- Advertisment -
HomeGovt SchemesRation Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

ಆಹಾರ ಇಲಾಖೆವತಿಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಪ್ರಕಟವಾಗಿದ್ದು ಸಾಮಾನ್ಯವಾಗಿ ರೇಶನ್ ಕಾರ್ಡ(Ration Card) ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಂಗಳ ಮೊದಲ ಮತ್ತು ಎರಡನೇ ವಾರದಲ್ಲಿ ಅವಕಾಶ ನೀಡಲಾಗಿತ್ತಿತ್ತು ಅದರೆ ಈ ಅವದಿಯನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.

ರೇಶನ್ ಕಾರ್ಡ ಹೊಂದಿರುವ ಗ್ರಾಹಕರು ತಮ್ಮ ಕಾರ್ಡನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಮತ್ತು ಪಡಿತರ ಚೀಟಿಗೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಲು ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳ(Grama one/karnataka one) ಮೂಲಕ ಅರ್ಜಿ ಸಲ್ಲಿಸಲು ಈ ತಿಂಗಲು ನಿಗದಿಪಡಿಸಿದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಆಹಾರ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ತಿಂಗಳಲ್ಲಿ ಎಲ್ಲಿಯವರೆಗೆ ಅವಕಾಶ ನೀಡಲಾಗಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಗ್ರಾಹಕರು ತಮ್ಮ ಅರ್ಜಿಯ ಸ್ಥಿತಿಯನ್ನು ಆನ್ಲೈನ್ ನಲ್ಲಿ ಚೆಕ್ ಮಾಡಿಕೊಳ್ಳುವುದು ಹೇಗೆ? ಇನ್ನಿತರೆ ಅಗತ್ಯ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದ್ದು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಈ ಮಾಹಿತಿಯನ್ನು ಶೇರ್ ಮಾಡಿ ನಮ್ಮ ಪುಟವನ್ನು ಬೆಂಬಲಿಸಿ.

ಇದನ್ನೂ ಓದಿ: Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

Ration Card-ಫೆಬ್ರವರಿ ತಿಂಗಳ ಕೊನೆಯವರೆಗೂ ಅರ್ಜಿ ಸಲ್ಲಿಸಲು ಅವಕಾಶ:

ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ತಮ್ಮ ಕಾರ್ಡನ ವಿವಿಧ ರೀತಿಯ ತಿದ್ದುಪಡಿಗಳಿಗೆ ಅಂದರೆ ಉದಾಹರಣೆ ಹೇಳುವುದಾದರೆ ಕಾರ್ಡನಲ್ಲಿ ನಮೂದಿಸಿರುವ ವಿಳಾಸ ಬದಲಾವಣೆ, ಸದಸ್ಯರ ಹೆಸರುಗಳ ತಿದ್ದುಪಡಿ, ನ್ಯಾಯಬೆಲೆ ಅಂಗಡಿ ಬದಲಾವಣೆ ಸೇರಿದಂತೆ ಇನ್ನಿತರೆ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ-2025 ತಿಂಗಳ ಕೊನೆಯವರೆಗೂ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

Ration card correction-ರೇಶನ್ ಕಾರ್ಡನಲ್ಲಿ ಯಾವೆಲ್ಲ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ:

A) ಪಡಿತರ ಚೀಟಿಯಲ್ಲಿನ ಸದಸ್ಯರ ಹೆಸರಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು.

B) ಕಾರ್ಡಗೆ ಹೊಸ ಸದಸ್ಯರನ್ನು ಸೇರಿಸಲು ಅವಕಾಶ ನೀಡಲಾಗಿದೆ.

C) ಕುಟುಂಬದ ಮುಖ್ಯಸ್ಥರ ಬದಲಾವಣೆ.

D) ನ್ಯಾಯಬೆಲೆ ಅಂಗಡಿ ಬದಲಾವಣೆ.

E) ಪಡಿತರ ಚೀಟಿಯಲ್ಲಿನ ವಿಳಾಸ ಬದಲಾವಣೆ.

ಇದನ್ನೂ ಓದಿ: Yashashwini Card- ಯಶಸ್ವಿನಿ ಕಾರ್ಡ ಪಡೆಯಲು ಕೊನೆಯ ದಿನಾಂಕ ಮುಂದೂಡಿಕೆ!

F) ಸದಸ್ಯರ ಇ-ಕೆವೈಸಿ ಮಾಡಿಕೊಳ್ಳಲು ಸಹ ಅವಕಾಶವಿರುತ್ತದೆ.

G) ಮರಣ ಹೊಂದಿದ ಸದಸ್ಯರನ್ನು ಕಾರ್ಡನಿಂದ ತೆಗೆದುಹಾಕಲು ಸಹ ಅರ್ಜಿ ಸಲ್ಲಿಸಬಹುದು.

H) ಸದಸ್ಯರ ಪೋಟೋ ಬದಲಾವಣೆಗೆ ಅವಕಾಶವಿರುತ್ತದೆ.

