Yashaswini yojana-2024: ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಆಹ್ವಾನ! 5.00 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗೆ ಅವಕಾಶ.

ಕಳೆದ ವರ್ಷ ಯಶಸ್ವಿನಿ ಯೋಜನೆಯಡಿ ಕಾರ್ಡ ಪಡೆದವರು ಮತ್ತು ಹೊಸದಾಗಿ ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಹ ಫಲಾನುಭವಿಗಳು ಕೂಡಲೇ ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಯನ್ನು ಭೇಟಿ ಮಾಡಿ ಯಶಸ್ವಿನಿ ಕಾರ್ಡ ನವೀಕರಣ ಮಾಡಿಕೊಳ್ಳಬವುದು ಮತ್ತು ಹೊಸದಾಗಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಬವುದು.

ಯಾರೆಲ್ಲ ಅರ್ಜಿ ಸಲ್ಲಿಸಬವುದು? ಈ ಯೋಜನೆಯಡಿ ಯಾವೆಲ್ಲ ಸೌಲಭ್ಯ ಸಿಗಲಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿ ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Ration card news-ತುರ್ತು ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಒಂದು ದಿನ ಅವಕಾಶ!

Yashaswini scheme- ಯೋಜನೆ ಹಿನ್ನೆಲೆ:

ಈ ಹಿಂದೆ ಸಹಕಾರ ಇಲಾಖೆಯಲ್ಲಿ ಯಶಸ್ವಿನಿ ಯೋಜನೆಯನ್ನು 2003 ರಲ್ಲಿ ಪ್ರಾರಂಭಿಸಿದ್ದು, 2003-04 ರಿಂದ 2017-18 ರವರೆಗೆ ಜಾರಿಯಲ್ಲಿದ್ದು ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡಿದ್ದು ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡಿದ್ದು, ದಿನಾಂಕ: 31-05-2018 ರಿಂದ ಈ ಯೋಜನೆಯು ಸ್ಥಗಿತಗೊಂಡಿದ್ದು, ದಿನಾಂಕ: 31-06-2018 ರಿಂದ ಆರೋಗ್ಯ ಕರ್ನಾಟಕ ಯೋಜನೆಯಡಿ ವಿಲೀನಗೊಂಡಿರುತ್ತದೆ.

ರಾಜ್ಯದೆಲ್ಲೆಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022-23 ನೇ ಸಾಲಿನ ಆಯವ್ಯಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರುಜಾರಿಗೊಳಿಸಲು ತೀರ್ಮಾನಿಸಿ ರೂ. 300/- ಕೋಟಿಗಳ ಅವಕಾಶ ಕಲ್ಪಿಸಿ ಆಯವ್ಯಯದಲ್ಲಿ ಈ ಯೋಜನೆಯನ್ನು ಘೋಷಿಸಿತ್ತು.

ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಜಾರಿಗೊಂಡಿರುವ ಒಂದು ವಿಶೇಷ ಯೋಜನೆಯಾಗಿದ್ದು, ಇದರಲ್ಲಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕಿಯ ಚಿಕಿತ್ಸಾ ವೆಚ್ಚದ ಗರಿಷ್ಠ ಮಿತಿ ರೂ. 5.00 ಲಕ್ಷಕ್ಕೆ ನಿಗಧಿಪಡಿಸಿದೆ. ರಾಜ್ಯದ ಯಾವುದೇ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ.

ಇದನ್ನೂ ಓದಿ: PM-kisan: ಪಿ ಎಂ ಕಿಸಾನ್ ಯೋಜನೆಯಡಿ ಎಷ್ಟು ಹಣ ಬಂದಿದೆ ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್!

Yashaswini yojana application- ಎಲ್ಲಿ ಅರ್ಜಿ ಸಲ್ಲಿಸಬೇಕು?

ಅಗತ್ಯ ದಾಖಲಾತಿ ಸಮೇತ ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ(ಸೊಸೈಟಿ) ಶಾಖೆ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.

Required documents for yashaswini yojana- ಅಗತ್ಯ ದಾಖಲಾತಿ ಮಾಹಿತಿ:

(1) ಪಡಿತರ ಚೀಟಿ ಪತಿ

(2) ಪ್ರತಿ ಸದಸ್ಯರ ಆಧಾರ್ ಕಾರ್ಡ್

(3) ಪ್ರತಿಯೊಬ್ಬರ ಎರಡು ಫೋಟೋ

(4) ಪರಿಶಿಷ್ಟ ಜಾತಿ/ಪಂಗಡದ ಸದಸ್ಯರು ಕುಟುಂಬದ ಪ್ರತಿಯೊಬ್ಬರ ಆರ್ ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.

