ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಯೋಜನೆಯಡಿ(Education Loan subsidy scheme) ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ.
ಇದನ್ನೂ ಓದಿ: Borewell subsidy scheme-2024: ಸಹಾಯಧನದಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!
How can apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಅಲ್ಪಸಂಖ್ಯಾತರಾದ ಮುಸ್ಲಿಂ,ಕ್ರಿಶ್ಚಿಯನ್, ಜೈನ್,ಬೌದ್ಧ,ಸಿಖ್, ಫಾರ್ಸಿ ಜನಾಂಗದ ವಿದ್ಯಾರ್ಥಿಗಳು ಈ ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 5,00,000/- ವನ್ನು ನೀಡಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬಿ. ಡಿ. ಎಸ್, ಎಂ.ಡಿ.ಎಸ್ ಕೋರ್ಸುಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 1,00,000 ವರೆಗೆ ಮತ್ತು ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 50,000 ಗಳನ್ನು ಬಿಡುಗಡೆ ಮಾಡುವುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬ್ಯಾಚುಲಾರ್ ಆಫ್ ಆರ್ಕಿಟೆಕ್ಟ/ಇಂಜಿನಿಯರಿಂಗ್/ಟೆಕ್ನಾಲಜಿ (ಬಿ.ಇ./ಬಿ.ಟೆಕ್), ಎಂ.ಟೆಕ್, ಎಂ.ಇ. ಬಿ.ಆರ್ಕ್. ಎಂ.ಆರ್ಕ್ ವ್ಯಾಸಾಂಗ ಮಾಡುತ್ತಿರುವ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 50,000 ಗಳನ್ನು ಬಿಡುಗಡೆ ಮಾಡಲಾಗುತ್ತದೆ.
ಇದನ್ನೂ ಓದಿ: Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ ಬಿ ಎ, ಎಂ ಸಿ ಎ, ಎಲ್ ಎಲ್ ಬಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಠ ರೂ.50,000/-ಗಳನ್ನು ಸಾಲವಾಗಿ ನೀಡಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Sc. in Horticulture, Agriculture, Dairy Technology, Forestry, Veterinary, Animal science, Food Technology, Bio Technology, Fisheries, Sericulture, Home/community Sciences, Food Nutrition and Dietetics, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Pharma, M.Pharma, Pharma.D,and D.Pharma, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುತ್ತದೆ.
ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 8,00,000/- ಗಿಂತ ಕಡಿಮೆ ಇರಬೇಕು. ವಿದ್ಯಾರ್ಥಿಯು ಪಡೆದ ಸಾಲವನ್ನು ಕೋರ್ಸ್ ಮುಗಿದ 1 ವರ್ಷದ ನಂತರ 48 ತಿಂಗಳ ಅವಧಿಯಲ್ಲಿ 2% ಬಡ್ಡಿದರದೊಂದಿಗೆ ಮರುಪಾವತಿ ಮಾಡಬೇಕು.
ಇದನ್ನೂ ಓದಿ: male munsuchane-ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ!
Required Documents for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
- ಬೊನಾಫೈಡ್/ಅಧ್ಯಯನ ಪ್ರಮಾಣಪತ್ರ
- ಕಾಲೇಜು ಶುಲ್ಕದ ವಿವರ.
- ಹಿಂದಿನ ವರ್ಷ ಪಾಸಾದ ಅಂಕಪಟ್ಟಿ.
- ಕಾಲೇಜು ಬ್ಯಾಂಕ್ ವಿವರಗಳು.
- ಭದ್ರತಾ ಠೇವಣಿ (ಸಾಲದ ಮೊತ್ತದ 12%) ಪಾವತಿ ಮಾಡಿದ ರಶೀದಿ.
- KEA ದಾಖಲಾತಿ ಆದೇಶ ಪ್ರತಿ.
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ.
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ.
- ಇಂಡೆಮ್ನಿಟೀ (ನಷ್ಟ ಪರಿಹಾರ) ಬಾಂಡ್.
- ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ.
- ಪೋಷಕರ ಸ್ವಯಂ ಘೋಷಣೆ ಪತ್ರ.
ಇದನ್ನೂ ಓದಿ: karnataka dams water level: ರಾಜ್ಯದ ಯಾವ ಜಲಾಶಯಕ್ಕೆ ಎಷ್ಟು ನೀರು ಹರಿದು ಬರುತ್ತಿದೆ? ಇಲ್ಲಿದೆ ಸಂಪೂರ್ಣ ವಿವರ.
Application method-ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
application last date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 07 ಜುಲೈ 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸಹಾಯವಾಣಿ: 8277799990
ಅರ್ಜಿ ಸಲ್ಲಿಸಲು ಲಿಂಕ್: Apply Now