ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ ರೂ 2,000 ಅರ್ಥಿಕ ನೆರವನ್ನು(June gruhalakshmi amount)ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಯಾವಾಗ ಅಗಲಿದೆ? ಎನ್ನುವ ಮಾಹಿತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದಾರೆ.
ಅನೇಕ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ನಮಗೆ ಪ್ರತಿ ತಿಂಗಳು ಈ ಯೋಜನೆಯಡಿ ಬರುತ್ತಿದ ಹಣ ಜಮಾ ಅಗುತ್ತಿಲ್ಲ ಎಂದು ರಾಜ್ಯ ಸರಕಾರವನ್ನು ದೂರುತ್ತಿದ್ದು ಈ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಜೂನ್-2024 ತಿಂಗಳ ಹಣ ಬಿಡುಗಡೆ ಯಾವಾಗ? ಅಗುತ್ತದೆ.
ಮತ್ತು ಹಣ ಬಿಡುಗಡೆಗೆ ತಡಲಾಗಲು ಕಾರಣದ ವಿವರವನ್ನು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು ಇದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಲೇಖನದಲ್ಲಿ ವಿವರಿಸಿರುವ ಮಾಹಿತಿಯು ನಿಮಗೆ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.
ಇದನ್ನೂ ಓದಿ: Gruhalakshmi Yojana-2024: ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯಲು ಗುರುತಿನ ಚೀಟಿ ಪರಿಗಣಿಸಲು ಅನುಮೋದನೆ!
June gruhalakshmi amount-2024: ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ! ಇಲ್ಲಿದೆ ಹೊಸ ಅಪ್ಡೇಟ್:
ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ನೀಡಿರುವ ಹೊಸ ಅಪ್ಡೇಟ್ ವಿವರ ಹೀಗಿದೆ ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ.
ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಾರ್ತಾ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!
Gruhalakshmi amount Release date- ಯಾರಿಗೆಲ್ಲ ಸಿಗಲಿದೆ ಜೂನ್-2024 ತಿಂಗಳ ಗೃಹಲಕ್ಷ್ಮಿ ಹಣ?
ಅರ್ಜಿ ಸಲ್ಲಿಸಿ ಈ ಹಿಂದಿನ ತಿಂಗಳ ವರೆಗೆ ಅಂದರೆ ಮೇ-2024 ತಿಂಗಳ ಹಣ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳ ಖಾತೆಗೆ ಜೂನ್ ಮತ್ತು ಜುಲೈ-2024 ತಿಂಗಳ ಹಣ ಜಮಾ ಅಗಲಿದೆ ಇದಲ್ಲದೆ ಪ್ರತಿ ತಿಂಗಳು ಸಹ ಆಹಾರ ಇಲಾಖೆಯಿಂದ ಪಡಿತರ ಚೀಟಿಯ ಅನರ್ಹ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು ಈ ಪಟ್ಟಿಯಲ್ಲಿರುವವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗುವುದಿಲ್ಲ ಇದನ್ನು ಹೊರತುಪಡಿಸಿ ಉಳಿದ ಎಲ್ಲಾ ಅರ್ಹ ಅರ್ಜಿದಾರರಿಗೆ ರೂ 2,000 ಬ್ಯಾಂಕ್ ಖಾತೆಗೆ ವರ್ಗಾವಣೆ ಅಗಲಿದೆ.
Ineligible ration card list-2024: ಜೂನ್ ತಿಂಗಳ ಅನರ್ಹ ಪಡಿತರ ಚೀಟಿ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಇಲ್ಲವಾ? ಎಂದು ಹೇಗೆ ಚೆಕ್ ಮಾಡಿಕೊಳ್ಳಬೇಕು:
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪ್ರತಿ ತಿಂಗಳು ಮಾರ್ಗಸೂಚಿ ಪ್ರಕಾರ ರೇಶನ್ ಕಾರ್ಡ ಪಡೆಯಲು ಅರ್ಹರಿಲ್ಲದ ಪಡಿತರ ಚೀಟಿಯನ್ನು ರದ್ದುಪಡಿಸಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನಿಮ್ಮ ಹಳ್ಳಿಯ ಅನರ್ಹ ಪಟ್ಟಿಯನ್ನು ಹೇಗೆ ನೋಡುವುದು ಎಂದು ಈ ಕೆಳಗೆ ವಿವರಿಸಲಾಗಿದೆ.
ಇದನ್ನೂ ಓದಿ: Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!
Step-1: ಮೊದಲಿಗೆ ಈ Ineligible ration card list ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು. ಇದಾದ ಬಳಿಕ “ಇ ಪಡಿತರ ಚೀಟಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-2: “ಇ-ಪಡಿತರ ಚೀಟಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ “ರದ್ದುಗೊಳಿಸಲಾದ/ತಡೆಹಿಡಿಯಲಾದ” ಹಳ್ಳಿ ಪಟ್ಟಿ ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ತದನಂತರ District,Taluk, Month, Year ಅನ್ನು ಆಯ್ಕೆ ಮಾಡಿಕೊಂಡು “Go” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಜಿಲ್ಲೆಯಲ್ಲಿ june-2024 ತಿಂಗಳಲ್ಲಿ ರದ್ದುಗೊಳಿಸಿರುವ ರೇಷನ್ ಕಾರ್ಡದಾರರ ಪಟ್ಟಿ ತೋರಿಸುತ್ತದೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ/ಇಲ್ಲವಾ? ಎಂದು ಚೆಕ್ ಮಾಡಿಕೊಳ್ಳಿ ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಗೃಹಲಕ್ಷ್ಮಿ ಹಣ ಜಮಾ ಅಗುವುದಿಲ್ಲ.