Yashaswini yojana fee- ಪಾವತಿ ವಂತಿಕೆದರ ವಿವರ:

ಸಾಮನ್ಯ ವರ್ಗ: A) ನಗರವಾಸಿ-1000 ರೂ B) ಗ್ರಾಮಾಂತರ-500 ರೂ ಪರಿಶಿಷ್ಟ ಜಾತಿ/ಪಂಗಡದ ಸದಸ್ಯರಿಗೆ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Ujjwala yojana 2.0 application-ಉಜ್ವಲ 2.0 ಯೋಜನೆಯಡಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ ಪಡೆಯಲು ಅರ್ಜಿ ಆಹ್ವಾನ!

Yashaswini card benefits-ಯಾವೆಲ್ಲ ಸೌಲಭ್ಯಗಳನ್ನು ಯಶಸ್ವಿನಿ ಕಾರ್ಡ್ ಸದಸ್ಯರಿಗೆ ಒದಗಿಸಲಾಗುತ್ತದೆ?

ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಜಾರಿಗೊಂಡಿರುವ ಒಂದು ವಿಶೇಷ ಯೋಜನೆಯಾಗಿದ್ದು, ಇದರಲ್ಲಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕಿಯ ಚಿಕಿತ್ಸಾ ವೆಚ್ಚದ ಗರಿಷ್ಠ ಮಿತಿ ರೂ. 5.00 ಲಕ್ಷಕ್ಕೆ ನಿಗಧಿಪಡಿಸಿದೆ. ರಾಜ್ಯದ ಯಾವುದೇ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ.

ಯಶಸ್ವಿನಿ ಯೋಜನೆಯಡಿಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು ಹಾಗೂ ಈ ಯೋಜನೆಯಡಿ ಇತರೆ ಅನುಸೂಚಿತ ಸಾಮಾನ್ಯ ರೋಗಿಗಳಿಗೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು.

ಇದನ್ನೂ ಓದಿ: sprinkler set subsidy- ಕೃಷಿ ಇಲಾಖೆಯಿಂದ ರೂ 2496/-  ಗೆ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

ಪ್ರಾರಂಭೀಕವಾಗಿ ಆಯುಷ್ಮಾನ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಅಳವಡಿಸಿಕೊಂಡಿರುವ 1650 ಖಾಯಿಲೆಗಳಿಗೆ ಚಿಕಿತ್ಸೆಗಳನ್ನು ಯಶಸ್ವಿನಿ ಯೋಜನೆಯಲ್ಲಿ ಅವಕಾಶವಿರುತ್ತದೆ. 

ಯಶಸ್ವಿನಿ ಸದಸ್ಯರು ಜನರಲ್ ವಾರ್ಡಿನಲ್ಲಿ ಸೌಲಭ್ಯ ಪಡೆಯುವಲ್ಲಿ ಅರ್ಹತೆ ಹೊಂದಿರುತ್ತಾರೆ. ಯಶಸ್ವಿನಿ ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಯಲ್ಲಿ ಒದಗಿಸಿರುವ ಚಿಕಿತ್ಸಾ ಸೌಲಭ್ಯದಲ್ಲಿ ಔಷಧಿ ವೆಚ್ಚ, ಆಸ್ಪತ್ರೆ ವೆಚ್ಚ, ಶಸ್ತ್ರ ಚಿಕಿತ್ಸೆಯ ವೆಚ್ಚ, ಆಪರೇಷನ್ ಥಿಯೇಟರ್ ಬಾಡಿಗೆ, ಅರವಳಿಕೆ ತಾರ ಫೀ, ಕನ್ಸಲ್ಟಂಟ್ ಫೀ, ಬೆಡ್ ಚಾರ್ಜ್. ನರ್ಸ್ ಫೀ ಇತ್ಯಾದಿ ವೆಚ್ಚ ಒಳಗೊಂಡಿರುತ್ತದೆ.

ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ವಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ. 200/- ಗಳ (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ನೆಟ್ ವರ್ಕ್ ಆಸ್ಪತ್ರೆಗಳು ಇದಕ್ಕಿಂತ ಹೆಚ್ಚಿನ ಶುಲ್ಕವನ್ನು ಸದಸ್ಯರಿಗೆ ವಿಧಿಸತಕ್ಕದ್ದಲ್ಲ. ಈ ಪೈಕಿ ರೂ. 100/-ಗಳನ್ನು ಯಶಸ್ವಿನಿ ಟ್ರಸ್ಟ್ ನ ವತಿಯಿಂದ ಪಾವತಿಸಲಾಗುತ್ತದೆ.

ಸದಸ್ಯರು ಯಶಸ್ವಿನಿ ಕಾರ್ಡ್ ಪಡೆದ 15 ದಿನಗಳ ನಂತರ ಯಶಸ್ವಿನಿ ಕಾರ್ಡುದಾರರು ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ.

ಯಶಸ್ವಿನಿ ಯೋಜನೆಯ ಸಂಪೂರ್ಣ ಮಾಹಿತಿ ಕೈಪಿಡಿ: Donwload Now