Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

Bele vime status-ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರಿಗೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ(bele vime) ಜಿಲ್ಲಾವಾರು ವರ್ಗಾವಣೆ ಪ್ರಾರಂಭವಾಗಿರುತ್ತದೆ. 

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರಿಗೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ(bele vime) ಜಿಲ್ಲಾವಾರು ವರ್ಗಾವಣೆ ಪ್ರಾರಂಭವಾಗಿರುತ್ತದೆ. 

ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಬೆಳೆಯು ಹಾನಿಯಾಗಿದ್ದು ಬೆಳೆ ವಿಮೆ ಮಾಡಿಸಿದ ರೈತರಿಗೆ ಸಮೀಕ್ಷೆಯ ಆಧಾರದ ಮೇಲೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ ಮೊತ್ತವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ DBT ಮಾಡಲಾಗಿರುತ್ತದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಅಗಿದೆ? ಮತ್ತು ಇತರೆ ಜಿಲ್ಲೆಗಳ ಮಾಹಿತಿ? ಬೆಳೆ ವಿಮೆ ಜಮಾ ಅಗಿರುವುದನ್ನು ರೈತರು ತಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Taluk wise ration card list-ಆಹಾರ ಇಲಾಖೆಯಿಂದ ತಾಲ್ಲೂಕುವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ!

Crop insurance status-ಮೊಬೈಲ್ ನಲ್ಲಿ ಮಧ್ಯಂತರ ಬೆಳೆ ವಿಮೆ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ:

ಈಗಾಗಲೇ ಕೈಕೊಟ್ಟ ಮುಂಗಾರು ಮಳೆಯಿಂದ ಅರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸರಕಾರ ಮತ್ತು ವಿಮಾ ಕಂಪನಿಗಳು ಜವಬ್ದಾರಿಯುತವಾಗಿ ಬೆಳೆ ಹಾನಿ ಸಮೀಕ್ಷೆಯ ವರದಿಯ ಪ್ರಕಾರ ರೈತರಿಗೆ ಬರಬೇಕಾಗದ ಬೆಳೆ ವಿಮೆಯನ್ನು ತಪ್ಪದೇ ಪಾವತಿ ಮಾಡಿ ರೈತರಿಗೆ ಬೆಂಬಲ ನೀಡಬೇಕು. ಸದ್ಯ ಮಧ್ಯಂತರ ಬೆಳೆ ವಿಮೆ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಶೀಘ್ರವಾಗಿ ಎಲ್ಲಾ ಜಿಲ್ಲೆಗಳಲ್ಲಿಯು ಮಧ್ಯಂತರ ಮತ್ತು ಪೂರ್ಣ ಪ್ರಮಾಣದ ಬೆಳೆ ವಿಮೆಯನ್ನು ಬಿಡುಗಡೆ ಮಾಡಬೇಕು.

ರೈತರು ರಾಜ್ಯ ಸರಕಾರದ ಸಂರಕ್ಷಣೆ(samrakshane website) ಪೋರ್ಟಲ್ ಭೇಟಿ ಮಾಡಿ ತಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ? ವಿಮೆ ಜಮಾ ಅಗಿದ್ದರೆ ಎಷ್ಟು ಮೊತ್ತ ವರ್ಗಾವಣೆ ಅಗಿದೆ? ಇತ್ಯಾದಿ ಸಂಫೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬವುದಾಗಿದೆ.

Step-1: ಮೊದಲು ಈ bele vime status ಲಿಂಕ್ ಮೇಲೆ ಕ್ಲಿಕ್ ಮಾಡಿ ಸಂರಕ್ಷಣೆ ವೆಬ್ಸೈಟ್ ಭೇಟಿ ಮಾಡಬೇಕು. ನಂತರ  ವರ್ಷ(elect Insurance Year) "2023-24" ಎಂದು ಋತು?(Select Insurance Season) ಆಯ್ಕೆ ಮುಂಗಾರು(Kharif) ಎಂದು ಆಯ್ಕೆ ಮಾಡಿಕೊಳ್ಳಬೇಕು.

