ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು(SSLC Time Table) ಈಗಾಗಲೇ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಇದನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನದ ಕುರಿತು ಈ ಅಂಕಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.
10 ಜನವರಿ 2025 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ(SSLC Time Table-2025) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಈ ವೇಳಾಪಟ್ಟಿಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಮೊದಲು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಅಂತಿಮ ಪರೀಕ್ಷೆ(SSLC Exam) ಆರಂಭಿಕ ದಿನಾಂಕ 20 ಮಾರ್ಚ 2025 ಎಂದು ನಿಗದಿಪಡಿಸಲಾಗಿತ್ತು ಅದರೆ ಅಂತಿಮ ವೇಳಾಪಟ್ಟಿಯಲ್ಲಿ ಆರಂಭಿಕ ದಿನಾಂಕ 21 ಮಾರ್ಚ 2025 ಅಗಿರುತ್ತದೆ.
ಇದನ್ನೂ ಓದಿ: Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!
SSLC Time Table-ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಹೀಗಿದೆ:
ಈ ಬಾರಿಯ ಅಂದರೆ 2024-25 ನೇ ಸಾಲಿನ ಅಂತಿಮ ಎಸ್.ಎಸ್.ಎಲ್.ಸಿ ಪರೀಕ್ಷೆಯು 21 ಮಾರ್ಚ 2025 ರಿಂದ ಆರಂಭವಾಗಿ 04 ಏಪ್ರಿಲ್ 2025ಗೆ ಮುಕ್ತಾಯವಾಗಲಿವೆ.

SSLC Time Table Download Link-ಅಂತಿಮ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನ:
ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಈ ಕೆಳಗಿನ ತಿಳಿಸಿರುವ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬಹುದು.
Step-1: ಮೊದಲಿಗೆ SSLC Time Table-2025 ಈ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ತಂತ್ರಾಂಶವನ್ನು ಭೇಟಿ ಮಾಡಬೇಕು.
ಇದನ್ನೂ ಓದಿ: Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

Step-2: ಬಳಿಕ ಮುಖಪುಟದಲ್ಲಿ ಕಾಣುವ Read More ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: “Read More” ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ಬಳಿಕ “Click here for Final Time Table of March/April 2025 SSLC Exam-1” ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಅಂತಿಮ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ತೆರೆದುಕೊಳ್ಳುತ್ತದೆ ಇಲ್ಲಿ ಡೌನ್ಲೋಡ್ ಐಕಾನ್ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು.
SSLC Exam-ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಡೌನ್ಲೋಡ್ ಲಿಂಕ್- Download Now
SSLC Examination Model Question Papers-2025: ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಗಳಿಸಲು ಈ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಪ್ಪದೇ ಅಭ್ಯಾಸ ಮಾಡಿ:
ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಲು ಈ ಕೆಳಗೆ ನೀಡಿರುವ ಮಂಡಲಿಯ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯಾಸ ಮಾಡುವುದು ಅತ್ಯಗತ್ಯ.
ಇದನ್ನೂ ಓದಿ: SIM Card-ಸಿಮ್ ಕಾರ್ಡ ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

SSLC Examination Model Question Papers-ಎಸ್.ಎಸ್.ಎಲ್.ಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ- Download Now