Gruhalakshmi Camp-ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ? ಹಣ ಬರದವರು ತಪ್ಪದೇ ಈ ದಿನ ನಿಮ್ಮ ಗ್ರಾಮ ಪಂಚಾಯತ್ ಭೇಟಿ ಮಾಡಿ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳ ಆಯೋಜನೆ ಮಾಡಲು ರಾಜ್ಯ ಸರಕಾರದಿಂದ ನಿರ್ಧಾರ ಮಾಡಿ ದಿನಾಂಕ ನಿಗದಿಪಡಿಸಿದೆ.

ಈ ಕುರಿತು ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ವಾರ್ತಾ ಇಲಾಖೆಯು ಇಲ್ಲಿಯವರೆಗೆ ಅರ್ಜಿ ಸಲ್ಲಿಸಿಯು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯದವರ ಸಮಸ್ಯೆಯನ್ನು ಗುರುತಿಸಿ ಸ್ಥಳದಲ್ಲೇ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಏಕ ಕಾಲಕ್ಕೆ ಕ್ಯಾಂಪ್ ನಡೆಸಲು ಸಂಬಂಧಪಟ್ಟ  ಇಲಾಖೆಗೆ ಸೂಚನೆ ನೀಡಲಾಗಿದೆ.

ಸರ್ಕಾರವು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಚಾಲನೆ ನೀಡಿರುತ್ತದೆ. ಇದುವರೆಗೂ 1.17 ಕೋಟಿ ಮಹಿಳಾ ಕುಟುಂಬ ಮುಖ್ಯಸ್ಥರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಪ್ರತಿ ತಿಂಗಳು ಅವರುಗಳ ಬ್ಯಾಂಕ್ ಖಾತೆಗೆ ರೂ.2,000/-ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುತ್ತಿದೆ.

ಇದನ್ನೂ ಓದಿ: Best Money saving tips-ನಿಮ್ಮ ಹಣ ದುಡಿಯುವಂತೆ ಮಾಡಲು ಇಲ್ಲಿದೆ ಸೂಪರ್ ಐಡಿಯಾ!

Gruhalakshmi adhar link-ಇನ್ನು 2.5 ಲಕ್ಷ ಫಲಾನುಭವಿಗಳು ಮಾಡಿಲ್ಲ ಅಧಾರ್ ಲಿಂಕ್:

ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ. ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ.

ಇದನ್ನೂ ಓದಿ: 1st installment-ಮೊದಲ ಕಂತಿನ ರೂ 2,000 ಹಣ ಬರ ಪರಿಹಾರ‍ ವರ್ಗಾವಣೆ ಪ್ರಾರಂಭ! ನಿಮಗೆ ಜಮಾ ಅಗಿದಿಯಾ? ಚೆಕ್ ಮಾಡಿ.

Gruhalakshmi camp date-ಗೃಹಲಕ್ಷ್ಮಿ ಹಣ ಬರದವರು ತಪ್ಪದೇ ಈ ದಿನ ನಿಮ್ಮ ಗ್ರಾಮ ಪಂಚಾಯತ್ ಭೇಟಿ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿರುವ ಹಿನ್ನೆಲೆ ಡಿಸೆಂಬರ್ 27 ರಿಂದ 29 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಲಾಗಿದೆ.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು, ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ,ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು ಎಂದು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: LPG cylinder Ekyc-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಪಡೆಯಲು ಡಿ,31 ರ ಒಳಗಾಗಿ ಇ-ಕೆವೈಸಿ ವೈರಲ್ ಸುದ್ದಿ ಕುರಿತು ಅಧಿಕಾರಿಗಳಿಂದ ಸ್ಪಷ್ಟನೆ!

Gruhalakshmi status-ಯಾವೆಲ್ಲ ಬಗ್ಗೆಯ ಅರ್ಜಿಗಳನ್ನು ಸ್ಥಳದಲ್ಲೇ ಸರಿಪಡಿಸಲಾಗುತ್ತದೆ:

  • ಆಧಾರ್ ಲಿಂಕ್ ಸಮಸ್ಯೆಯಿಂದ ಹಣ ಪಡೆಯದೆ ಇದ್ದಲ್ಲಿ ಕ್ಯಾಂಪ್‌ಗಳಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.
  • ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾ‌ರ್ ಜೋಡಣೆ ಮಾಡುವುದು. 
  • ಇ-ಕೆವೈಸಿ ಅಪ್‌ಡೇಟ್ ಮಾಡುವುದು. ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲಿಸುವುದು. 
    ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು. 

ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಡಿಸೆಂಬರ್ 22 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜನೆ ಮಾಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Secondary agriculture-ಕೃಷಿ ಇಲಾಖೆಯಿಂದ ಶೇ 50 ಸಬ್ಸಿಡಿಯಲ್ಲಿ ನರ್ಸರಿ ಸೇರಿದಂತೆ ಹಲವು ಯೋಜನೆಗೆ ಅರ್ಜಿ  ಆಹ್ವಾನ!

Gruhalakshmi camp-ಗೃಹಲಕ್ಷ್ಮಿ ಕುರಿತು ಪ್ರಚಾರ ಮಾಡಲು ಸೂಚನೆ:

ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ ಇಡಿಸಿಎಸ್ ರವರು ಎಎಂಎಸ್ ಮೂಲಕ ಮಾಹಿತಿ ನೀಡುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು, ಕ್ಯಾಂಪ್ ಅಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು,

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್‌ಗಳನ್ನು ಆಯೋಜಿಸಿ ಯಶಸ್ವಿಗೊಳಿಸುವಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.