ಇದನ್ನೂ ಓದಿ: Lineman Job- ಏಪ್ರಿಲ್ ಅಂತ್ಯಕ್ಕೆ 3 ಸಾವಿರ ಲೈನ್‌ಮೆನ್‌ ನೇಮಕ: ಕೆ ಜೆ ಜಾರ್ಜ್

How to apply-ಪಡಿತರ ಚೀಟಿ ತಿದ್ದುಪಡಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು?

ಪಡಿತರ ಚೀಟಿಯ ತಿದ್ದುಪಡಿಗೆ ಮತ್ತು ಇನ್ನಿತರೆ ಸೇವೆಗಳಿಗೆ ಅರ್ಜಿ ಸಲ್ಲಿಸಲು ಗ್ರಾಹಕರು ತಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Documents For Ration Card Application-ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು:

ಪಡಿತರ ಚೀಟಿಗೆ ಹೊಸ ಸದಸ್ಯರನ್ನು ಸೇರಿಸಲು ಅರ್ಜಿದಾರರ ಆಧಾರ್ ಕಾರ್ಡ ಪ್ರತಿ ಮತ್ತು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಕುಟುಂಬದ ರೇಶನ್ ಕಾರ್ಡ ಪ್ರತಿ ಸಲ್ಲಿಸಬೇಕಾಗುತ್ತದೆ.

ಮಕ್ಕಳನ್ನು ಪಡಿತರ ಚೀಟಿಗೆ ಸೇರಿಸಲು 6 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ ಮತ್ತು ಆಧಾರ್ ಕಾರ್ಡ ಪ್ರತಿ ಒದಗಿಸಬೇಕು. 6 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಈ ಮೇಲಿನ ತಿದ್ದುಪಡಿಗಳನ್ನು ಹೊರತುಪಡಿಸಿ ಇನ್ನಿತರೆ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ಆಧಾರ್ ಕಾರ್ಡ ಪ್ರತಿ ಮತ್ತು ಕುಟುಂಬ ರೇಶನ್ ಕಾರ್ಡ ಮತ್ತು ಮೊಬೈಲ್ ನಂಬರ್ ಅನ್ನು ಒದಗಿಸಬೇಕು.

ಇದನ್ನೂ ಓದಿ: Yashashwini Card- ಯಶಸ್ವಿನಿ ಕಾರ್ಡ ಪಡೆಯಲು ಕೊನೆಯ ದಿನಾಂಕ ಮುಂದೂಡಿಕೆ!

Ration Card Application Status-ಆನ್ಲೈನ್ ನಲ್ಲಿ ಪಡಿತರ ಚೀಟಿಯ ತಿದ್ದುಪಡಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳುವ ವಿಧಾನ ಹೀಗಿದೆ:

ಪಡಿತರ ಚೀಟಿ ಹೊಂದಿರುವ ಗ್ರಾಹಕರು ಒಮ್ಮೆ ಗ್ರಾಮ ಒನ್ ಇನ್ನಿತರೆ ಕೇಂದ್ರಗಳನ್ನು ಭೇಟಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ಈ ಕೆಳಗಿನ ವಿಧಾನವನ್ನು ಅನುಸರಿಸಿ ಆಹಾರ ಇಲಾಖೆಯ ಜಾಲತಾಣವನ್ನು ಭೇಟಿ ಮಾಡಿ ಚೆಕ್ ಮಾಡಿಕೊಳ್ಳಬಹುದಾಗಿದೆ.

Step-1: Ration Card Application Status ಈ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಆಹಾರ ಇಲಾಖೆಯ ಜಾಲತಾಣವನ್ನು ಪ್ರವೇಶ ಮಾಡಬೇಕು.

Ration Card status

Step-2: ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿದ ಬಳಿಕ ಈ ಪುಟದ ಎಡಬದಿಯಲ್ಲಿ ಕಾಣುವ “menu” ಬಟನ್ ಮೇಲೆ ಕ್ಲಿಕ್ ಮಾಡಿ “e-status” ಬಟನ್ ಮೇಲೆ ಕ್ಲಿಕ್ ಮಾಡಿ “Amendment Requests Status” ಆಯ್ಕೆ ವಿಭಾಗದಲ್ಲಿ ನಿಮ್ಮ ಜಿಲ್ಲೆಯು ಬರುವ ವಿಭಾದ “Bangalore Region/Mysore Region/Kalaburagi Region” ಮೇಲೆ ಕ್ಲಿಕ್ ಮಾಡಬೇಕು.

Step-3: ಬಳಿಕ ಈ ಪೇಜ್ ನಲ್ಲಿ “Ration Card Amendment Request Status/ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಕುಟುಂಬದ ಪಡಿತರ ಚೀಟಿಯ RC No/ RC ನಂ * ಅನ್ನು ಹಾಕಿ ಕೆಳಗಿನ ಕಾಲಂ ನಲ್ಲಿ ನಿಮ್ಮ ಅರ್ಜಿಯ “Akcnowledgment No/ Akcnowledgment ನಂ” ಅನ್ನು ನಮೂದಿಸಿ “Go” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಪಡಿತರ ಚೀಟಿಯ ತಿದ್ದುಪಡಿ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಪಡೆದುಕೊಳ್ಳಬಹುದು.

- Advertisment -
LATEST ARTICLES

Related Articles

- Advertisment -

Most Popular

- Advertisment -