Adarsha school admission- ಉಚಿತವಾಗಿ ವಿದ್ಯಾಭ್ಯಾಸಕ್ಕೆ ಶಾಲೆ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Adarsha school admission: 2024-25 ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ 6 ನೇ ತರಗತಿಗಳಿಗೆ ಪ್ರವೇಶಕ್ಕಾಗಿ(Adarsha school admission) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

Adarsha school admission- ಉಚಿತವಾಗಿ ವಿದ್ಯಾಭ್ಯಾಸಕ್ಕೆ ಶಾಲೆ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
Adarsha school admission-2024

2024-25 ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ 6 ನೇ ತರಗತಿಗಳಿಗೆ ಪ್ರವೇಶಕ್ಕಾಗಿ(Adarsha school admission) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಗುಣಾತ್ಮಕ ಶಿಕ್ಷಣವನ್ನು ಪ್ರತಿಭಾವಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆದರ್ಶ ವಿದ್ಯಾಲಯದ ಶಾಲೆಗಳನ್ನು ಸರಕಾರದಿಂದ ಸ್ಥಾಪನೆ ಮಾಡಲಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಶಾಲೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಅರ್ಹ ವಿದ್ಯಾರ್ಥಿಗಳು ಕೂಡಲೇ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಶಾಲೆಯ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Ration card application-ಗ್ರಾಮ ಒನ್ ನಲ್ಲಿ ರೇಷನ್ ಕಾರ್ಡಗೆ ಹೊಸ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Adarsha school admission-2024: ಪ್ರಮುಖ ದಿನಾಂಕಗಳು:

> ಅರ್ಜಿ ಸಲ್ಲಿಸಲು ಕೊನೆಯ ದಿನ: 06 ಫೆಬ್ರವರಿ 2024

> ಆದರ್ಶ ವಿದ್ಯಾಲಯದ ದಾಖಲಾತಿಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 03 ಮಾರ್ಚ್ 2024 ರಂದು ಬೆಳಿಗ್ಗೆ 10:30 ರಿಂದ 1:00 ಗಂಟೆಯ ವರೆಗೆ.

> ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನು ದಿನಾಂಕ 19 ಫೆಬ್ರವರಿ 2023 ರಿಂದ ಪಡೆಯಬಹುದು.

Adarsha school application: ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

  • ವಿದ್ಯಾರ್ಥಿಯ SATS Number
  • ಆಧಾರ ಕಾರ್ಡಪ್ರತಿ
  • ಇತ್ತೀಚಿನ ಭಾವಚಿತ್ರ
  • ಜಾತಿ ಪ್ರಮಾಣಪತ್ರ (ಮಿಸಲಾತಿ ಬಯಸಿದ್ದಲ್ಲಿ)
  • ವಿಕಲಚೇತನ ವಿದ್ಯಾರ್ಥಿಗಳಾಗಿದ್ದರೆ, ಸಕ್ಷಮ ಪ್ರಾಧಿಕಾರಿಗಳಿಂದ ಪಡೆದ ಪ್ರಮಾಣಪತ್ರ
  • ಪಾಲಕ-ಪೋಷಕರ ಮೊಬೈಲ್ ನಂಬರ್
  • ಪಾಲಕರು ತಮ್ಮ ಮಕ್ಕಳನ್ನು ಬೇರೆ ತಾಲೂಕ, ಜಿಲ್ಲೆ, ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ತಹಶೀಲ್ದಾರ ರಿಂದ ಪಡೆದ ವಾಸಸ್ಥಳ ಪ್ರಮಾಣಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರ ದಾಖಲೆಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: ಕೇರಾ ಸುರಕ್ಷಾ ರೂ. 94/- ಪಾವತಿ ಮಾಡಿ 5 ಲಕ್ಷ ವಿಮಾ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

ಎಲ್ಲಿ ಅರ್ಜಿ ಸಲ್ಲಿಸಬೇಕು?

ಪ್ರಸ್ತುತ 5 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೇಲೆ ತಿಳಿಸಿರು ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ  Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಆನೈಲ್ ಮೂಲಕ ಅರ್ಜಿ ಸಲ್ಲಿಸಲು ಸಾಮಾನ್ಯ ಸೂಚನೆಗಳು:

1) ಆನ್‌ ಲೈನ್‌ನ ಮೂಲಕ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಭ್ಯರ್ಥಿಗಳು ಜಾಹಿರಾತು, ಸೂಚನೆಗಳನ್ನು ಅರ್ಥೈಸಿಕೊಂಡು ಅರ್ಹ ಮಾನದಂಡಗಳು ತೃಪ್ತಿಕರವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು.

2) 5ನೇ ತರಗತಿ ಓದುತ್ತಿರುವ ಕರ್ನಾಟಕ ರಾಜ್ಯದ ನಿವಾಸಿ ವಿದ್ಯಾರ್ಥಿಗಳಿಗೆ ಮಾತ್ರ ಈ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು, ಇತರೆ ರಾಜ್ಯಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತೆ ಹೊಂದಿರುವುದು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. 

