Indian Air Force Jobs-2024: ಭಾರತೀಯ ವಾಯುಪಡೆ ಇಲಾಖೆಯಿಂದ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ!

Air Force Job application-2024: ಭಾರತೀಯ ವಾಯುಪಡೆಯು, ಇಲಾಖೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Indian Air Force Jobs-2024: ಭಾರತೀಯ ವಾಯುಪಡೆ ಇಲಾಖೆಯಿಂದ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ!
Air Force Job application-2024

ಭಾರತೀಯ ವಾಯುಪಡೆಯು, ಇಲಾಖೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ವಾಯುಪಡೆಯಲ್ಲಿ (Indian Air force) ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ.

Indian Air Force Recruitment - ಭಾರತೀಯ ವಾಯುಪಡೆಯಲ್ಲಿ ಫ್ಲೈಯಿಂಗ್ ಬ್ರಾಂಚ್, ಗ್ರೌಂಡ್ ಡ್ಯೂಟಿ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಪ್ರಕಟಗೊಂಡ ಅಧಿಕೃತ ಅಧಿಸೂಚನೆ ಪ್ರಕಾರ ನೇಮಕಾತಿಯ ಸಂಪೂರ್ಣ ವಿವರವನ್ನು ಹಾಗೂ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳನ್ನು ಇಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Free mashroom training-ಉಚಿತ 10 ದಿನದ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!

ನೇಮಕಾತಿ ಮಾಹಿತಿ - Recruitment Details 

• ನೇಮಕಾತಿ ಇಲಾಖೆ - ಭಾರತೀಯ ವಾಯುಪಡೆ 
• ಒಟ್ಟು ನೇಮಕಾತಿ ಹುದ್ದೆಗಳು - 304 ಹುದ್ದೆಗಳು 
• ಉದ್ಯೋಗ ಸ್ಥಳ - ಭಾರತದಾದ್ಯಂತ

ಭಾರತೀಯ ವಾಯುಪಡೆಯಲ್ಲಿ, ಭಾರತದಾದ್ಯಂತ ಖಾಲಿ ಇರುವ ಒಟ್ಟು 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: BPNL Recruitment 2024: 10th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ 5250 ಹುದ್ದೆಗಳಿಗೆ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!

ಖಾಲಿ ಹುದ್ದೆಗಳ ಮಾಹಿತಿ - ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಹುದ್ದೆಗಳ ವಿವರವು ಹೀಗಿದೆ:


• ಪ್ಲೈಯಿಂಗ್ ಬ್ರಾಂಚ್ - 29 ಹುದ್ದೆಗಳು 
• ಗ್ರೌಂಡ್ ಡ್ಯೂಟಿ (ತಾಂತ್ರಿಕ) - 156 ಹುದ್ದೆಗಳು 
• ಗ್ರೌಂಡ್ ಡ್ಯೂಟಿ (ತಾಂತ್ರಿಕೇತರ) - 119 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು : 

Educational Qualification - ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಶೇಕಡ 50ರಷ್ಟು ಅಂಕಗಳೊಂದಿಗೆ 12ನೇ ತರಗತಿಯಲ್ಲಿ ಪಾಸಾಗಿರಬೇಕು (ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ)

Age Limit - ಭಾರತೀಯ ವಾಯುಪಡೆಯಿಂದ ಪ್ರಕಟಗೊಂಡಿರುವ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 26 ವರ್ಷದ ಒಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಅನ್ವಯವಾಗಲಿದೆ.

ಇದನ್ನೂ ಓದಿ: Agriculture land info-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇದನ್ನು ಹೇಗೆ ಸರಿಪಡಿಸಿಕೊಳ್ಳುವುದು?

ವೇತನ ಶ್ರೇಣಿ - Indian Air Force Recruitment 2024 : ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನವು ₹56,100/- ರಿಂದ ₹1,77,500/- ರವರೆಗೆ ಇರಲಿದೆ.

ಅರ್ಜಿ ಶುಲ್ಕ - ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು ₹500/-

ಪ್ರಮುಖ ದಿನಗಳು -

• ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 30 ಮೇ 2024
• ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ : 28 ಜೂನ್ 2024

ಪ್ರಮುಖ ಲಿಂಕ್ ಗಳು : 

• ಅಧಿಕೃತ ಜಾಲತಾಣ : Click here

• ಅಧಿಕೃತ ಅಧಿಸೂಚನೆ : Download Now