Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ(Grama panchayath helpline) ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ನರೇಗಾ ಯೋಜನೆ ಮತ್ತು ಇತರೆ ಯೋಜನಾವಾರು ಸಹಾಯವಾಣಿಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾಗಿತ್ತು ಅದರೆ ಸಾರ್ವಜನಿಕರಿಗೆ ನೆರವಾಗುವ ದೇಸೆಯಲ್ಲಿ ಎಲ್ಲಾ ಯೋಜನೆಗಳ ಪ್ರಯೋಜನದ ಮಾಹಿತಿಯನ್ನು ಪಡೆಯಲು ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Grama panchayath helpline-ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಮಾಹಿತಿ ಮತ್ತು ಕುಂದು ಕೊರತೆಗಾಗಿ ಏಕೀಕೃತ ಸಹಾಯವಾಣಿ ಸಂಖ್ಯೆ: 

Grama panchayath helpline number-ಸಹಾಯವಾಣಿ ಸಂಖ್ಯೆ : “8277506000″

ಇದನ್ನೂ ಓದಿ: Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಯಾವೆಲ್ಲ ಮಾಹಿತಿ ಪಡೆಯಬಹುದು?

1) ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಯೋಜನೆಗಳ ಮಾಹಿತಿಯನ್ನು ತಿಳಿಯಲು ಈ ನಂಬರ್ ಗೆ ಕರೆ ಮಾಡಬಹುದು.

2) ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಸಲ್ಲಿಸಬಹುದು.

3) ನಿಮ್ಮೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.

4) ನಿಮಗೆ ಆಸ್ತಿ ತೆರಿಗೆ ಕಟ್ಟುವ ಬಗ್ಗೆ ಮಾಹಿತಿಯನ್ನು ಸಹ ಕರೆ ಮಾಡಿ ತಿಳಿಯಬಹುದು.

Grama panchayath helpline-ಏಕೀಕೃತ ಸಹಾಯವಾಣಿ ಸಂಖ್ಯೆ ಲಾಭಗಳು:

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಮಾಹಿತಿಯನ್ನು ಈ ಏಕೀಕೃತ ಸಹಾಯವಾಣಿಗೆ ಕರೆ ಮಾಡಿ ತಿಳಿಯಬಹುದು ಎಲ್ಲದಕ್ಕೂ ಬೇರೆ ಬೇರೆ ಉಚಿತ ಸಹಾಯವಾಣಿ ಸಂಪರ್ಕಿಸುವ ಗೊಂದಲ ಇರುವುದಿಲ್ಲ.

ಇದನ್ನೂ ಓದಿ: Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

Grama panchayath-ಯಾವ ಸಮಯದಲ್ಲಿ ಕರೆ ಮಾಡಬೇಕು?

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ 8277506000 ಸಹಾಯವಾಣಿಗೆ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯ ವರೆಗೆ ಕರೆ ಮಾಡಬಹುದು.

RDPR website-ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೆಬ್ಸೈಟ್: Click here

ಇದನ್ನೂ ಓದಿ: Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!