ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ ಇಲ್ಲಿದೆ ಭರ್ಜರಿ ಸಿಹಿ ಸುದ್ದಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ ಉಚಿತ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್ ತರಬೇತಿಗೆ(Free CCTV installation Training) ಅರ್ಜಿ ಆಹ್ವಾನಿಸಲಾಗಿದೆ.
ತಮ್ಮದೇ ಆದ ಸ್ವ-ಉದ್ಯೋಗ ಮಾಡಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಆಸಕ್ತಿಯಿರುವ ಯುವಕ-ಯುವತಿಯರು ಪ್ರತಿ ಜಿಲ್ಲೆಯಲ್ಲಿರುವ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಉತ್ತಮ ವಿವಿಧ ಬಗ್ಗೆಯ ತರಬೇತಿಯನ್ನು ಮತ್ತು ಸ್ವ-ಉದ್ಯೋಗ ಆರಂಭಿಸಲು ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು.
ಈ ತರಬೇತಿ ಉಚಿತ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್(CCTV installation Training) ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ತರಬೇತಿ ಆರಂಭವಾಗುವ ಪೂರ್ವದಲ್ಲಿ ಈ ಲೇಖನದಲ್ಲಿ ತಿಳಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಈ ತರಬೇತಿಯ ಲಾಭ ಪಡೆದುಕೊಳ್ಳಬಹುದು.
ಇದನ್ನೂ ಓದಿ: Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!
ತರಬೇತಿಯಲ್ಲಿ ಪಾಲ್ಗೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.
How can Apply- ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ನಡುವೆ ಇರಬೇಕು.
- ಅಭ್ಯರ್ಥಿಗೆ ಕನ್ನಡ ಮತ್ತು ಇಂಗ್ಲಿಷ್ ಓದು-ಬರಹ ಬಲ್ಲವರಾಗಿರಬೇಕು.
- ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರಬೇಕು.
- ಅಭ್ಯರ್ಥಿಯು ಗ್ರಾಮೀಣ ಭಾಗದರಾಗಿದ್ದು ಬಿಪಿಎಲ್ ಕಾರ್ಡ ಹೊಂದಿರುವವರಿಗೆ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Free CCTV installation Training date- ತರಬೇತಿ ನಡೆಯುವ ಅವಧಿ ಮತ್ತು ದಿನಾಂಕ:
ತರಬೇತಿಯು ದಿನಾಂಕ 27 ಮೇ 2024 ರಿಂದ ಪ್ರಾರಂಭವಾಗಿ 08 ಜೂನ್ 2024 ರವರೆಗೆ ನಡೆಯಲಿದೆ. ಒಟ್ಟು 13 ದಿನದ ತರಬೇತಿ ಇದಾಗಿರುತ್ತದೆ.
ಇದನ್ನೂ ಓದಿ: land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?
Free cctv training details- ಈ ತರಬೇತಿಯಲ್ಲಿ ಯಾವೆಲ್ಲ ವಿಷಯದ ಕುರಿತು ಕಳುಹಿಸಲಾಗುತ್ತದೆ?
- ಅಂಗಡಿ, ಗೋದಾಮ್, ಮನೆ, ಆಫೀಸ್ ಗಳಿಗೆ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್ ಮಾಡುವ ವಿಧಾನ
- ಸಿಸಿಟಿವಿ ಕ್ಯಾಮರಾ ಸರ್ವೀಸ್
- ಸೆಕ್ಯುರಿಟಿ ಅಲಾರ್ಮ್ ಮತ್ತು ಸ್ಮೋಕ್ ಡೆಟೆಕ್ಟರ್ ಕುರಿತು ತರಬೇತಿ ನೀಡಲಾಗುತ್ತದೆ.
Training Center Details- ತರಬೇತಿ ನಡೆಯುವ ಕೇಂದ್ರದ ವಿಳಾಸ ಹೀಗಿದೆ:
ಈ ಉಚಿತ 45 ದಿನದ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಯು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಆಸಕ್ತ ಅಭ್ಯರ್ಥಿಗಳು ತರಬೇತಿ ಪಡೆಯಲು ಈ ಕೇಂದ್ರ ಭೇಟಿ ಮಾಡಬೇಕು.
ಇದನ್ನೂ ಓದಿ: Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Required Documents For Application- ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:
1) ಅರ್ಜಿದಾರ ಅಭ್ಯರ್ಥಿಯ ನಾಲ್ಕು(4) ಪಾಸ್ ಪೋರ್ಟ್ ಸೈಜ್ ಫೋಟೋ
2) ಬ್ಯಾಂಕ್ ಪಾಸ್ ಬುಕ್ ಪ್ರತಿ
3) ರೇಶನ್ ಕಾರ್ಡ
4) ಆಧಾರ್ ಕಾರ್ಡ
5) ಪಾನ್ ಕಾರ್ಡ
ತರಬೇತಿಯು ಸಂಪೂರ್ಣ ಉಚಿತ:
ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಊಟ ಸಹಿತ ಉಳಿದುಕೊಳ್ಳಲು ವಸತಿ ವ್ಯವಸ್ಥೆಯು ಸಹ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಹೆಚ್ಚಿನ ಮಾಹಿತಿ ಪಡೆಯಲು ಈ 9449860007, 9538281989, 9916783825, 8880444612 ಮೊಬೈಲ್ ಸಂಖ್ಯೆಗೆ ಅಸಕ್ತ ಅಭ್ಯರ್ಥಿಗಳು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಲಿಂಕ್: Apply Now