ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾರ್ವಜನಿಕರಿಗೆ ಸರಳವಾಗಿ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra Whatsapp Chat) ಸೇವೆಯಲ್ಲು ಪ್ರಾರಂಭಿಸಿದೆ.
ಪಂಚಮಿತ್ರ ವಾಟ್ಸಾಪ್ ಚಾಟ್ ಅನ್ನು ಬಳಕೆ ಮಾಡಿಕೊಂಡು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೆ ಮತ್ತು ಸೇವೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಸಹ ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದಾಗಿದೆ.
ಯಾವೆಲ್ಲ ಸೇವೆಗಳನ್ನು ಪಂಚಮಿತ್ರದಲ್ಲಿ ಅವಕಾಶ ಮಾಡಿಕೊಡಲಾಗಿದೆ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: KSRTC driver job-KSRTC ಯಲ್ಲಿ ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ!
ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಸೇವೆಗಳು ಲಭ್ಯ:
ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲಿ ಪ್ರಪ್ರಥಮ ಬಾರಿಗೆ “ಪಂಚಮಿತ್ರ” whatsapp Chat ನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಪಂಚಮಿತ್ರ” ಪೋರ್ಟಲ್ ಲಾಂಛನ ಲೋಕಾರ್ಪಣೆ ಮಾಡಿ ಮಾತನಾಡಿದರು.
ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ ಸೈಟ್ ಮತ್ತು ಪೋರ್ಟಲ್‌ಗಳಿಗೆ ಭೇಟಿ ನೀಡಬೇಕಾಗಿತ್ತು, ಅಲ್ಲದೆ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ,
ಇದನ್ನೂ ಓದಿ: Agriculture machinery- ಕೃಷಿ ಇಲಾಖೆಯಿಂದ ಶೇ 90 ಸಹಾಯಧನದಲ್ಲಿ ವಿವಿಧ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!
ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್‌ಗಳು ಇರಲಿಲ್ಲವಾದ್ದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಿರುವ Whatsapp Chat ತಂತ್ರಜ್ಞಾನ ದೇಶದಲ್ಲೇ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.
ಇನ್ನು ಮುಂದೆ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು Whatsapp Chat No. 8277506000 ಮೂಲಕ ದಾಖಲಿಸಬಹುದಾಗಿದೆ.
“ಪಂಚಮಿತ್ರ ಪೋರ್ಟಲ್” ಮೂಲಕ ಗ್ರಾಮಪಂಚಾಯಿತಿಗಳ ಮಾಹಿತಿಗಳಾದ ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್‌ಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು: ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾಮ ಪಂಚಾಯತ್‌ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು, 4 (1) (ಎ) & 4 (1) (ಬಿ) ಆರ್‌ಟಿಐ ದಾಖಲೆಗಳ ವಿವರಗಳನ್ನು ಪಡೆಯಬಹುದಾಗಿದೆ ಎಂದರು.
ಇದನ್ನೂ ಓದಿ: Yashaswini card last date- ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ!
Panchatantra application- ಯಾವೆಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು?
ಈ ಪೋರ್ಟಲ್ ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಈ ಕೆಳಗಿನ ಸೇವೆಗಳನ್ನು ಪಡೆಯಲು ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಬಹುದು.
1) ಕಟ್ಟಡ ನಿರ್ಮಾಣ ಲೈಸೆನ್ಸ್,
2) ಹೊಸ ನೀರು ಸರಬರಾಜು ಸಂಪರ್ಕ,
3) ನೀರು ಸರಬರಾಜಿನ ಸಂಪರ್ಕ ಕಡಿತ,
4) ಕುಡಿಯುವ ನೀರಿನ ನಿರ್ವಹಣೆ,
5) ಬೀದಿ ದೀಪದ ನಿರ್ವಹಣೆ,
6) ಗ್ರಾಮ ನೈರ್ಮಲ್ಯದ ನಿರ್ವಹಣೆ,
7) ವ್ಯಾಪಾರ ಪರವಾನಗಿ,
8) ಸ್ವಾಧೀನ ಪ್ರಮಾಣಪತ್ರ,
9) ರಸ್ತೆ ಅಗೆಯುವುದಾಕ್ಕಾಗಿ ಅನುಮತಿ,
10) ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ,
11) ನಿರಾಕ್ಷೇಪಣಾ ಪತ್ರ,
12) ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ,
13) ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು,
14) ಹೊಸ/ಆಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ
15) ಹೊಸ / ಅಸ್ತಿತ್ವದಲ್ಲಿರುವ ಓವರ್ ಗೌಂಡ್ ಕೇಬಲ್ ಮೂಲಸೌಕರ್ಯ / ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ /
16) ನಮೂನೆ 9/1ಎ
17) ನಮೂನೆ 11ಬಿ
ಸೇವೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
Panchamitra Whatsapp number- ಪಂಚಮಿತ್ರ ವಾಟ್ಸಾಪ್ ಚಾಟ್ ಬಳಸುವುದು ಹೇಗೆ?
ಮೊದಲಿಗೆ ಈ 8277506000 ಪಂಚಮಿತ್ರ ವಾಟ್ಸಾಪ್ ಚಾಟ್ ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡು ನಂತರ ಈ ಸಂಖ್ಯೆಗೆ ಹಾಯ್(Hi) ಎ೦ದು ಸ೦ದೇಶ ಕಳುಹಿಸಿದರೆ ಅಧಿಕೃತ ವಾಟ್ಸಾಪ್ ಚಾಟ್ ಆರಂಭಗೊಳ್ಳುತ್ತದೆ. ನಂತರ ಭಾಷೆ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಆಯ್ಕೆ ಮಾಡಿ. ಅಗತ್ಯವಿರುವ ಮಾಹಿತಿ ನಿಮ್ಮ ಮೊಬೈಲ್ ನಲ್ಲೇ ವಾಟ್ಸಾಪ್ ಅಪ್ಲಿಕೇಶನ್ ಮೂಲಕ ಪಡೆದುಕೊಳ್ಳಬಹುದು.
ಪಂಚತಂತ್ರ ಅಧಿಕೃತ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ : click here
ಪಂಚತಂತ್ರ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now