- Advertisment -
HomeGovt SchemesPhotography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

ರಾಜ್ಯ ಸರಕಾರದಡಿ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಈ ವರ್ಷದಿಂದ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ(Photography Contest) ಹಾಗೂ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಪ್ರದರ್ಶನಕ್ಕೆ ಇರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Photography Contest Prize Money-ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ನಿಗದಿಪಡಿಸಿದ ಬಹುಮಾನದ ಮೊತ್ತ ಹೀಗಿದೆ:

ಛಾಯಾಚಿತ್ರ ಸ್ಪರ್ದೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಬಹುಮಾನವನ್ನು ನಿಗದಿಪಡಿಸಲಾಗಿದ್ದು ಇದರ ಮೊತ್ತದ ವಿವರ ಈ ಕೆಳಗಿನಂತಿದೆ.

ಪ್ರಥಮ ಬಹುಮಾನ- 35,000/- ರೂ.,
ದ್ವಿತೀಯ ಬಹುಮಾನ- 25,000/- ರೂ
ತೃತೀಯ ಬಹುಮಾನ- 15,000/- ರೂ.

Conditions for participation in the competition-ಸ್ಪರ್ಧೆಯಲ್ಲಿ ಭಾಗವಹಿಸಲು ಷರತ್ತುಗಳು:

ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ಜನವರಿ 1, 2024 ರಿಂದ ಜನವರಿ 31, 2025 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ವೀಕರಿಸಲಾಗುವುದು.

ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.

ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.

ಪ್ರತಿ ಸ್ಪರ್ಧಿಯೂ ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ನ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಇದನ್ನೂ ಓದಿ: Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Photography Contest Prize

ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.

ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್‌ಗಳನ್ನು JPEG format ನಲ್ಲಿ ಮಾತ್ರ ಸಲ್ಲಿಸಬೇಕು.

ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು 20”x 30” ಅಳತೆಯಲ್ಲಿ ಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್‌ಗಳು 20”x 30” ಅಳತೆಯ ,300 DPI ನಲ್ಲಿದ್ದು ಕನಿಷ್ಠ 5MB ಗಾತ್ರದಲ್ಲಿರಬೇಕು.

ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.

ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿ ಛಾಯಾಚಿತ್ರಗಳು ಸಹಜವಾಗಿರಬೇಕು.

ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.

ಇದನ್ನೂ ಓದಿ: Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

How To Apply For Photography Contest-ಅರ್ಜಿ ಸಲ್ಲಿಸುವ ವಿಧಾನ:

ಛಾಯಾಚಿತ್ರ ಸ್ಪರ್ದೆಯಲ್ಲಿ ಭಾಗವಹಿಸಲು ಆಸಕ್ತಿಯಿರುವವರು mediaacademy ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನಿಗದಿತ ಅರ್ಜಿಯ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಒದಗಿಸಿ ಜೊತೆಗೆ ಅರ್ಜಿದಾರರ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ ಗಳನ್ನು photo.karnatakamediaacademy@gmail.com ಇ-ಮೇಲ್ ವಿಳಾಸಕ್ಕೆ 2025ನೇ ಫೆಬ್ರವರಿ 15ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ವಿಶೇಷ ಸೂಚನೆ- 15 ಫೆಬ್ರವರಿ 2025ರ ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

Application for photography contest-ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನ:

ಛಾಯಾಚಿತ್ರ ಸ್ಪರ್ದೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ಈ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ mediaacademy ಯ ಜಾಲತಾಣವನ್ನು ಪ್ರವೇಶ ಮಾಡಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

Step-1: ಇಲ್ಲಿ ಕ್ಲಿಕ್ ಮಾಡಿ Download Now ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ನಂತರ ಇಲ್ಲಿ ಮುಖಪುಟದಲ್ಲಿ ಬಲಬದಿಯಲ್ಲಿ ಕಾಣುವ “DOCUMENTS”ಆಯ್ಕೆ ವಿಭಾಗದಲ್ಲಿ “Application for photography contest” ಬಟನ್ ಮೇಲೆ ಕ್ಲಿಕ್ ಮಾಡಿದರೆ PDF ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಬಲಬದಿಯಲ್ಲಿ ಮೇಲೆ ಕಾಣುವ “Download” ಐಕಾನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ಡೌನ್ಲೋಡ್ ಅಗುತ್ತದೆ.

ಇದನ್ನೂ ಓದಿ: PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

Selection Process For Photography Contest-ಆಯ್ಕೆ ವಿಧಾನ:

ಒಮ್ಮೆ ಅರ್ಜಿ ಸಲ್ಲಿಸಿದ ಬಳಿಕ ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೂವರು ತೀರ್ಪುಗಾರರನ್ನು ಸಂಬಂಧಪಟ್ಟ ಸಂಸ್ಥೆಯಿಂದ ನಿಯೋಜಿಸಲಾಗಿರುತ್ತದೆ ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಮತ್ತು ಇನ್ನಿತರೆ ಮಾಹಿತಿಯ ಕುರಿತು ಇನ್ನು ಹೆಚ್ಚಿನ ವಿವರಣೆಗಾಗಿ ಈ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ 9448227768 ಹಾಗೂ 9449245980.

- Advertisment -
LATEST ARTICLES

Related Articles

- Advertisment -

Most Popular

- Advertisment -