ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್(Microfinance) ಹಾವಳಿಗೆ ಅಂಕುಶ ಹಾಕಲು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ ಎನ್ನುವ ನೂತನ ನಿಯಮವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದು ಈ ಕುರಿತು ಸರಕಾರಿದಿಂದ ಹೊರಡಿಸಿರುವ ಪ್ರಕಟಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.
ಕಳೆದ ಎರಡು ತಿಂಗಳಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಗಳ(Microfinance News) ಕಿರುಕುಳಕ್ಕೆ ಬೇಸತ್ತು ಅನೇಕ ಜನರು ಆತ್ಮಹತ್ಯೆಯನ್ನು ಮಾಡಿಕೊಳ್ಳುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇದನ್ನು ಗಮನಿಸಿದ ರಾಜ್ಯ ಸರಕಾರವು ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ನಿಯಂತ್ರಣವನ್ನು ಹಾಕಲು ನೂತನ ನಿಯಮವನ್ನು ಜಾರಿಗೆ ತರಲಾಗಿದೆ.
ಸಾಲ ವಸೂಲಾತಿ ವೇಳೆ ಮೈಕ್ರೋ ಫೈನಾನ್ಸ್ ಕಂಪನಿಗಳು(Microfinance new guidelines) ನಡೆಸುತ್ತಿದ್ದ ದೌರ್ಜನ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಜಾರಿಗೆ ತಂದ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶದ ಮುಖ್ಯಾಂಶಗಳು ಈ ಕೆಳಗಿನಂತಿವೆ.
ಇದನ್ನೂ ಓದಿ: Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!
Microfinance Latest News-ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು:
ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಜೈಲು ವಾಸದೊಂದಿಗೆ ಅಥವಾ ₹10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಕಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.
ಕರ್ನಾಟಕ ಕಿರು (MICRO) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) 12-02-2025 ರಂದು ಜಾರಿಗೆ ಬಂದಿದೆ.
ಸದರಿ ಅಧ್ಯಾದೇಶವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
ಇದನ್ನೂ ಓದಿ: Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

ಇದನ್ನೂ ಓದಿ: Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!
ಇದು ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎ೦ದು ಆದೇಶಿಸಲಾಗಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋ೦ದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಈ ಅಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಅಂದಾಜು? 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ₹40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಮಿ ಸಾಲಗಳ ವಿವರೆ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
ವಿವಾದಗಳನ್ನು ಇತ್ಯರ್ಥ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ₹5 ಲಕ್ಷಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೆಯ ಅಪರಾಧ/ ಜಾಮೀನು ರಹಿತ (COGNIZABLE/NON BAILABLE) . ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುದಕ್ಕೆ ನಿರಾಕರಿಸುವುದಿಲ್ಲ.

ಪೋಲೀಸ್ ಉಪ ಅಧೀಕ್ಷಕರ (DYSP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (SUO MOTO) ಪ್ರಕರಣವನ್ನು ದಾಖಲಿಸಬಹುದು.
ಸರ್ಕಾರವು ಕಾಲಕಾಲಕ್ಕೆ ಈ ಅಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
ಈ ಅಧ್ಯಾದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.