Drip irrigation subsidy-ತೋಟಗಾರಿಕೆ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಕೆಗೆ ಅರ್ಜಿ ಆಹ್ವಾನ!

Drip irrigation scheme-2023:ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಆಸಕ್ತ ಅರ್ಹ ರೈತರು ಈ ಅಂಕಣದಲ್ಲಿ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿ ಸಮೇತ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು.

ನೀರು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಅತ್ಯಗತ್ಯವಾಗಿರುವ ಸಂಪನ್ಮೂಲಗಳಲ್ಲಿ ಒಂದು. ಆಧುನಿಕ ತೋಟಗಾರಿಕೆಯಲ್ಲಿ ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆ ಅತ್ಯಂತ ಮಹತ್ವವನ್ನು ಪಡೆದಿದ್ದು ಈ ನಿಟ್ಟಿನಲ್ಲಿ ಸೂಕ್ಷ್ಮ- ನೀರಾವರಿಯ ಬಳಕೆ ಅತ್ಯವಶ್ಯಕವಾಗಿದೆ. ಸೂಕ್ಷ್ಮ ನೀರಾವರಿ ಪದ್ಧತಿಯ ಬಳಕೆಯಿಂದ ನಾಡಿನ ಜಲಸಂಪನ್ಮೂಲವನ್ನು ಸಂರಕ್ಷಣೆ ಹಾಗೂ ಮಿತವ್ಯಯ ಮಾಡಬಹುದಲ್ಲದೇ ಬೆಳೆಗಳಿಂದ ಹೆಚ್ಚಿನ ಇಳುವರಿಯನ್ನು ಪಡೆಯಬಹುದು.

ಇದನ್ನೂ ಓದಿ: Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

Drip irrigation-ಯೋಜನೆಯ ಉದ್ದೇಶಗಳು:

1. ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಬಳಸಿ ಜಲಸಂಪನ್ಮೂಲವನ್ನು ಮಿತವ್ಯಯ ಮಾಡುವುದು.

2. ರೈತರಿಗೆ ಸಹಾಯಧನ ನೀಡುವುದರ ಮೂಲಕ ಸೂಕ್ಷ್ಮ ನೀರಾವರಿಯ ಪದ್ದತಿಯನ್ನು ರೈತರ ಜಮೀನುಗಳಲ್ಲಿ ಅಳವಡಿಸಲು ಪ್ರೋತ್ಸಾಹಿಸಿ ಶೇ. 50-70 ರಷ್ಟು ನೀರಿನ ಮಿತವ್ಯಯ ಸಾಧಿಸುವುದಲ್ಲದೇ, ವಿದ್ಯುಚ್ಛಕ್ತಿ ಮತ್ತು ಕೂಲಿ ವೆಚ್ಚದಲ್ಲಿ ಮಿತವ್ಯಯ ಸಾಧಿಸುವುದು.

3. ಸೂಕ್ಷ್ಮ ನೀರಾವರಿಯಲ್ಲಿ ರಸಾವರಿ (Fertigation) ಪದ್ಧತಿಯ ಮೂಲಕ ರಾಸಾಯನಿಕ ಗೊಬ್ಬರಗಳನ್ನು ಬೆಳೆಗಳಿಗೆ ನೀಡುವುದರ ಮೂಲಕ ಶೇ. 30-40 ರಷ್ಟು ರಾಸಾಯನಿಕ ಗೊಬ್ಬರಗಳ ಮಿತವ್ಯಯ ಸಾಧಿಸುವುದು.

4. ಬೆಳೆಗಳಲ್ಲಿ, ಶೇ. 30-100 ರಷ್ಟು ಹೆಚ್ಚು ಇಳುವರಿ ಹಾಗೂ ಉತ್ಪಾದಕತೆ ಸಾಧಿಸುವುದು.

ಇದನ್ನೂ ಓದಿ: Bara Parihara-2023: ರಾಜ್ಯ ಸರಕಾರದಿಂದ ಮೊದಲ ಕಂತಿನ ಬರ ಪರಿಹಾರ! ರೈತರಿಗೆ ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

Drip irrigation subsidy amount-ಸಹಾಯಧನ ಎಷ್ಟು?

ಸರ್ಕಾರದ ಮಾರ್ಗಸೂಚಿ ಪ್ರಕಾರ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ  ಸಾಮಾನ್ಯ ವರ್ಗದ ರೈತರಿಗೆ ಶೇ.75 ರಷ್ಟು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನದ ನೀಡಲಾಗುತ್ತದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ರೈತರು ಅಗತ್ಯ ದಾಖಲಾತಿ ಸಮೇತ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿಯನ್ನು ಭೇಟಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: MSP ragi rate-2023: ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ಈ ವರ್ಗದ ರೈತರಿಗೂ ಅವಕಾಶ! ಬೆಲೆ ಪ್ರತಿ ಕ್ವಿಂಟಾಲ್ ಗೆ 3846 ರೂ.