ಇದನ್ನೂ ಓದಿ: morarji desai application-ಉಚಿತ ವಸತಿ ಶಾಲೆ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Step-2: ಮೇಲಿನ ಆಯ್ಕೆಗಳನ್ನು ಪೂರ್ಣಗೊಳಿಸಿದ ಬಳಿಕ ಈ ಪೇಜ್ ನಲ್ಲಿ "Crop Insurance Details On Survey no" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಇಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಜಮೀನಿನ ಸರ್ವೆ ನಂಬರ್ ಹಾಕಿ "Search" ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ವೆ ಸಂಬರ್ ನಲ್ಲಿ ಲಭ್ಯವಿರುವ ಹಿಸ್ಸಾ ನಂಬರ್ ಗಳು ತೋರಿಸುತ್ತವೆ ಒಂದೊದರ ಮೇಲೆ ಕ್ಲಿಕ್ ಮಾಡಿದಾಗ ಆ ಸರ್ವೆ ನಂಬರ್ ನ ಬೆಳೆ ವಿಮೆ ಅರ್ಜಿ ನಂಬರ್ ತೋರಿಸುತ್ತದೆ ಅದನ್ನು ಒಂದು ಕಡೆ ಬರೆದುಕೊಳ್ಳಬೇಕು.

ಇದನ್ನೂ ಓದಿ: Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

Step-4: ಮೇಲಿನ ವಿಧಾನ ಅನುಸರಿಸಿ ಅರ್ಜಿ ನಂಬರ್ ಅನ್ನು ತೆಗೆದುಕೊಂಡ ಬಳಿಕ ಇದೆ ಪೇಜ್ ನ ಮೇಲೆ ಬಲಬದಿಯಲ್ಲಿ ಕಾಣುವ "Home" ಬಟನ್ ಮೇಲೆ ಕ್ಲಿಕ್ ಮಾಡಿ "check status" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Step-5: ಈ ಪುಟದಲ್ಲಿ ಅರ್ಜಿ ಸಂಖ್ಯೆ(Application no) ಮತ್ತು ಕ್ಯಾಪ್ಚರ್ ಕೋಡ್ ಹಾಕಿ "Search" ಬಟನ್ ಮೇಲೆ ಕ್ಲಿಕ್ ಮಾಡಿದರೆ ಕೆಳಗೆ ಅರ್ಜಿಯ ವಿವರ ಮತ್ತು ಮಧ್ಯಂತರ ಬೆಳೆ ವಿಮೆ ಜಮಾ ವಿವರ ತೋರಿಸುತ್ತದೆ.

ಎಷ್ಟು ಹಣ ಜಮಾ ಅಗಿದೆ? ಯಾವ ದಿನಾಂಕ? ಬ್ಯಾಂಕ್ ಖಾತೆ ವಿವರ ತೋರಿಸುತ್ತದೆ.

ಇದನ್ನೂ ಓದಿ: Post matric scholarship-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ! ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬವುದು.

crop insurance amount-ಯಾವ ಜಿಲ್ಲೆಗಳಲ್ಲಿ ಎಷ್ಟು ಹಣ ಜಮಾ ಅಗಿದೆ?

ಪ್ರಸ್ತುತ ದಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ವರ್ಗಾವಣೆ ಅಗಿದ್ದು, ಧಾರವಾಡ ಜಿಲ್ಲೆಯ 63566 ಜನ ರೈತರಿಗೆ 50.298 ಕೋಟಿ ರೂ ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ರವರು ಮಾಹಿತಿ ಹಂಚಿಕೊಂಡಿದ್ದಾರೆ. 

2023 ನೇ ಸಾಲಿನ ಮುಂಗಾರು ಹಂಗಾಮಿನ ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೊಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ.

