Anganwadi Recruitment-2024: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ(WCD Anganawadi Recruitment 2024) ಆರಂಭವಾಗಿದೆ.

Anganwadi Recruitment-2024: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ!
Anganawadi Recruitment-2024

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ(WCD Anganawadi Recruitment 2024) ಆರಂಭವಾಗಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ, ಆಯ್ಕೆಯಾದವರೆಗೆ ಸಿಗುವ ವೇತನ ಶ್ರೇಣಿ ಹಾಗೂ ನೇಮಕಾತಿಯ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಗಸ್ಟ್ 4 2024 ರ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಲೇಖನದ ಕೊನೆಯ ಭಾಗದಲ್ಲಿ ನೀಡಿರುವಂತಹ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ನಂತರ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Input subsidy amount-ನಿಮ್ಮ ಸರ್ವೆ ನಂಬರ್ ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಎಷ್ಟು ಬಂದಿದೆ ಎಂದು ತಿಳಿಯಿರಿ!

Recruitment Details-ನೇಮಕಾತಿ ವಿವರ : 

• ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ 
• ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು 
• ಉದ್ಯೋಗ ಸ್ಥಳ : ಬೆಳಗಾವಿ

Education Qualificaton- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ವಿದ್ಯಾರ್ಹತೆ : 

• ಬೆಳಗಾವಿ ಜಿಲ್ಲೆಯ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಆಗಿರಬೇಕು. 
• ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

Age limit- ವಯೋಮಿತಿ ಮಾನದಂಡ: 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಮಿತಿಯಲ್ಲಿರಬೇಕು.

ಇದನ್ನೂ ಓದಿ: Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

Salary details- ಆಯ್ಕೆಯಾದವರಿಗೆ ಸಿಗುವ ಮಾಸಿಕ ಗೌರವ ಧನ : 

• ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಮಾಸಿಕ ₹10,000/-
• ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಮಾಸಿಕ ₹5,000/-

Application fee-ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಇರುವುದಿಲ್ಲ.

Important Date-ನೇಮಕಾತಿಯ ಪ್ರಮುಖ ದಿನಾಂಕಗಳು: 

• ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : ಜುಲೈ 08, 2024
• ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 04, 2024

ಇದನ್ನೂ ಓದಿ: June gruhalakshmi amount-2024: ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ! ಇಲ್ಲಿದೆ ಹೊಸ ಅಪ್ಡೇಟ್!

Website link-ಪ್ರಮುಖ ಲಿಂಕ್ ಗಳು : 

• ಅರ್ಜಿ ಲಿಂಕ್ : Click here
• ಅಧಿಸೂಚನೆ : Download Now