Documents required for drip irrigation-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ನಿಗದಿತ ಅರ್ಜಿ ನಮೂನೆ.
  • ಆಧಾರ್ ಕಾರ್ಡ್ ಪ್ರತಿ.
  • ಬ್ಯಾಂಕ್ ಪಾಸ್ ಬುಕ್.
  • ಪಹಣಿ.
  • ಪೋಟೋ.
  • ಬಾವಿ/ಕೊಳವೆ ಬಾವಿ ದೃಡೀಕರಣ ಪತ್ರ(ಕಂದಾಯ ಇಲಾಖೆಯಿಂದ ಪಡೆಯುವುದು)
  • ಹಿಡುವಳಿ ಪ್ರಮಾಣ ಪತ್ರ(ಕಂದಾಯ ಇಲಾಖೆಯಿಂದ ಪಡೆಯುವುದು)
  • 20 ರೂ ಬಾಂಡ್ ಪೇಪರ್.
  • ಚಿಕ್ಕು ಬಂದಿ(ಕಂದಾಯ ಇಲಾಖೆಯಿಂದ ಪಡೆಯುವುದು)
  • ವೈಯಕ್ತಿಕ ವಿವರ ಹಾಗೂ ಮೊಬೈಲ್/ ದೂರವಾಣಿ ಸಂಖ್ಯೆ.

ಅರ್ಜಿ ಸಲ್ಲಿಸಲು ಫಲಾನುಭವಿಗಳ ಅರ್ಹತೆ:

(1) ಫಲಾನುಭವಿಗಳು ರೈತರಾಗಿದ್ದು ಜಮೀನು ಅವರ ಹೆಸರಿನಲ್ಲಿರಬೇಕು, ಜಂಟಿ ಖಾತೆಯಾಗಿದ್ದ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು. (ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನಿದ್ದು, ಅವರು ಮರಣ ಹೊಂದಿದ್ದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಡೀಕರಿಸಿ, ಕುಟಂಬದ ಇತರೆ ಸದಸ್ಯರು ಒಪ್ಪಿಗೆ ಪಡೆದು ತಮ್ಮ ಹೆಸರಿನಲಿ ಅರ್ಜಿ ಸಲ್ಲಿಸಬಹುದು).

(2) ಮಹಿಳೆಯರ ಹೆಸರಿನಲ್ಲಿ ಖಾತೆ ಹೊಂದಿದ್ದಲ್ಲಿ ಮಹಿಳಾ ಖಾತೆದಾರರೇ ಅರ್ಜಿ ಸಲ್ಲಿಸಬೇಕು (ಕುಟುಂಬದ ಇತರೆ ಸದಸ್ಯರ ಹೆಸರಲ್ಲಿ ಅರ್ಜಿ ಸಲ್ಲಿ..ಸಿದ್ದಲಿ.. ಯಾವುದೇ ಕಾರಣಕ್ಕೂ ಮಾನ್ಯ ಮಾಡಲಾಗುವುದಿಲ್ಲ).

(3) ಫಲಾನುಭವಿಗಳು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು ಹಾಗೂ ಸೂಕ್ಷ್ಮ ನೀರಾವರಿ ಅಳವಡಿಸಿದ ನಂತರ ತೋಟಗಾರಿಕೆ ಬೆಳೆಗಳನ್ನೇ ಬೆಳೆಯಬೇಕು.

(4) ಫಲಾನುಭವಿಗಳು ನೀರಾವರಿ ಮೂಲವನ್ನು ಹೊಂದಿರಬೇಕು ಹಾಗೂ ಸೂಕ್ಷ್ಮ ನೀರಾವರಿಗೆ ಯೋಗ್ಯವಿರುವಂತಹ ನೀರನ್ನು ಹೊಂದಿರಬೇಕು, ಜೊತೆಗೆ ಸೂಕ್ಷ್ಮ ನೀರಾವರಿ ಘಟಕಗಳು ಕಾರ್ಯನಿರ್ವಹಿಸಲು ಅವಶ್ಯವಿರುವ ವಿದುಚ್ಛಕ್ತಿ ಅಥವಾ ಇತರೆ ಶಕ್ತಿಮೂಲಗಳನ್ನು ಹೊಂದಿರಬೇಕು (ತನ್ನ ಸ್ವಂತ ನೀರಾವರಿ ಮೂಲ ಇಲ್ಲದಿದ್ದಲ್ಲಿ ಬೇರೆ ರೈತರಿಂದ ಈ ಸಂಬಂಧ ಒಪ್ಪಿಗೆ ಪತ್ರ ಪಡೆದು ಸಲ್ಲಿಸಬೇಕು).

(5) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ಈ ಮೇಲೆ ತಿಳಿಸಿರುವಂತೆ ಗರಿಷ್ಠ 2.00 ಹೆಕ್ಟೇರ್‌ವರೆಗೆ ಶೇ.90ರಷ್ಟು ಸಹಾಯಧನ ನೀಡಲು ಅವಕಾಶವಿರುವುದರಿಂದ ಸದರಿ ಪಂಗಡಗಳಿಗೆ ಸೇರಿರುವ ಬಗ್ಗೆ RD ಸಂಖ್ಯೆ ಇರುವಂತಹ ಜಾತಿ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸಬೇಕು.

(6) ಇತರೆ ರೈತರಿಗೆ ಈ ಮೇಲೆ ತಿಳಿಸಿರುವಂತೆ ಗರಿಷ್ಠ 2.00 ಹೆಕ್ಟೇರ್‌ವರೆಗೆ ಶೇ.75 ರಷ್ಟು ಸಹಾಯಧನ ನೀಡಲು ಅವಕಾಶವಿರುತ್ತದೆ.

ಇದನ್ನೂ ಓದಿ: Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

ಹೆಚ್ಚಿನ ಮಾಹಿತಿಗಾಗಿ:

ತೋಟಗಾರಿಕೆ ಇಲಾಖೆ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ: Click here
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮಾರ್ಗಸೂಚಿ: Download Now