ಅಳ್ನಾವರ ತಾಲ್ಲೂಕಿನ 3052 ಜನ ರೈತರಿಗೆ 1.82 ಕೋಟಿ ರೂ ಗಳ, ಅಣ್ಣಿಗೇರಿ ತಾಲ್ಲೂಕಿನ 6044 ಜನ ರೈತರಿಗೆ 6.45 ಕೋಟಿ ರೂ.ಗಳ, ಧಾರವಾಡ 9978 ಜನ ರೈತರಿಗೆ 6.575 ಕೋಟಿ ರೂ.ಗಳ, ಹುಬ್ಬಳ್ಳಿ ತಾಲ್ಲೂಕಿನ 9472 ಜನ ರೈತರಿಗೆ 9.12 ಕೋಟಿ ರೂ ಗಳ, ಹುಬ್ಬಳ್ಳಿ ನಗರ ತಾಲ್ಲೂಕಿನ 301 ಜನ ರೈತರಿಗೆ 0.365 ಕೋಟಿ ರೂ ಗಳ, ಕಲಘಟಗಿ ತಾಲ್ಲೂಕಿನ 15248 ಜನ ರೈತರಿಗೆ 9.731 ಕೋಟಿ ರೂ ಗಳ ಮತ್ತು ನವಲಗುಂದ ತಾಲ್ಲೂಕಿನ 5286 ಜನ ರೈತರಿಗೆ 5.282 ಕೋಟಿ ರೂ ಗಳ ಮಧ್ಯಂತರ ವಿಮಾ ಪರಿಹಾರ ಜಮಾವಣೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳೆಯ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿ ಬರ ಪರಿಸ್ಥಿತಿ ನಿರ್ಮಾಣವಾದ ಪ್ರಯುಕ್ತ ಬೆಳೆ ವಿಮೆ ಯೋಜನೆಯಡಿ ಈ ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಮಧ್ಯಂತರ ವಿಮೆ ಪರಿಹಾರ ಪಡೆಯಲು ಅವಕಾಶವಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಕಾಲಿಕ ಕ್ರಮ ಕೈಗೊಂಡ ನಿಮಿತ್ಯ ಜಿಲ್ಲೆಯ 63566 ಜನ ರೈತರಿಗೆ 50.298 ಕೋಟಿ ರೂ ಗಳ ಮಧ್ಯಂತರ ಬೆಳೆ ವಿಮೆ ಮಂಜೂರಾಗಿದೆ. ವಿಮೆಗೊಳಪಟ್ಟ 56995 ಹೆಕ್ಟೇರ ಪ್ರದೇಶಕ್ಕೆ ವಿಮೆ ಪರಿಹಾರ ದೊರೆಯಲಿದೆ. 

ಧಾರವಾಡ ಜಿಲ್ಲೆಯ 111057 ಜನ ರೈತರು ಈ ಯೋಜನೆಯಡಿ ವಿವಿಧ ಬೆಳೆಗಳಿಗೆ ನೊಂದಾಯಿಸಿಕೊಂಡಿರುತ್ತಾರೆ. ಒಟ್ಟು 105065 ಹೆಕ್ಟೇರನಷ್ಟು ಬೆಳೆ ಪ್ರದೇಶ ವಿಮೆ ಯೋಜನೆಗೆ ಒಳಪಟ್ಟಿತ್ತು. ಪ್ರಕೃತಿ ವಿಕೋಪಗಳಿಂದ ಯಾವುದೇ ಅಧಿಸೂಚಿತ ಬೆಳೆ ವಿಫಲವಾದ ಪಕ್ಷದಲ್ಲಿ ರೈತರಿಗೆ ವಿಮಾ ರಕ್ಷಣೆ, ಆರ್ಥಿಕ ಬೆಂಬಲ ಮತ್ತು ಕೃಷಿ ಆದಾಯ ಸ್ಥಿರವಾಗಿರುವಂತೆ ಮಾಡಲು ನೆರವಾಗುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಜಿಲ್ಲೆಗಳ ರೀತಿಯಲ್ಲಿಯೇ ರಾಜ್ಯದದ ಇತರೆ ಜಿಲ್ಲೆಗಳಲ್ಲಿಯು ಸದ್ಯದಲ್ಲೇ ಮಧ್ಯಂತರ ಬೆಳೆ ವಿಮೆ ಬಿಡುಗಡೆಯಾಗಲಿದೆ.