Yashaswini Yojana-2024: ಯಶಸ್ವಿನಿ ಯೋಜನೆ ಕಾರ್ಡದಾರರಿಗೆ ಭರ್ಜರಿ ಸಿಹಿ ಸುದ್ದಿ!

ಯಶಸ್ವಿನಿ ಯೋಜನೆಯಡಿ(Yashashwini card) ತಮ್ಮ ಕುಟುಂಬದ ಸದಸ್ಯರನ್ನು ನೊಂದಣಿ ಮಾಡಿಕೊಂಡು ಕಾರ್ಡ ಪಡೆದಿರುವ ಸದಸ್ಯರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ.

ಇನ್ನು ಮುಂದೆ ಯಶಸ್ವಿನಿ ಕಾರ್ಡ ಹೊಂದಿರುವ ಸದಸ್ಯರು ಗರಿಷ್ಠ ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಿದೆ, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಯಶಸ್ವಿನಿ(Yashaswini scheme) ಯೋಜನೆಯಡಿ ಯಾರೆಲ್ಲ ಸೌಲಭ್ಯ ಪಡೆಯಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವೆಲ್ಲ ಆಸ್ಪತ್ರೆಗಳಲ್ಲಿ ಈ ಯೋಜನೆ ಅನ್ವಯ ಅಗುತ್ತದೆ? ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸೇರಿದಂತೆ ಇತರೆ ಮಾಹಿತಿಯನ್ನು ಸಹ ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!

ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದ್ದು, ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. 

ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು. ಇದನ್ನು ಅರಿತ ರಾಜ್ಯ ಸರ್ಕಾರ ಯೋಜನೆಯ ಚಿಕಿತ್ಸಾ ದರವನ್ನು ಶೇ 300ರವರೆಗೂ ಹೆಚ್ಚಳ ಮಾಡಿದೆ. ಪರಿಣಾಮ 370ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 600ರ ಗಡಿ ದಾಟಿದೆ.

ಈ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರ ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು. ಯೋಜನೆಯಡಿ ಒಟ್ಟು 637 ನೆಟ್‌ವರ್ಕ್‌ ಆಸ್ಪತ್ರೆಗಳು ನೋಂದಣಿಯಾಗಿದ್ದು, ಇದರಲ್ಲಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಲಾಗಿದೆ.

ಇದನ್ನೂ ಓದಿ: BNPM Job- ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ನಿಗಮದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ!

Yashashwini Yojana-2024: ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ!

ಯಶಸ್ವಿನಿ ಯೋಜನೆಯಡಿಯೂ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಯೋಜನೆಯಡಿ ವ್ಯಕ್ತಿಯು ನೆಟ್‌ವರ್ಕ್‌ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ತೆಗೆದುಕೊಳ್ಳಬಹುದಾಗಿದೆ. ಇದರಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭ ಸಾಧ್ಯವಾಗಲಿದೆ. 

Yashashwini Yojana Hospitals list-ಯಶಸ್ವಿನಿ ಯೋಜನೆಯಡಿ ಯಾವೆಲ್ಲ ಆಸ್ಪತ್ರೆಗಳು ಬರುತ್ತವೆ ಎಂದು ಹೇಗೆ ತಿಳಿಯುವುದು:

ಈ ಲಿಂಕ್ Yashaswini Hospital list ಮೇಲೆ ಕ್ಲಿಕ್ ಮಾಡಿ ಯಶಸ್ವಿನಿ ಯೋಜನೆಗೆ ಸಂಬಂಧಿಸಿದ ಅಧಿಕೃತ  ಜಾಲತಾಣವನ್ನು ಪ್ರವೇಶ ಮಾಡಿ  ಮುಖಪುಟದಲ್ಲಿ ಕಾಣುವ “ಆಸ್ಪತ್ರೆ” ಬಟನ್ ಮೇಲೆ ಕ್ಲಿಕ್ ಮಾಡಿ ಯಾವೆಲ್ಲ ಆಸ್ಪತ್ರೆಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದು ಎಂದು ಚೆಕ್ ಮಾಡಬಹುದು. ಇಲ್ಲಿ ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ತೋರಿಸುತ್ತದೆ.

ಇದನ್ನೂ ಓದಿ: Crop insurance guideline-2024ರ ಮುಂಗಾರು ಬೆಳೆ ವಿಮೆ ಯೋಜನೆಯ ಅಧಿಕೃತ ಮಾರ್ಗಸೂಚಿ ಬಿಡುಗಡೆ!

ಯಶಸ್ವಿನಿ ಕಾರ್ಡ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲೆ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರು ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ನಮ್ಮ ಪುಟದ ಇನ್ನೊಂದು ಅಂಕಣ ಓದಿ ಮಾಹಿತಿ ತಿಳಿದುಕೊಳ್ಳಬಹುದು.

ಯಶಸ್ವಿನಿ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ: Click here