- Advertisment -
HomeNew postsAnugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

Last updated on September 30th, 2024 at 02:42 pm

Anugrha Yojana: 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.

ಇದರನ್ವಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆವತಿಯಿಂದ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನ ಮತ್ತು ಯೋಜನೆಯ ಮಾರ್ಗಸೂಚಿಯನ್ನು ತಿಳಿಸಲಾಗಿದ್ದು ಈ ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ.

 Anugrha scheme-2023: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಕಟಣೆ ವಿವರ ಹೀಗಿದೆ:

ಜಾನುವಾರು ಮಾಲೀಕರಿಗೆ ತಿಳಿಸುವುದೇನೆಂದರೆ 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.

ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆಯಬಹುದೆಂದು ಈ ಮೂಲಕ ತಿಳಿಸಿದೆ.

ಪಶುಸಖಿಯರು ಮೃತ ಪಟ್ಟ ಜಾನುವಾರುವಿನ ಮಾಲೀಕರಿಗೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲು ಕೋರಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: Gruhalakshmi 2nd Installment- ರಾಜ್ಯ ಸರಕಾರದಿಂದ ನವರಾತ್ರಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ!

ಎಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ಅಗತ್ಯ ದಾಖಲಾತಿಗಳೇನು?

ರೈತರು ಜಾನುವಾರುಗಳು ಮರಣ ಹೊಂದಿದ್ದ ತಕ್ಷಣ ಸ್ಥಳೀಯ ಪಶು ಆಸ್ಪತ್ರೆಯನ್ನು ಭೇಟಿ ಮಾಡಿ  ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಣ ಪತ್ರ ಪಡೆಯಬೇಕು ನಂತರ ಅರ್ಜಿದಾರರ ಅಧಾರ್ ಕಾರ್ಡ ಮತ್ತು ಬ್ಯಾಂಕ್ ಪಾಸ್ ಬುಕ್ ಸಮೇತ ನಿಮ್ಮ ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿ ಭೇಟಿ ಅರ್ಜಿ ಸಲ್ಲಿಸಬೇಕು.

Pashupalane Helpline number- ಇನ್ನು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬವುದು: 8277100200

ಈ ಸಹಾಯವಾಣಿಯು 24/7 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ. ರೈತರು ಯಾವ ಸಮಯದಲ್ಲಿ ಬೇಕಾದರು ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬವುದು.

ಇದನ್ನೂ ಓದಿ: Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

ರೈತರು ಈ ಸಹಾಯವಾಣಿಯ ಮೂಲಕ ಯಾವೆಲ್ಲ ಮಾಹಿತಿ ಪಡೆಯಬವುದು:

  1. ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ.
  2. ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಯಾವ ದಿನ ನಡೆಯುತ್ತದೆ ಇತ್ಯಾದು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬವುದು.
  3. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹಾಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರ.
  4. ದೇಶಿ ಹಾಗೂ ವಿದೇಶಿ ಜಾನವಾರು ತಳಿಗಳ ಬಗ್ಗೆ ಮಾಹಿತಿ.
  5. ಜಾನುವಾರುಗಳಲ್ಲಿ ನಿಯಮಿತವಾಗಿ ನೀಡಬೇಕಾಗಿರುವ ಲಸಿಕೆಗಳ ಕುರಿತು ವಿವರಣೆ.
  6. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲ ಸೌಲಭ್ಯ ಕುರಿತು ಮಾಹಿತಿ.
  7. ಮಿಶ‍್ರತಳಿ ಹಸು, ಕುರಿ ಮತ್ತು ಮೇಕೆ, ಹಂದಿಗಳ ಅಂದಾಜು ಬೆಲೆ ಹಾಗೂ ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಸ್ಥಳಗಳ ವಿವರ.
  8. ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ.
  9. ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ/ಅಧಿಕಾರಿಗೆ ವರ್ಗಾಯಿಸಿ, ಅಗತ್ಯ ಸೇವೆ ದೊರೆಯುವಂತೆ ಸಹಕರಿಸುವುದು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: October Pension amount-2023: 77.6 ಲಕ್ಷ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳ ಪಿಂಚಣಿ ಹಣ ಜಮೆ! ನಿಮಗೆ ಬಂತಾ ಚೆಕ್ ಮಾಡಿ.

- Advertisment -
LATEST ARTICLES

Related Articles

- Advertisment -

Most Popular

- Advertisment -