Uttara Kannada District Court Jobs: SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಯಂ ಹುದ್ದೆಗಳ ನೇಮಕಾತಿ!

ಉತ್ತರ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ(District Court Job Application)ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೆಳಗಿನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. 

Uttara Kannada District Court Jobs: SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಯಂ ಹುದ್ದೆಗಳ ನೇಮಕಾತಿ!
District Court Job Application

ಉತ್ತರ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ(District Court Job Application)ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೆಳಗಿನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. 

ಅರ್ಜಿ ಸಲ್ಲಿಸುವ ಪ್ರಕ್ರಿಯ ಜೂನ್ 20, 2024 ರಿಂದ ಆರಂಭವಾಗಲಿದ್ದು ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

Uttara Kannada District Court Jobs - ನೇಮಕಾತಿಯ ಸಂಕ್ಷಿಪ್ತ ವಿವರ : 

• ನೇಮಕಾತಿ ಇಲಾಖೆ - ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 
• ನೇಮಕಾತಿ ಹುದ್ದೆಗಳ ಸಂಖ್ಯೆ - 26 ಹುದ್ದೆಗಳು 
• ಅರ್ಜಿ ಸಲ್ಲಿಸುವ ಪ್ರಕ್ರಿಯೆ - ಆನ್ಲೈನ್ ಮುಕಾಂತರ 

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿಂಗಡಣೆ : 

• ಆದೇಶ ಜಾರಿಕಾರರು (Process Server) - 20 ಹುದ್ದೆಗಳು 
• ಬೆರಳಚ್ಚುಗಾರು (Typist) - 03 ಹುದ್ದೆಗಳು 
• ಬೆರಳಚ್ಚು ನಕಲುಗಾರರು - 03 ಹುದ್ದೆಗಳು 

ಇದನ್ನೂ ಓದಿ: karnataka dam water level-2024: ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಮತ್ತು ಸಂಗ್ರಹಣೆ ಮತ್ತು ಒಳ ಮತ್ತು ಹೊರ ಹರಿವು ಮಾಹಿತಿ ಹೀಗಿದೆ!

Education Qualification-ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಗಳು : 

• ಆದೇಶ ಜಾರಿಕಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪಾಸ್ ಆಗಿರಬೇಕು ಜೊತೆಗೆ ಲಘು ವಾಹನ ಚಾಲನ ಪರವಾನಗಿ ಹೊಂದಿರಬೇಕು.

• ಬೆರಳಚ್ಚು ನಕಲುಗಾರರು ಮತ್ತು ಬೆರಳಚ್ಚುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಪದವಿ ಮುಗಿಸಿರಬೇಕು. ಇದರ ಜೊತೆಗೆ ಕರ್ನಾಟಕ ಸರ್ಕಾರವು ನಡೆಸುವಂತಹ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಹಿರಿಯ ಅಥವಾ ಕಿರಿಯ  ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

ವಯೋಮಿತಿ ಮಾನದಂಡ : Age limit

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ1 ವರ್ಗದ ಅಭ್ಯರ್ಥಿಗಳಿಗೆ - 05 ವರ್ಷ
• ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ - 03 ವರ್ಷ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ ಶ್ರೇಣಿ : Uttara Kannada District Court Jobs 

ಈ ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು ₹21,400/- ರಿಂದ ₹42,000/- ವರೆಗೆ ಇರಲಿದೆ.

ಇದನ್ನೂ ಓದಿ: PM-Kisan amount- 9.3 ಕೋಟಿ ರೈತರ ಖಾತೆಗೆ ಪಿ ಎಂ ಕಿಸಾನ್ ಹಣ! ಇಲ್ಲಿದೆ ಸ್ಟೇಟಸ್ ಚೆಕ್ ಮಾಡುವ ವಿಧಾನ!

Application fee-ನಿಗದಿಪಡಿಸಿದ ಅರ್ಜಿ ಶುಲ್ಕ : 

• ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ - ₹200/-
• ಉಳಿದ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Important Dates- ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು : 

• ನೇಮಕಾತಿ ಆನ್ಲೈನ್ ಅರ್ಜಿ ನೋಂದಣಿ ಆರಂಭ ದಿನಾಂಕ : 20 ಜೂನ್ 2024
• ನೇಮಕಾತಿ ಆನ್ಲೈನ್ ಅರ್ಜಿ ನೋಂದಣಿ ಮುಕ್ತಾಯ ದಿನಾಂಕ : 19 ಜುಲೈ 2024

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು : 

• ಅರ್ಜಿ ಸಲ್ಲಿಕೆ ಲಿಂಕ್ - Click here
• ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ - Download Now