ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್(Ayushman health card) ಪಡೆಯಲು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ ಆಸಕ್ತ ನಾಗರಿಕರು ಈ ಕೆಳಗೆ ತಿಳಿಸಿರುವ ವಿವರವನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ವಿಶೇಷವೇನೆಂದರೆ ಈ ಯೋಜನೆಯಡಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವ ಎರಡು ನಾಗರಿಕರು ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಮಾಡಿಸಿಕೊಂಡು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಈ ಯೋಜನೆಯಡಿ ಸಿಗುವ ಪ್ರಯೋಜನಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Ayushman health card yojana- ಯೋಜನೆಯ ಹಿನ್ನೆಲೆ:
ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು ದಿನಾಂಕ: 02.03.2018 ರಿಂದ ಅನುಷ್ಠಾನಗೊಳಿಸುತ್ತಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಇದನ್ನೂ ಓದಿ: Raita vidya nidhi scholarship- ಈ ವರ್ಗದ ಮಕ್ಕಳಿಗೂ ರೈತ ವಿದ್ಯಾನಿಧಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!
Ayushman health card benefits- ಈ ಯೋಜನೆಯಡಿ ಸಿಗುವ ಪ್ರಯೋಜನಗಳೇನು?
ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ಆರೋಗ್ಯ ಸಂಬಂಧಿತ ಅಸ್ಪತ್ರೆ ಖರ್ಚಿನಲ್ಲಿ ರೂ.5.00 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಅನ್ನು ಪಡೆಯಬಹುದು.
ಮತ್ತು ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಇದನ್ನೂ ಓದಿ: PM-kisan-2024: ಕಿಸಾನ್ ಸಮ್ಮಾನ್ ರೂ 2,000 ಪಡೆಯಲು ಅರ್ಹರಿರುವ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!
Ayushman health card application- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಎಬಿ-ಎಆರ್ಕೆ ಕಾರ್ಡ್ ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ.10/- ಶುಲ್ಕದೊಂದಿಗೆ ನೀಡಲಾಗುತ್ತದೆ. ಬೆಂಗಳೂರು ಒನ್ ಕರ್ನಾಟಕ ಒನ್ ಮತ್ತು ಸೇವ ಸೀಂಧು ಕೇಂದ್ರಗಳಲ್ಲಿ ರೂ. 35/- ಶುಲ್ಕದೊಂದಿಗೆ ಎಬಿ-ಎಆರ್ಕೆ ಕಾರ್ಡ್ ನೀಡಲಾಗುತ್ತದೆ.
Required documents for Ayushman health card- ಕಾರ್ಡ ಪಡೆಯಲು ಬೇಕಾಗುವ ದಾಖಲಾತಿಗಳು:
1) ಅರ್ಜಿದಾರರ ಆಧಾರ್ ಕಾರ್ಡ್
2) ಕುಟುಂಬದ ಪಡಿತರ ಕಾರ್ಡ್
3) ಮೊಬೈಲ್ ಸಂಖ್ಯೆ.
ಯಾವೆಲ್ಲ ಚಿಕಿತ್ಸೆಗಳನ್ನು ರಿಯಾಯಿತಿಯಲ್ಲಿ ಪಡೆಯಬಹುದು?
ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
ಇದನ್ನೂ ಓದಿ: Horticulture training- 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ! ರೂ 1,750 ಮಾಸಿಕ ಶಿಷ್ಯವೇತನ.
ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ?
ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
ನೋಂದಾಯಿತ ಆಸ್ಪತ್ರೆಗಳ ಮಾಹಿತಿ:
ಈ ಯೋಜನೆಯಡಿ ಯಾವೆಲ್ಲ ಆಸ್ಪತ್ರೆಯ ಸೌಲಭ್ಯ ಪಡೆಯಬಹುದು ಎಂದು ತಿಳಿದುಕೊಳ್ಳಲು ಕಾರ್ಡದಾರುರು ಈ ಟೋಲ್ ಫ್ರೀ ಸಂಖ್ಯೆ: 1800 425 8330 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು ಹಾಗೂ ಸಂಬಂಧಿಸಿದ ಆಸ್ಪತ್ರೆಯ ಆರೋಗ್ಯ ಮಿತ್ರರ ಮೊಬೈಲ್ ಸಂಖ್ಯೆ ಪಡೆದುಕೊಂಡು ಅವರನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: Senior citizen bus pass- ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!
Ayushman health card helpline numbers- ಇನ್ನು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳು:
ಆರೋಗ್ಯ ಸಹಾಯವಾಣಿ 104
ಟೋಲ್ ಫ್ರೀ ಸಂಖ್ಯೆ: 1800 425 8330