Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

January 5, 2024 | Siddesh

ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದ ಫಲಾನುಭವಿಗಳ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರ‍ಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ.

ಅರ್ಹ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ತಿದ್ದುಪಡಿಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಅದರೆ ಈಗ ಪುನಃ ಸಂಬಂಧಪಟ್ಟ ಇಲಾಖೆಯಿಂದ ಹೊಸ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

Gruhalakshmi new application-ಯಾವೆಲ್ಲ ಸೇವೆಗಳಿಗೆ ಗ್ರಾಮ ಒನ್ ನಲ್ಲಿ ಅವಕಾಶವಿದೆ:

ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಅಗಿ ಮತ್ತು ಹೊಸ ರೇಷನ್ ಕಾರ್ಡ್ ಪಡೆದವರು ಇದೆ ರೀತಿ ಹಲವು ತಾಂತ್ರಿಕ ತೊಂದರೆಗಳಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವವರಿಗೆ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿ ಇ-ಕೆವೈಸಿ , ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗದ ಕಾರಣ ಪ್ರತಿ ತಿಂಗಳು ರೂ 2,000 ಅರ್ಥಿಕ ನೆರವು ಪಡೆಯಲು ಸಾಧ್ಯವಾಗದವರ ತಮ್ಮ ಅರ್ಜಿಯನ್ನು ಸರಿಪಡಿಸಿಕೊಳ್ಳಬವುದು.

ಇದನ್ನೂ ಓದಿ: Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

required documents for gruhalakshmi scheme-ಬೇಕಾಗುವ ದಾಖಲೆಗಳು:

1) ರೇಷನ್ ಕಾರ್ಡ ಪ್ರತಿ
2) ಕುಟುಂಬದ ಯಜಮಾನಿ ಆಧಾರ್ ಕಾರ್ಡ್ ಪ್ರತಿ
3) ಯಜಮಾನಿ ಪತಿಯ ಆಧಾರ್ ಕಾರ್ಡ ಪ್ರತಿ
4) ಆಧಾರ್ ಲಿಂಕ್ ಮೊಬೈಲ್ ನಂಬರ್

ಇದನ್ನೂ ಓದಿ: Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Gruhalakshmi guidelines- ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ.

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.

ಇದನ್ನೂ ಓದಿ: DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ 

Gruhalakshmi website- ಈ ಯೋಜನೆ ಪ್ರಮುಖ ಉಪಯುಕ್ತ ಲಿಂಕ್ ಗಳು:

ಗೃಹಲಕ್ಷ್ಮಿ ಯೋಜನೆಯ ಕುರಿತು ಪ್ರಶ್ನೋತ್ತರಗಳು: Donwload Now

ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಮಾರ್ಗಸೂಚಿ: Donwload Now

ನಿಮ್ಮ ಹಳ್ಳಿಯ ಹತ್ತಿರ ಗ್ರಾಮ ಒನ್ ಕೇಂದ್ರ ಎಲ್ಲಿದೆ ಎಂದು ತಿಳಿಯಲು ಈ ಲಿಂಕ್ Grama one center list ಮೇಲೆ ಕ್ಲಿಕ್ ಮಾಡಿ Search ಬಾಕ್ಸ್ ನಲ್ಲಿ ನಿಮ್ಮ ಗ್ರಾಮ ಪಂಚಾಯತ್ ಹೆಸರನ್ನು ಹಾಕಿ ಸರ್ಚ ಮಾಡಿ ವಿಳಾಸ ತಿಳಿಯಬವುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: