ಅಂಗನವಾಡಿ ಕಾರ್ಯಕರ್ತೆಯರ(Anganwadi Worker Salary) ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು(Laxmi hebbalkar), ಇತ್ತೀಚಿಗೆ ಮಂಡಿಸಲಾದ 2025-26ನೇ ಸಾಲಿನ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂಪಾಯಿ ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂಪಾಯಿ ಅನುದಾನ ಹೊರೆಯಾಗಿದೆ ಎಂದರು.
ಇದನ್ನೂ ಓದಿ: AgniVeer Recruitment- ಜಸ್ಟ್ 8th ಪಾಸಾದವರಿಗೂ ಕೂಡ ಅಗ್ನಿವೀರ ನೇಮಕಾತಿಯಲ್ಲಿ ಅವಕಾಶ!
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ(Anganwadi Worker /Helper Salary Amount) ನೀಡಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದ್ದು, ಇದರಲ್ಲಿ ನಮ್ಮ ರಾಜ್ಯದ ಪಾಲು ಹೆಚ್ಚಿದೆ. ಗೌರವ ಧನ ಹೆಚ್ಚಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ, ಇದುವರೆಗೂ ಅನುದಾನ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ್ಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಹಾಗಾಗಿಯೇ ಅವರ ಗೌರವ ಧನ ಹೆಚ್ಚಳ ಮಾಡಲು ಸರ್ಕಾರ ಮತ್ತು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಇದನ್ನೂ ಓದಿ: Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Anganwadi Worker /Helper Salary-ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆ ಮತ್ತು ಸಚಿವರ ಉತ್ತರದ ವಿವರ ಹೀಗಿದೆ:
ಪ್ರಶ್ನೆ-1: ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವೇತನ ಹೆಚ್ಚಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?
ಸಚಿವರ ಉತ್ತರ: ಬಂದಿರುತ್ತದೆ.
ಇದನ್ನೂ ಓದಿ: Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!
ಪ್ರಶ್ನೆ-2: ಬಂದಿದ್ದಲ್ಲಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸುವುದು ಹಾಗೂ ಎಲ್ಲಾ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಯಿಟಿ ನೀಡುವ ಕುರಿತು ಸರ್ಕಾರ ಇದುವರೆಗೆ ಯಾವುದೇ ಕ್ರಮ ವಹಿಸದಿರಲು ಕಾರಣಗಳೇನು?
ಪ್ರಶ್ನೆ-3: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಹೊಣೆಯನ್ನು ಹೊತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸುವುದು ಹಾಗೂ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಯಿಟಿ ನೀಡಲು ಯಾವ ಕಾಲಮಿತಿಯೊಳಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು?
ಉತ್ತರ: ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಕೆಳಕಂಡಂತೆ ಮಾಸಿಕ ಗೌರವಧನವನ್ನು ಪಾವತಿಸಲಾಗುತ್ತಿದೆ.
ಇದನ್ನೂ ಓದಿ: Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ
ಸಿಬ್ಬಂದಿ ವಿವರ | ವರ್ಷದವರೆಗೆ ಸೇವೆ ಸಲ್ಲಿಸಿದವರು | ವರ್ಷದವರೆಗೆ ಸೇವೆ ಸಲ್ಲಿಸಿದವರು | ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರು |
ಅಂಗನವಾಡಿ ಕಾರ್ಯಕರ್ತೆ | 11,000/- | 11,250/- | 11,500/- |
ಅಂಗನವಾಡಿ ಸಹಾಯಕಿ | 6,250/- | 6,500/- | 6,750/- |
ಮಿನಿ ಅಂಗನವಾಡಿ ಕಾರ್ಯಕರ್ತೆ- | 7,250/- | 7,500/- | 7,750/- |
2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-159 ರಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.1000/-ಹಾಗೂ ಅಂಗನವಾಡಿ ಸಹಾಯಕಿಯರಿಗೆ ಗಳನ್ನು ಹೆಚ್ಚಿಸುವುದಾಗಿ ಘೋಷಿಸಲಾಗಿದೆ. ರೂ.750/-
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು ಹಾಗೂ ‘ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ಉಪಧನ (Gratuity) ಪಾವತಿಸುವ ಕುರಿತು ದಿನಾಂಕ: 04-02-2023ರ ಆದೇಶದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ದಿನಾಂಕ: 21-06-2024ರ ಆದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ಮಿನಿ ಉಪಧನ ಪಾವತಿ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಇದನ್ನೂ ಓದಿ: BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

ಮುಂದುವರೆದು, 2023-24 ಸಾಲಿನಲ್ಲಿ ನಿವೃತ್ತಿ ಹೊಂದಿರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರಿಗೆ ಉಪಧನ (Gratuity) ಪಾವತಿಗಾಗಿ ಅವಶ್ಯವಿರುವ ರೂ. 39,81 ಕೋಟಿಗಳನ್ನು ಲೆಕ್ಕ ಶೀರ್ಷಿಕ: 2235-60-103-0-01-059 ರಡಿ 2024-25 ನೇ ಸಾಲಿನ ಪೂರಕ ಅಂದಾಜು 3 ರಲ್ಲಿ ಹೆಚ್ಚುವರಿಯಾಗಿ ಒದಗಿಸಲಾಗುತ್ತಿದ್ದು, ಗ್ರಾಚ್ಯುಟಿ ಮೊತ್ತವನ್ನು ಪಾವತಿಸಲು ಕ್ರಮವಹಿಸಲಾಗುವುದು ಎಂದು ಲಕ್ಷ್ಮೀ ಆರ್. ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ತಮ್ಮ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.