Anganwadi Helpers Recruitment-2023: ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಸಹಾಯಕಿಯರ(Anganwadi Helpers Recruitment-2023) ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ದಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಸಹಾಯಕಿಯರ(Anganwadi Helpers Recruitment-2023) ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡದ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ ಆಸಕ್ತರು ಅರ್ಜಿ ಸಲ್ಲಿಸಬವುದು ಸ್ಥಳೀಯರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿರುತ್ತದೆ.

ಇತರೆ ಜಿಲ್ಲೆಯವರು ಖಾಲಿ ಹುದ್ದೆ ಮಾಹಿತಿ ಪಡೆಯುವುದು ಹೇಗೆ:

ಈ ಜಿಲ್ಲೆಯನ್ನು ಹೊರತುಪಡಿಸಿ ಇತರೆ ಜಿಲ್ಲೆಯವರು ನಿಮ್ಮ ಜಿಲ್ಲೆಯಲ್ಲಿ ಇರುವ ಖಾಲಿ ಹುದ್ದೆಯ ಮಾಹಿತಿಯನ್ನು ಪಡೆಯಲು ಒಮ್ಮೆ ನಿಮ್ಮ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಭೇಟಿ ಮಾಡಬೇಕು. ಅಥವಾ ಈ ಕೆಳಗೆ ತಿಳಿಸಿರುವ ವಿಧಾನ ಅನುಸರಿಸಿ ನಿಮ್ಮ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ ಪಡೆದು ಒಮ್ಮೆ ವಿಚಾರಿಸಿ ಮಾಹಿತಿ ತಿಳಿದುಕೊಳ್ಳಬವುದು.

ಇದನ್ನೂ ಓದಿ: Gruhalakshmi status check: ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದ್ದರು, ಗೃಹಲಕ್ಷ್ಮಿ ಹಣ  ಜಮಾ ಆಗದಿದ್ದರೆ ಏನು ಮಾಡಬೇಕು?

ಅರ್ಜಿ ಎಲ್ಲಿ ಸಲ್ಲಿಸಬೇಕು

ಅಂಗನವಾಡಿ ಸಹಾಯಕಿಯಾಗಿ ಕೆಲಸ ನಿರ್ವಹಿಸಲು ಆಸಕ್ತಿಯಿರುವವರು ನಿಗದಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಯಿಂದ ಪಡೆದುಕೊಂಡು, 29 ಸೆಪ್ಟೆಂಬರ್ 2023ರ ಸಂಜೆ 5:30 ರೋಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ಸಲ್ಲಿಸಬವುದು.

ಇಲಾಖೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 
ಹುದ್ದೆ ಅಂಗನವಾಡಿ ಸಹಾಯಕಿಯರ 
ಗೌರವಧನ ₹10,000 ರೂ 
ಒಟ್ಟು ಹುದ್ದೆಗಳು  113
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಸೆಪ್ಟೆಂಬರ್ 2023
ಇಲಾಖೆ ವೆಬ್ಸೈಟ್  click here

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ : 0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಅಗತ್ಯ ದಾಖಲಾತಿ ಮಾಹಿತಿ:

1)ಆಧಾರ್ ಕಾರ್ಡ್
2)ಪೋಟೋ
3)ಅರ್ಜಿ ನಮೂನೆ(ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪಡೆಯಬೇಕು)
4)ಜಾತಿ ಮತ್ತು ಆಧಾಯ ಪ್ರಮಾಣ ಪತ್ರ
5)ರೇಷನ್ ಕಾರ್ಡ ಇತ್ಯಾದಿ.

ನಿಮ್ಮ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವಿಳಾಸ ಮತು ಮೊಬೈಲ್ ಸಂಖ್ಯೆಯನ್ನು ಪಡೆಯುವುದು ಹೇಗೆ?

ಸಾರ್ವಜನಿಕರು ನಿಮ್ಮ ತಾಲ್ಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ  ಎಲ್ಲಿದೆ ಮತ್ತು ಅದರಲ್ಲಿ ಕಾರ್ಯನಿರ್ವಹಿಸಲು ಯೋಜನಾಧಿಕಾರಿರವರ ದೂರವಾಣಿ ಸಂಖ್ಯೆಯನ್ನು ಸರಕಾರದ ಈ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಸಂಪೂರ್ಣ ವಿವರವನ್ನು ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದಾಗಿದೆ.

Step-1: ಮೊದಲಿಗೆ https://mahitikanaja.karnataka.gov.in ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರಕಾರದ ಮಾಹಿತಿ ಕಣಜ ಜಾಲತಾಣ ಭೇಟಿ ಮಾಡಬೇಕು ನಂತರ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕು ಆಯ್ಕೆ ಮಾಡಿಕೊಂಡು "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು ಸಂಪೂರ್ಣ ವಿವರ ಗೋಚರಿಸುತ್ತದೆ.

ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ: https://dwcd.karnataka.gov.in/

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ಅಂಕಣಗಳು:

Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

How to check Gruhalakshmi application status: ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?

Anna bhagya DBT amount- 1.07 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ! ನಿಮಗೆ ಬಂತಾ? ಚೆಕ್ ಮಾಡಿ.

Gruha Lakshmi : ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಈಗ ಮತ್ತಷ್ಟು ಸರಳ! ಅರ್ಜಿ ಸಲ್ಲಿಸಲು ಇನ್ನು ಮುಂದೆ ಮೇಸೆಜ್ ಗಾಗಿ ಕಾಯಬೇಕಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಲಕರ್.

Annabhagya August amount: ಅನ್ನಭಾಗ್ಯ  ಆಗಸ್ಟ್ ತಿಂಗಳ ಹಣ ವರ್ಗಾವಣೆ ಪ್ರಾರಂಭ! ನಿಮ್ಮ ಖಾತೆಗೆ ಹಣ ಬಂತಾ ಚೆಕ್ ಮಾಡಿ.

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ರದ್ದಾದ ರೇಷನ್  ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department