3) ಆದರ್ಶ ವಿದ್ಯಾಲಯಗಳಿರುವ ಬ್ಲಾಕ್‌ಗಳಲ್ಲಿ ವಾಸಿಸುವ ಅಥವಾ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಮಾತ್ರ ಆನ್ವಯಿಸುತ್ತದೆ. ಆದರೆ ಅಭ್ಯರ್ಥಿಗಳು ಬೇರೆ ಬ್ಲಾಕ್‌ಗಳಲ್ಲಿ ವಾಸಿಸುತ್ತಿದ್ದಲ್ಲಿ ಅಥವಾ ಅಧ್ಯಯನ ಮಾಡುತ್ತಿದ್ದಲ್ಲಿ ಅಧಿಸೂಚನೆಯನ್ವಯ ತಿಳಿಸಿದ ಅಗತ್ಯ ದಾಖಲೆಗಳನ್ನು ಒದಗಿಸಬೇಕು.

ಇದನ್ನೂ ಓದಿ: Voter list-2024: ಲೋಕಸಭೆ ಚುನಾವಣೆ ಅಂತಿಮ 5.37 ಕೋಟಿ ಮತದಾರರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ? ಚೆಕ್ ಮಾಡಿ.

4) ಕರ್ನಾಟಕ ರಾಜ್ಯಕ್ಕೆ ಸೇರಿದ ಅಭ್ಯರ್ಥಿಯು ಯಾವುದಾದರು ಒಂದು ಶಾಲೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳತಕ್ಕದ್ದು.

5) ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯ ಪೋಷಕರು ತಮ್ಮ ಸ್ವಂತ ಮೊಬೈಲ್ ಸಂಖ್ಯೆಯನ್ನು ನೀಡತಕ್ಕದ್ದು. ಕೆಲವು ಮಾಹಿತಿ/ಸೂಚನೆಗಳನ್ನು ನಿಮ್ಮ ಕಳುಹಿಸಿಕೊಡಲಾಗುವುದು. ಮೊಬೈಲ್ ಸಂಖ್ಯೆಗೆ

6. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಯು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆಯನ್ನು ತರತಕ್ಕದ್ದು.  ಒಂದು ವೇಳೆ ಯಾವುದೇ ವಿದ್ಯಾರ್ಥಿಯು SATS ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ತಮ್ಮ ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ತಮ್ಮ SATS ಸಂಖ್ಯೆಯನ್ನು ಪಡೆದ ನಂತರವೇ ಅರ್ಜಿ ಸಲ್ಲಿಸುವುದು. 

ಎಲ್ಲಾ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಆನ್ ಲೈನ್ ನಲ್ಲಿ ಅಪ್‌ಲೋಡ್ ಮಾಡುವುದು. ಎಲ್ಲಾ ದಾಖಲೆಗಳು jp8/jpeg ಮತ್ತು 300kb ಗಾತ್ರದಲ್ಲಿ ಸಿದ್ಧಪಡಿಸಿರಬೇಕು.

ಅರ್ಜಿ ಸಲ್ಲಿಸುವ ಮೊದಲು ಈ ಲಿಂಕ್ Application guide ಮೇಲೆ ಕ್ಲಿಕ್ ಮಾಡಿ ಸಂಬಂಧಪಟ್ಟ ಇಲಾಖೆಯಿಂದ ನೀಡಿರುವ ಸೂಚನೆಗಳನ್ನು ಸಂಪೂರ್ಣವಾಗಿ ಓದಿಕೊಂಡು ಬಳಿಕ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಅರ್ಜಿ ಸಲ್ಲಿಸುವುದು ಉತ್ತಮ.

ಇದನ್ನೂ ಓದಿ: Agriculture loan Interest-ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು? ಅಧಿಕೃತ ಮಾರ್ಗಸೂಚಿ ಬಿಡುಗಡೆ!

ಉಪಯುಕ್ತ ಕೊಂಡಿಗಳು:

Application link- ಅರ್ಜಿ ಸಲ್ಲಿಸಲು ಲಿಂಕ್: Apply Now

Adarsha school- ನಿಮ್ಮ ಹತ್ತಿರದ ಆದರ್ಶ ಶಾಲೆಯ ಸಂಪರ್ಕ ವಿವರ ಪಡೆಯಲು ಲಿಂಕ್: click here

Adarsha school details- ನಿಮ್ಮ ತಾಲ್ಲೂಕಿನಲ್ಲಿ ಆದರ್ಶ ಶಾಲೆ ಎಲ್ಲಿದೆ ಎಂದು ತಿಳಿಯಲು: click here

ಆದರ್ಶ ವಿದ್ಯಾಲಯ ಇಲ್ಲಿಯವರೆಗೆ ಎಷ್ಟು ಅರ್ಜಿ ಸ್ವೀಕರಿಸಲಾಗಿದೆ ಎನ್ನುವ ಮಾಹಿತಿ: click here