ಪ್ರಸ್ತುತ ಸಾಲಿನಲ್ಲಿ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಯನ್ನು(SSLC Exam) ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಗೆ ನೆರವಾಗಲು ಸಂಬಂಧಪಟ್ಟ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಜಾರಿಗೆ ತರಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯು(, Karnataka SSLC Helpline) ವಿದ್ಯಾರ್ಥಿ ಜೀವನದಲ್ಲಿ ಒಂದು ಮೊದಲ ಪ್ರಮುಖ ಘಟಕವಾಗಿರುತ್ತದೆ ಇಲ್ಲಿ ಎಷ್ಟು ಚೆನ್ನಾಗಿ ಅಭ್ಯಾಸ ಮಾಡಿ ಉತ್ತಮ ಅಂಕಗಳನ್ನು ತೆಗೆಯುತ್ತಾರೋ ಇದರ ಆಧಾರದ ಮೇಲೆ ಮುಂದಿನ ಉನ್ನತ ಶಿಕ್ಷಣಕ್ಕೆ ದಾಖಲಾಗಲು ಒಂದು ಹಾದಿ ತೆರೆದುಕೊಳ್ಳುತ್ತದೆ.
ಈ ನಿಟ್ಟಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ವಿದ್ಯಾರ್ಥಿಗಳಿಗೆ ದೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬಲು ಇಲಾಖೆಯಿಂದ ಸಹಾಯವಾಣಿ(SSLC Student Helpline) ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದ್ದು ನಿಮ್ಮ ಅಕ್ಕ-ಪಕ್ಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ತಿಳಿಯಲು ತಪ್ಪದೇ ಅವರ ಮೊಬೈಲ್ ಸಂಖ್ಯೆಗೆ ಈ ಮಾಹಿತಿಯನ್ನು ರವಾನಿಸಿ.
ಇದನ್ನೂ ಓದಿ: Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!
ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ(SSLC Exam-2025) ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಮಾರ್ಚ್ 10 ರಿಂದ ಅಪರಾಹ್ನ 02.30 ಗಂಟೆಗೆ ಪ್ರಾರಂಭಿಸಲಾಗುವುದು.
ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೋಷಕರ ಅಭಿಲಾಷೆ ಆಗಿರುತ್ತದೆ. ವಿದ್ಯಾರ್ಥಿಗಳ ಸಾಮರ್ಥ್ಯ, ಬುದ್ದಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೋಷಕರು/ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ.
ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಪೂರ್ತಿ ನೀಡಬೇಕಾದ ಅವಶ್ಯಕತೆ ಇದೆ.
ಇದನ್ನೂ ಓದಿ: Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಮಾಚ 10 ರಿಂದ 19 ರವರೆಗೆ ಪ್ರತಿದಿನ ಅಪರಾಹ್ನ 2.30 ರಿಂದ ಸಂಜೆ 6.30 ಗಂಟೆಯವರೆಗೆ ಹಾಗೂ ಮಾರ್ಚ್ 16 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 5.00 ಕಾರ್ಯನಿರ್ವಹಿಸಲಾಗುತ್ತದೆ.
ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 10.00 ರಿಂದ ಮಧ್ಯ್ಯಾಹ್ನ 2.00 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.
ಸಹಾಯವಾಣಿ ಸಂಖ್ಯೆ 080-23310075, 080-23310076 ದೂರವಾಣಿ ಸಂಖ್ಯೆಗಳನ್ನು ಮೀಸಲಿಡಲಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಸದರಿ ದೂರವಾಣಿ ಸಂಖ್ಯೆಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಸದರಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.