Court recruitment-2024: ದ್ವಿತೀಯ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

Court recruitmen: ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬವುದು.

Court recruitment-2024: ದ್ವಿತೀಯ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
karnataka court recruitment-2024

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬವುದು.

ಯಾದಗಿರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ)ದಲ್ಲಿ ಖಾಲಿ ಇರುವ ಶೀಘ್ರ ಲಿಪಿಕಾರರು- ಗ್ರೇಡ್ - III, ಬೆರಳಚ್ಚುಗಾರರು, ಜವಾನ, ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: Parihara amount-2024: 30 ಲಕ್ಷ ರೈತರಿಗೆ ಬರ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

yadgir court recruitment 2024- ಶೀಘ್ರ ಲಿಪಿಕಾರರು- ಗ್ರೇಡ್ - III ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಹೀಗಿವೆ:

ಶೀಘ್ರ ಲಿಪಿಕಾರರು- ಗ್ರೇಡ್ - III ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರ ಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

court recruitment- ಬೆರಳಚ್ಚುಗಾರರ ಹುದ್ದೆಗೆ ಯಾರೆಲ್ಲ ಅರ್ಜಿ ಸಲ್ಲಿಸಬವುದು:

ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. 

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಎಸ್.ಎಸ್.ಎಲ್.ಸಿ ಪರೀಕ್ಷೆ ಅಥವಾ ತತ್ಸಮಾನ ವಿದ್ಯಾರ್ಹತೆ ಉರ್ತ್ತೀರಾಗಿರಬೇಕು.

ಇದನ್ನೂ ಓದಿ: January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

karnataka court recruitment- ಜವಾನ ಹುದ್ದೆಗೆ ಯಾರೆಲ್ಲ ಅರ್ಜಿಸಲ್ಲಿಸಲು ಅರ್ಹರು:

ಜವಾನ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು ವಾಹನ ಚಾಲನಾ ಪರವಾನಿಗೆ ಪತ್ರ ಐಚ್ಛಿಕವಾಗಿರುತ್ತದೆ. 

Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು 15 ಫೆಬ್ರವರಿ 2024 ಕೊನೆಯ ದಿನಾಂಕವಾಗಿದೆ. ಶುಲ್ಕ ಪಾವತಿಸಲು 16 ಫೆಬ್ರವರಿ 2024 ಕೊನೆಯ ದಿನಾಂಕವಾಗಿದೆ. 

ಇದನ್ನೂ ಓದಿ: Milk incentive details-ಹಾಲಿನ ಪ್ರೋತ್ಸಾಹ ಧನ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ!

Application link- ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದು ಎಂದು ನ್ಯಾಯಧೀಶರಾದ ಬಿ. ಎಸ್ ರ‍ೇಖಾ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂದಪಟ್ಟ ಕೊಂಡಿಗಳು:

ಅರ್ಜಿ ಸಲ್ಲಿಸಲು ಲಿಂಕ್: Apply Now
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದ ಅಧಿಕೃತ ವೆಬ್ಸೈಟ್: click here