥಮದಲ್ಲಿ ಈ ಲಿಂಕ್ Bele Parihara Status Check ಮೇಲೆ ಕ್ಲಿಕ್ ಮಾಡಿ ಅಧಿಕೃತ ಪರಿಹಾರ ತಂತ್ರಾಂಶವನ್ನು ಪ್ರವೇಶ ಮಾಡಬೇಕು.
Step-2: ಇದಾದ ಬಳಿಕ ಈ ತಂತ್ರಾಂಶದ ಮುಖಪುಟ ತೆರೆದುಕೊಳ್ಳುತ್ತದೆ ಇಲ್ಲಿ ಎಡಬದಿಯಲ್ಲಿ ಕೆಳಗೆ ಕಾಣುವ “Village Wise List” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ಮೇಲಿನ ಹಂತಗಳನ್ನು ಪೂರ್ಣಗೊಳಿಸಿದ ಬಳಿಕ “Parihara Payment Report” ಪೇಜ್ ಒಪನ್ ಅಗುತ್ತದೆ ಇಲ್ಲಿ ವರ್ಷ ಮತ್ತು ಋತು, ವಿಪತ್ತಿನ ವಿಧ, ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿ ಹೆಸರನ್ನು ಸೆಲೆಕ್ಟ್ ಮಾಡಿಕೊಂಡು “Get Report/ವರದಿ ಪಡೆಯಿರಿ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
Step-4: ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ನಂತರ “ಇನ್ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Payment Details” ಪೇಜ್ ಒಪನ್ ಅಗುತ್ತದೆ ಇಲ್ಲಿ ನಿಮ್ಮ ಹಳ್ಳಿಯಲ್ಲಿ ಯಾರಿಗೆಲ್ಲ ಬೆಳೆ ಹಾನಿ ಪರಿಹಾರದ ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿ ತೋರಿಸುತ್ತದೆ.
ಇಲ್ಲಿ ತೋರಿಸುವ ಪಟ್ಟಿಯಲ್ಲಿ ರೈತರ ಹೆಸರು, ಹಾನಿಯಾದ ಜಮೀನಿನ ವಿವರ, ಪರಿಹಾರ ಜಮಾ ಅದ ದಿನಾಂಕ, ಎಷ್ಟು ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ನೋಡಬಹುದು.
ಇದನ್ನೂ ಓದಿ: Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!
ವಿಧಾನ-2: DBT Karnataka ಮೊಬೈಲ್ ಅಪ್ಲಿಕೇಶನ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು:
ಬೆಳೆ ಹಾನಿಯಾಗಿ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಿದ ರೈತರು ತಮಗೆ ಪರಿಹಾರದ ಹಣ ಜಮಾ ಅಗಿದಿಯೋ? ಅಥವಾ ಇಲ್ಲವೋ? ಎನ್ನುವ ಮಾಹಿತಿಯನ್ನು ರಾಜ್ಯ ಸರಕಾರದಡಿ ಬರುವ ಇ-ಆಡಳಿತ ಇಲಾಖೆಯಿಂದ ಬಿಡುಗಡೆ ಮಾಡಿರುವ DBT Karnataka App ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಮೊಬೈಲ್ ನಲ್ಲೇ ಪರಿಹಾರದ ಹಣ ಜಮಾ ವಿವರವನ್ನು ಪಡೆಯಬಹುದು.
Step-1: ಮೊದಲಿಗೆ ಇಲ್ಲಿ ಕ್ಲಿಕ್ DBT Karnataka ಮಾಡಿ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Step-2: ಬಳಿಕ ನಿಮ್ಮ 12 ಅಂಕಿಯ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು ಈ ಅಪ್ಲಿಕೇಶನ್ ಗೆ ಲಾಗಿನ್ ಅಗಬೇಕು.
Step-3: ಈ ಅಪ್ಲಿಕೇಶನ್ ಗೆ ಲಾಗಿನ್ ಅಗಿ “ಪಾವತಿ ಸ್ಥಿತಿ/Payment Status” ಬಟನ್ ಮೇಲೆ ಕ್ಲಿಕ್ ಮಾಡಿ “ಇನ್ಪುಟ್ ಸಬ್ಸಿಡಿ” ಬಟನ್ ಮೇಲೆ ಕ್ಲಿಕ್ ಮಾಡಿದರೆ ಬೆಳೆ ಹಾನಿ ಪರಿಹಾರದ ಹಣ ಜಮಾ ವಿವರವನ್ನು ಮನೆಯಲ್ಲೇ ಕುಳಿತು ಪಡೆಯಬಹುದು.