ರಾಜ್ಯ ಸರಕಾರದಿಂದ ಪೋಲಿಸ್ ಇಲಾಖೆಯ ನೇರ ನೇಮಕಾತಿಯಲ್ಲಿನ ಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ(Police Department Recruitment) ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು, ಈ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.
ಪೊಲೀಸ್ ಇಲಾಖೆಯ ನೇರ ನೇಮಕಾತಿಯ(Karnataka Police Department) ಕಾನ್‌ಸ್ಟೇಬಲ್‌ನಿಂದ ಹಿಡಿದು ಡಿವೈಎಸ್‌ಪಿ ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ನೂತನ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: Annabhagya Amount- ಜನವರಿ-2025 ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!
ರಾಜ್ಯ ಸರಕಾರದಿಂದ 30 ಜನವರಿ 2025 ರಂದು ಬೆಂಗಳೂರಿನಲ್ಲಿ ನಡೆದ ಸಂಪುಟ ಸಭೆಯಲ್ಲಿ ಪೋಲಿಸ್ ಇಲಾಖೆಯ ನೇರ ನೇಮಕಾತಿಯಲ್ಲಿನ(Police Department Jobs) ಮೀಸಲಾತಿ ಕುರಿತು ಮತ್ತು ಇನ್ನಿತರೆ ಇಲಾಖೆಯ/ಯೋಜನೆಯಗಳ ಕುರಿತು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು, ಇವುಗಳ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.
Police Department Recruitment-ಮೀಸಲಾತಿಯನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ನಿರ್ಧಾರ:
ಪೊಲೀಸ್ ಇಲಾಖೆಯ ನೇರ ನೇಮಕಾತಿಯ ಕಾನ್‌ಸ್ಟೇಬಲ್‌ನಿಂದ ಹಿಡಿದು ಡಿವೈಎಸ್‌ಪಿ ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್‌ಸ್ಟೇಬಲ್‌ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇದನ್ನೂ ಓದಿ: Milk Price-ರೈತರಿಗೆ ಸಿಹಿ ಸುದ್ದಿ! ಹಾಲಿದ ದರ ಹೆಚ್ಚಳ ಮಾಡಿದ ಕೆ ಎಂ ಎಫ್!
ಡಿವೈಎಸ್‌ಪಿ ಹುದ್ದೆಯ ವಯೋಮಿತಿ ಕಾಲಂನಲ್ಲಿ ಎಸ್‌ಸಿ/ಎಸ್‌ಟಿ ಹಾಗೂ ಕೆಟಗರಿ-1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಪೊಲೀಸ್ ಕಾನ್ಸ್ಟೇಬಲ್, ಪೊಲೀಸ್ ಸಬ್-ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರ ಹುದ್ದೆಗೆ ಪ್ರತಿಭಾವಂತ ಕ್ರೀಡಾಪಡುಗಳ ನೇರ ನೇಮಕಾತಿ) (ವಿಶೇಷ) (ತಿದ್ದುಪಡಿ) ನಿಯಮಗಳು 2025ರ ಕರಡು ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿತ್ತು.
Karnataka Cabinet-ಈ ಸಂಪುಟ ಸಭೆಯಲ್ಲಿ ತೆಗೆದುಕೊಂಡು ಇತರೆ ಪ್ರಮುಖ ನಿರ್ಣಯಗಳು ಹೀಗಿವೆ:
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿರುವ ಅಕ್ಷಯ ಫುಡ್ ಪಾರ್ಕ್ ಸಂಪರ್ಕಿಸಲು ನಾಲ್ಕು ಪಥಗಳ ರಸ್ತೆ ನಿರ್ಮಾಣ ಕಾಮಗಾರಿಯನ್ನು 120 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ.
ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ₹44.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
ಇದನ್ನೂ ಓದಿ: Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?
ಹೊಂಬೆಳಕು ಯೋಜನೆಯಡಿ ರಾಜ್ಯದ 50 ಗ್ರಾಮ ಪಂಚಾಯಿತಿಗಳಲ್ಲಿ 125 ಕೋಟಿ ವೆಚ್ಚದಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸಲು ಅಡಳಿತಾತ್ಮಕ ಅನುಮೋದನೆ.
ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯಡಿ ₹304 ಕೋಟಿ ವೆಚ್ಚದಲ್ಲಿ 19 ಮೊರಾರ್ಜಿ ವಸತಿ ಶಾಲೆಗಳ ನಿರ್ಮಾಣಕ್ಕೆ ತೀರ್ಮಾನ.
ಪ್ರಧಾನ ಮಂತ್ರಿ ಜನವಿಕಾಸ ಕಾರ್ಯಕ್ರಮದಡಿ ₹191 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ 12 ವಸತಿ ಶಾಲೆ / ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ನಿರ್ಧಾರ.
ಇದನ್ನೂ ಓದಿ: Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!
ಬೀದರ್ ನಗರಸಭೆ ವ್ಯಾಪ್ತಿಗೆ ಒಟ್ಟು 16 ಗ್ರಾಮಗಳನ್ನು ಹೊಸದಾಗಿ ಸೇರ್ಪಡೆಗೊಳಿಸಿ ಇದನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು &கரி
ಬೆಳಗಾವಿ ಜಿಲ್ಲೆಯ ಅಥಣಿ ಪುರಸಭೆಯ ಮಾಲ್ಕಿಯ ಜೋಡುಕೆರೆಯನ್ನು ಅಭಿವೃದ್ಧಿಪಡಿಸಿ ಕೆರೆಯ ಸೌಂದರ್ಯವನ್ನು ಹೆಚ್ಚಿಸಿ ಆಕರ್ಷಕ ಪ್ರವಾಸಿ ತಾಣವಾಗಿ ಪರಿವರ್ತಿಸುವ ₹15 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ದಿನಾಂಕ 20.01.2025 ರಂದು ಹೊರಡಿಸಿರುವ ಅಧ್ಯಾದೇಶ – 2025 ಅನ್ನು ಅನುಷ್ಠಾನಗೊಳಿಸಲು ತೀರ್ಮಾನ.
ಕರ್ನಾಟಕ ಜಲ ಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮವನ್ನು ವಿಶ್ವಬ್ಯಾಂಕ್‌ನ ನೆರವಿನೊಂದಿಗೆ 15 ಸಾವಿರ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ.