Agriculture loan Interest-ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು? ಅಧಿಕೃತ ಮಾರ್ಗಸೂಚಿ ಬಿಡುಗಡೆ!

ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ(Agriculture loan Interest) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು? ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ವಾರ್ತಾ ಇಲಾಖೆಯ ಪತ್ರಿಕಾ ಪಕಟಣೆ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Agriculture loan Interest-ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು? ಅಧಿಕೃತ ಮಾರ್ಗಸೂಚಿ ಬಿಡುಗಡೆ!
Agriculture loan Interest subsidy-2024

ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ(Agriculture loan Interest) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು? ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ವಾರ್ತಾ ಇಲಾಖೆಯ ಪತ್ರಿಕಾ ಪಕಟಣೆ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಪಟ್ಟ ಕೆಲವು ಷರತ್ತುಗಳು ಏನು? ರೈತರ ಕೃಷಿ ಸಾಲದ ಬಡ್ಡಿ ಮನ್ನಾ ಷರತ್ತುಗಳೇನು? ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿಸೆಂಬರ್‌ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದ್ದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಇದೀಗ, ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

Agriculture loan Interest-ರೈತರ ಕೃಷಿ ಸಾಲದ ಬಡ್ಡಿ ಮನ್ನಾ ಷರತ್ತುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ:

• ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ.

• ನಿಗದಿತ ಸಹಕಾರ ಸಂಘಗಳಲ್ಲದೇ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಯೋಜನೆ ಅನ್ವಯಿಸುವುದಿಲ್ಲ.

• ನಬಾರ್ಡ್ ಗುರುತಿಸಿದ ಕೃಷಿ/ ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶು ಸಂಗೋಪನೆ, ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್, ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ.

• ರಾಜ್ಯ ಸರ್ಕಾರದ ಬಡ್ಡಿ ರಿಯಾಯಿತಿ ಬದ್ಧತೆಯಡಿ ವಿತರಿಸಿರುವ ಕೃಷಿ/ ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅನ್ವಯವಾಗುತ್ತದೆ.

• ಮಾರಟೊರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಅನ್ವಯ್ವಾಗುತ್ತದೆ.

ಇದನ್ನೂ ಓದಿ: Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

bank loan Interest- ರೈತರ ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾ ಈ ಕೆಳಗಿನ ಷರತ್ತುಗಳಿಗೆ ಅನ್ವಯವಾಗಿರುತ್ತದೆ:

• ನಿಗದಿತ ಸಹಕಾರ ಸಂಘಗಳ ಸಾಲಕ್ಕೆ ಮಾತ್ರ ಅನ್ವಯ

• ಫೆಬ್ರವರಿ 29ರೊಳಗೆ ಸಾಲ ಪಾವತಿಸಿದರೆ ಮಾತ್ರ ಬಡ್ಡಿ ಮನ್ನಾ

• ₹ 10 ಲಕ್ಷದವರೆಗಿನ ಸಾಲದ ಬಡ್ಡಿಗೆ ಅನ್ವಯವಾಗುತ್ತದೆ.

ಈ ಹಿಂದಿನ ವರ್ಷದಲ್ಲಿ ನೀಡಿದ ಬಡ್ಡಿ ಸಹಾಯಧನ ವಿವರ ಹೀಗಿದೆ:

ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೇ.0 ಬಡ್ಡಿದರ ಅನ್ವಯವಾಗುವಂತೆ ರೂ 3 ಲಕ್ಷಗಳವರೆಗೆ ಅಲ್ಪಾವಧಿ ಕೃಷಿ ಸಾಲ ಮತ್ತು ರೂ.2 ಲಕ್ಷಗಳವರೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ದುಡಿಯುವ ಬಂಡವಾಳ ಸಾಲ ವಿತರಿಸಲಾಗುತ್ತಿದೆ. ಶೇ. 3 ರ ಬಡ್ಡಿ ದರದಲ್ಲಿ ರೂ.10 ಲಕ್ಷಗಳವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬAಧಿತ ಸಾಲವನ್ನು ನೀಡಲಾಗುತ್ತಿದ್ದು, ಸಹಕಾರ ಸಂಸ್ಥೆಗಳಿಗೆ ಬಡ್ಡಿ ಸಹಾಯಧನವನ್ನು ಸರ್ಕಾರದಿಂದ ಭರಿಸಲಾಗುತ್ತಿದೆ.

ಇದನ್ನೂ ಓದಿ: Parihara amount-2024: 30 ಲಕ್ಷ ರೈತರಿಗೆ ಬರ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಸರ್ಕಾರವು ರಿಯಾಯಿತಿ ಬಡ್ಡಿ ದರದಲ್ಲಿ ವಿತರಿಸಿದ ಕೃಷಿ ಸಾಲಗಳನ್ನು ವಿತರಿಸಿದ ಸಹಕಾರ ಸಂಸ್ಥೆಗಳಿಗೆ ನಿಗದಿತ ದರದಲ್ಲಿ ಬಡ್ಡಿ ಸಹಾಯಧನವನ್ನು ನೀಡಲಾಗುತ್ತಿದ್ದು, 2018-19 ರಲ್ಲಿ 19,89,021 ರೈತರ ಪರವಾಗಿ 777.49 ಕೋಟಿಗಳನ್ನು ಮತ್ತು 2019-20 ನೇ ಸಾಲಿನಲ್ಲಿ 23,90,822 ರೈತರ ಪರವಾಗಿ ರೂ. 1028.35 ಕೋಟಿಗಳನ್ನು ಮತ್ತು 2020-21 ರಲ್ಲಿ 2350433 ರೈತರ ಪರವಾಗಿ ರೂ. 993.33 ಕೋಟಿಗಳನ್ನು ಸಹಕಾರ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿದೆ. 2020-21 ನೇ ಸಾಲಿನಲ್ಲಿ  ವರ್ಷದಲ್ಲಿ ಜನವರಿ  ಅಂತ್ಯದವರೆವಿಗೆ 15,50,236 ರೈತರ ಪರವಾಗಿ ರೂ. 766.50 ಕೋಟಿ ಅನುದಾನವನ್ನು ಸಹಕಾರ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿರುತ್ತದೆ.

ಇದನ್ನೂ ಓದಿ: January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.