free Bike Repair Training: 1 ತಿಂಗಳ ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ! ಸೆ.20 ಅರ್ಜಿ ಸಲ್ಲಿಸಲು ಕೊನೆಯ ದಿನ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆ,ಕುಮಟಾ ಉತ್ತರಕನ್ನಡ ಜಿಲ್ಲೆಯ ಕೇಂದ್ರದಿಂದ 30 ದಿನಗಳ ಉಚಿತ ದ್ವಿಚಕ್ರ ವಾಹನ ದುರಸ್ತಿಗೆ ಆಸಕ್ತ ಅಭ್ಯರ್ಥಿಗಳಿಂದ  (Free Bike Repair Training) ಅರ್ಜಿ ಆಹ್ವಾನಿಸಲಾಗಿದೆ.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆ,ಕುಮಟಾ ಉತ್ತರಕನ್ನಡ ಜಿಲ್ಲೆಯ ಕೇಂದ್ರದಿಂದ 30 ದಿನಗಳ ಉಚಿತ ದ್ವಿಚಕ್ರ ವಾಹನ ದುರಸ್ತಿಗೆ ಆಸಕ್ತ ಅಭ್ಯರ್ಥಿಗಳಿಂದ  (Free Bike Repair Training) ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದ ನಿರೂದ್ಯೋಗಿ ಯುವಕರಿಗೆ ಸ್ವ-ಉದ್ಯೋಗ ಆರಂಭಿಸಲು ಸೂಕ್ತ ಮಾರ್ಗದರ್ಶನ ಮತ್ತು ಪ್ರಾರಂಭಿಕ ಹಂತದಲ್ಲಿ ಅರ್ಥಿಕ ಸಹಾಯಧನಕ್ಕೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಪಡೆಯಲು ಇತ್ಯಾದಿ ವಿಷಯಗಳ ಕುರಿತು ಅಧಿಕೃತ ಸಂಪನ್ಮೂಲ ವ್ಯಕ್ತಿಗಳಿಂದ ಈ ತರಬೇತಿಯಲ್ಲಿ ಅಗತ್ಯ ಮಾಹಿತಿಯನ್ನು ಕೊಡಲಾಗುತ್ತದೆ.

Bike Repair Training- ದ್ವಿಚಕ್ರ ವಾಹನ ದುರಸ್ತಿಗೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆ:

ಪ್ರಸ್ತುತ ಮಾರುಕಟ್ಟೆಯಲ್ಲಿ ಬೈಕ್ ರಿಪೇರಿ ಮಾಡುವವರಿಗೆ ಹೆಚ್ಚು ಬೇಡಿಕೆ ಇದೆ. ಏಕೆಂದರೆ ಕಳೆದ 5 ವರ್ಷಗಳಿಂದ ಗಣನೀಯ ಪ್ರಮಾಣದಲ್ಲಿ ಬೈಕ್ ಬಳಕೆ ಮಾಡುವವರ ಸಂಖ್ಯೆ ಏರಿಕೆಯಾಗಿದ್ದು, ಜನರು ಹೆಚ್ಚು ಬೈಕ್ ಗಳನ್ನು ಬಳಕೆ ಮಾಡುತ್ತಿರುವುದರಿಂದ ಇದರ ದುರಸ್ತಿ ಉದ್ಯಮಕ್ಕೆ ಹೆಚ್ಚು ಮಾರುಕಟ್ಟೆ ವ್ಯವಸ್ಥೆ ಮತ್ತು ಅವಕಾಶಗಳಿರುತ್ತವೆ. ಈ ಕ್ಷೇತ್ರದಲ್ಲಿ ಉದ್ದಿಮೆಯನ್ನು ಪ್ರಾರಂಭಿಸಬೇಕು ಎಂದು ಆಸಕ್ತಿಯಿರುವವರು ಈ ಸುವರ್ಣ ಅವಕಾಶವನ್ನು ತಪ್ಪದೇ ಬಳಕೆ ಮಾಡಿಕೊಳ್ಳಬೇಕು.

ಬೈಕ್ ರಿಪೇರಿ ತರಬೇತಿ ತರಬೇತಿ ಅವಧಿ:

ತರಬೇತಿಯು ದಿನಾಂಕ: 22 ಸೆಪ್ಟೆಂಬರ್ 2023 ರಂದು ಪ್ರಾರಂಭವಾಗಿ 21 ಅಕ್ಟೋಬರ್ 2023ರಕ್ಕೆ ಮುಗಿಯುತ್ತದೆ.

