ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

ಆದ್ಯತಾ ಕುಟುಂಬಗಳ (ಬಿಪಿಎಲ್-ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿ) , ಎಪಿಎಲ್(ಆದ್ಯತೇತರ ಕುಟುಂಬದ ಪಡಿತರ ಚೀಟಿ) ಕೋರಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಒಂದೆರಡು ವಾರದಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ.

ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ನಿಲ್ಲಿಸಲಾಗಿತ್ತು. ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಪುಟವನ್ನು ಮುಚ್ಚಲಾಗಿತ್ತು. 

ಚುನಾವಣೆ ಮುಗಿದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸರಕಾರದ ಗ್ಯಾರಂಟಿಗಳ ಲಾಭ ಪಡೆಯಲು ಹಲವರು ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸುತ್ತಾರೆಂಬ ಕಾರಣಕ್ಕೆ ಆರಂಭಿಸಿರಲಿಲ್ಲ. ಮುಂದಿನ ಒಂದೆರಡು ವಾರದ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಹೊಸ ಕಾರ್ಡ್‌ಗೆ ಬೇಕಾದ ದಾಖಲೆಗಳು:

ಅಧಾರ್ ಕಾರ್ಡ್.

ಮನೆಯ ಯಜಮಾನಿಯ ಆದಾಯ ಪ್ರಮಾಣ ಪತ್ರ.(ಕಂದಾಯ ಇಲಾಖೆಯಿಂದ ಪಡೆಯಬೇಕು).

ಪಡಿತರ ಚೀಟಿಗೆ ಹೊಸದಾಗಿ ಹೆಸರನ್ನು ಸೇರಿಸುವುದು ಇದಲ್ಲಿ ಆಧಾರ್ ಮತ್ತು ಆದಾಯ ಪ್ರಮಾಣಪತ್ರ ಒದಗಿಸಬೇಕು. ಇದರಲ್ಲಿ ಆರು  ವರ್ಷದ ಕೆಳಗಿನ ಮಕ್ಕಳನ್ನು ಸೇರ್ಪಡೆ ಮಾಡುವುದು ಇದಲ್ಲಿ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ್ ಸಂಖ್ಯೆ ಮತ್ತು ಜನನ ಪ್ರಮಾಣಪತ್ರ ಒದಗಿಸಬೇಕಾಗುತ್ತದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು:

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ https://ahara.kar.nic.in/ ಈ ಜಾಲತಾಣ ಭೇಟಿ ಮಾಡಿ ಅರ್ಜಿದಾರರು ಸ್ವಂತ ತಾವೇ ಅರ್ಜಿ ಸಲ್ಲಿಸಬವುದು ಅಥವಾ ನಿಮ್ಮ ಹತ್ತಿರದ ಗ್ರಾಮ ಪಂಚಾಯತ್ ಕಾರ್ಯಲಯಾದಲ್ಲಿ, ಬೆಂಗಳೂರು ಒನ್ , ಸೈಬರ್ ಕೇಂದ್ರಗಳಲ್ಲಿ ಹೆಸರು ಸೇರ್ಪಡೆ ಮತ್ತು ಹೊಸ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬವುದು.

ಸದ್ಯ ಹೊಸ ಅರ್ಜಿಗೆ ಸಲ್ಲಿಸಲು ಆದೇಶ ಹೊರಡಿಸಿಲ್ಲ ಕಳೆದ ವಾರ‍ ಪತ್ರಿಕಾ ಮಾದ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ನಿರ್ದೇಶಕರು ಜ್ಞಾನೇಂದ್ರಕುಮಾರ ಗಂಗ್ವಾರ್ ರವರು ಇನ್ನೂ ಒಂದೆರಡು ವಾರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

ಅರ್ಜಿ ಸಲ್ಲಿಸಲು ಅರ್ಹರು:

ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು ಮತ್ತು ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷರೂ. ಮಿತಿಯಲ್ಲಿರಬೇಕು.

ಹೆಚ್ಚಿನ ಮಾಹಿತಿ ಮತ್ತು ಯಾವುದೇ ಸಲಹೆ ಅಥವಾ ದೂರುಗಳಿಗೆ ಆಹಾರ ಇಲಾಖೆಯ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ: 1967, 14445 ಅಥವಾ 1800-425-9339.