ಮುಂಗಾರು ಮತ್ತು ಹಿಂಗಾರು ಹಂಗಾಮುಗಳು ಮುಗಿಯುವ ಹಂತ ತಲುಪಿದರು ಇನ್ನು ಸಹ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ ಬರ ಪರಿಹಾರ ಬಿಡುಗಡೆಯಾಗಿಲ್ಲ ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರ ಖಾತೆಗೆ ನೇರ ನಗದು ವರ್ಗಾವಣೆಯ(DBT) ಮೂಲಕ ಬರ ಪರಿಹಾರದ ಮೊದಲ ಕಂತಿನ ರೂ 2,000 ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ.
ಕಂದಾಯ ಇಲಾಖೆವತಿಯಿಂದ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ರಾಜ್ಯ ಸರಕಾರವು 223 ತಾಲ್ಲೂಕುಗಳನ್ನು ಬರಪೀಡಿತ ಮತ್ತು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಕೊರತೆಯಿಂದ ಬೆಳೆ ನಾಶವಾಗಿದ್ದು ಸೆಪ್ಟೆಂಬರ್ 2023 ರಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಿದ್ದೆವೆ. ಆದರೆ NDRF ಮಾರ್ಗಸೂಚಿಯನ್ವಯ ಕೇಂದ್ರ ಸರ್ಕಾರ ಪರಿಹಾರದ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.
ಇದನ್ನೂ ಓದಿ: January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.
Bara parihara-ಒಂದು ವಾರದಲ್ಲಿ 30 ಲಕ್ಷ ರೈತರ ಖಾತೆಗೆ ನೇರ ನಗದು ವರ್ಗಾವಣೆಯ(DBT) ಮೂಲಕ ಬರ ಪರಿಹಾರ:
ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ (ಫ್ರೂಟ್ಸ್) ಅಡಿಯಲ್ಲಿ ಶೇ.75 ರಷ್ಟು ರೈತರ ಜಮೀನಿನ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದ್ದು, ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರ ಖಾತೆಗೆ ನೇರ ನಗದು ವರ್ಗಾವಣೆಯ(DBT) ಮೂಲಕ ಬರ ಪರಿಹಾರದ ಮೊದಲ ಕಂತಿನ ರೂ 2,000 ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ಅವ್ಯವಹಾರ ತಡೆಗೆ ಪ್ರೂಟ್ಸ್(fruits) ತಂತ್ರಾಂಶ ಬಳಕೆ:
ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲಿ ಈ ಹಿಂದ ವರ್ಷದಲ್ಲಿ ಅನೇಕ ಅವ್ಯವಹಾರಗಳು ನಡೆದಿದ್ದವು. ಜಮೀನು ಯಾರದ್ದೋ ಹೆಸರಿನಲ್ಲಿ ಇರುತ್ತದೆ ಪರಿಹಾರ ಇನ್ಯಾರೋ ಬೇರೆಯವರ ಖಾತೆಗೆ ಹೋಗಿರುವ ಅನೇಕ ಪ್ರಕರಣಗಳು ನನ್ನ ಗಮನಕ್ಕೆ ಬಂದಿದೆ. ಕಡೂರು ಒಂದೇ ತಾಲೂಕಿನಲ್ಲಿ 6 ಕೋಟಿ ರೂ. ಪರಿಹಾರದ ಹಣ ಅಕ್ರಮ ನಡೆದಿದೆ ಎಂದರು.
ಹಣ ದುರ್ಬಳಕೆಯಾದವರ ಪಟ್ಟಿ ನನ್ನ ಬಳಿ ಇದೆ. ಹಾನಗಲ್, ಶಿಗ್ಗಾಂವ್ನಲ್ಲೂ ಇಂತಹ ಪ್ರಕರಣಗಳು ಕಂಡುಬಂದಿದೆ. ಗರಿಷ್ಠ 5 ಎಕರೆ ವರೆಗೆ ಪರಿಹಾರ ಕೊಡಬಹುದು. ಆದರೆ, 5 ಎಕರೆ ಮೀರಿ ಪರಿಹಾರ ವಿತರಿಸಿದ್ದಾರೆ.
ಇದನ್ನೂ ಓದಿ: Milk incentive details-ಹಾಲಿನ ಪ್ರೋತ್ಸಾಹ ಧನ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ!
ರೈತರಲ್ಲದವರ ಖಾತೆಗೆ 49,999 ಜಮೆ ಆಗಿದೆ. ಅಸಲಿ ರೈತರ ಖಾತೆಗೆ ಅಲ್ಪ ಪ್ರಮಾಣದ ಮೊತ್ತ ಮಾತ್ರ ಜಮೆ ಆಗಿದೆ. ಇದೇ ಕಾರಣಕ್ಕೆ ಈ ಬಾರಿ ರೈತರಿಗೆ ಬರ ಪರಿಹಾರ ನೀಡಲು ಫ್ರೂಟ್ಸ್ ದಾಖಲಾತಿ ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಈ ಹಿಂದೆ ಫ್ರೂಟ್ಸ್ ತಂತ್ರಾಂಶದಲ್ಲಿ 7.7 ಲಕ್ಷ ರೈತರ ಜಮೀನು ಮತ್ತು ಬ್ಯಾಂಕ್ ಖಾತೆ ವಿವರ ದಾಖಲಾಗಿರಲ್ಲಿ ಇದೀಗ ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
Parihara status-15 ಲಕ್ಷಕ್ಕೂ ಅಧಿಕ ರೈತರಿಗೆ ಈಗಾಗಲೇ ಹಣ ಪಾವತಿ:
ಪ್ರಸ್ತುತ 34 ಲಕ್ಷ ರೈತರ ಜಮೀನ ಮಾಹಿತಿಯನ್ನು ಈ ತಂತ್ರಾಂಶದಲ್ಲಿ ದಾಖಲು ಮಾಡಲಾಗಿದೆ. ಬಿಟ್ಟು ಹೋಗಿರುವ ಅರ್ಹ ರೈತರ ಮಾಹಿತಿಯನ್ನು ಮತ್ತೆ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ 15 ದಿನಗಳಿಂದ ನಮ್ಮ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದು, ರೈತರ ಹಣ ದುರುಪಯೋಗವಾಗದಂತೆ ಅವರಿಗೆ ತಲುಪಿಸಲಾಗುವುದು. ಈಗಾಗಲೇ ಈ ಪ್ರಕ್ರಿಯೆ ಆರಂಭವಾಗಿದ್ದು, 15 ಲಕ್ಷಕ್ಕೂ ಅಧಿಕ ರೈತರಿಗೆ ಈಗಾಗಲೇ ಹಣ ತಲುಪಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್
ಮುಂದಿನ ವಾರದೊಳಗೆ 30 ಲಕ್ಷ ರೈತರಿಗೆ ಪರಿಹಾರದ ಹಣ ತಲುಪಲಿದೆ ಎಂದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಇನ್ನೂ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, NDRF ಮಾರ್ಗಸೂಚಿ ಪ್ರಕಾರ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22 ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಬರ ಪರಿಹಾರ ಅರ್ಹ ಪಟ್ಟಿ ಮತ್ತು ಹಣ ಪಾವತಿ ಸ್ಥಿತಿ ಇತ್ಯಾದಿ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: click here