ಇದನ್ನೂ ಓದಿ: Baragala Taluk list-2023: ರಾಜ್ಯ ಸರಕಾರದಿಂದ ಅಧಿಕೃತ ಬರಪೀಡಿತ ತಾಲ್ಲೂಕುಗಳ ಪಟ್ಟಿ ಬಿಡುಗಡೆ!ಇಲ್ಲಿದೆ 195 ತಾಲ್ಲೂಕುಗಳ ಪಟ್ಟಿ.

ತರಬೇತಿ ನಡೆಯುವ ಸ್ಥಳ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮುಟಾ, ಉತ್ತರಕನ್ನಡ ಜಿಲ್ಲೆ, ಕರ್ನಾಟಕ.

ಯಾವ ವಯಸ್ಸಿನವರು ಅರ್ಜಿ ಸಲ್ಲಿಸಬವುದು:

ಈ ತರಬೇತಿ ಪಡೆಯಲು 18 ರಿಂದ 45 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬವುದು.

ತರಬೇತಿಯು ಸಂಪೂರ್ಣ ಉಚಿತವಾಗಿರುತ್ತದೆ:

ಈ ತರಬೇತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೂ ವಸತಿ ಸಹಿತಿ ಊಟದ ವ್ಯವಸ್ಥೆಯು ಸಂಪೂರ್ಣ ಉಚಿತವಾಗಿರುತ್ತದೆ.

ಅರ್ಜಿ ಸಲ್ಲಿಸಲು ಲಿಂಕ್:

1 ತಿಂಗಳ ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಸಲ್ಲಿಸಲು ಲಿಂಕ್: Apply Now

ಇದನ್ನೂ ಓದಿ: NHM scheme- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಮೇಲೆ ಹಾಕಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಸರು, ವಿದ್ಯಾರ್ಹತೆ, ವಿಳಾಸ, ಮತ್ತು ಯಾವ ತರಬೇತಿ ಪಡೆಯಬೇಕು ಅದರ ಮೇಲೆ ಕ್ಲಿಕ್ ಮಾಡಿ ಕೊನೆಯಲ್ಲಿ"Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಅಗತ್ಯ ದಾಖಲಾತಿ ಮಾಹಿತಿ:

ಗ್ರಾಮೀಣ ಭಾಗದ BPL ಕಾರ್ಡ ಹೊಂದಿರುವವರಿಗೆ ಮೊದಲ ಆದ್ಯತೆ ಇರುತದೆ. ಅಭ್ಯರ್ಥಿಗಳು ನಾಲ್ಕು ಪಾಸ್ ಪೋರ್ಟ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ, ಆಧಾರ್ ಕಾರ್ಡ, ಪಾನ್ ಕಾರ್ಡ ಇವುಗಳ ಎರಡು ಜೆರಾಕ್ಸ್ ಪ್ರತಿಯನ್ನು ತರಬೇತಿಗೆ ಹಾಜರಾಗುವ ಸಮಯದಲ್ಲಿ ಒದಗಿಸಬೇಕು.

ಹೆಚ್ಚಿನ ಮಾಹಿತಿಗಾಗಿ:

ಆಸಕ್ತರು 9538281989/ 9449860007/ 991678382 ಈ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಬವುದು.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆ,ಕುಮಟಾ ವೆಬ್ಸೈಟ್ ಭೇಟಿ ಮಾಡಲು: ಇಲ್ಲಿ ಕ್ಲಿಕ್ ಮಾಡಿ,

ಕೃಷಿಕರಿಗೆ ಸಂಬಧಿಸಿದ ಇತರೆ ಯೋಜನೆಗಳ ಅಂಕಣಗಳು:

ಬರಗಾಲ ಘೋಷಣೆ, 113 ತಾಲೂಕುಗಳ ಪ್ರಾಥಮಿಕ ಪಟ್ಟಿ ಬಿಡುಗಡೆ! ಜಂಟಿ ಸಮೀಕ್ಷೆ ಪ್ರಾರಂಭ.

ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ!

ನಿಮ್ಮ ಹಳ್ಳಿಯಲ್ಲಿ ಯಾವ ಸರ್ವೆ ನಂಬರ್ ಎಲ್ಲಿ ಬರುತ್ತದೆ ಎಂದು ಹೇಗೆ ತಿಳಿಯುವುದು?

ಮೀನುಗಾರಿಕೆ ಇಲಾಖೆಯಿಂದ ಶೇ. 40% ಮತ್ತು ಶೇ. 60% ರಷ್ಟು ಸಹಾಯಧನ ಯೋಜನೆಗಳಿಗೆ ಅರ್ಜಿ ಅಹ್ವಾನ.

Sheep Farming schemes: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆಯಬವುದು?

 Nrega scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು

Chaff cutter subsidy: ಶೇ 50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!