KEA Recruitment -2024: ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ 4002 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಬಿಡುಗಡೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಂಬರುವ ದಿನಗಳಲ್ಲಿ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕಗಳ ಪಟ್ಟಿಯನ್ನು ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ.

KEA Recruitment -2024: ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ 4002 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಬಿಡುಗಡೆ!
KEA Recruitment-2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಂಬರುವ ದಿನಗಳಲ್ಲಿ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕಗಳ ಪಟ್ಟಿಯನ್ನು ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ.

 ರಸ್ತೆ ಸಾರಿಗೆ ನಿಗಮ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಪೊಲೀಸ್ ಇಲಾಖೆ ಹಾಗೂ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಸೇರಿ ಒಟ್ಟು 4,002 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ಬಿಡುಗಡೆ ಮಾಡಿದೆ. 

ಇದನ್ನೂ ಓದಿ: Crop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

KEA Recruitment Examination Dates : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿರುವಂತಹ ವಿವಿಧ ಇಲಾಖೆಗಳ ಖಾಲಿ ಇರುವ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕದ ಪಟ್ಟಿ ಈ ಕೆಳಗಿನಂತಿದೆ.

1) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕ. ರಾ. ಸಾ. ಪೇದೆ, ಕುಶಲಕರ್ಮಿ ಹುದ್ದೆಗಳ ಸೇರಿದಂತೆ ಒಟ್ಟು 36 ಹುದ್ದೆಗಳ ನೇಮಕಾತಿಯ ಅಧಿಕೃತ ಅಧಿಸೂಚನೆ 17 ಆಗಸ್ಟ್ 2022ರಂದು ಬಿಡುಗಡೆಯಾಗಿತ್ತು, ಇದರ ಒಂದು ನೇಮಕಾತಿ ಪರೀಕ್ಷೆಯು 12 ಜೂಲೈ 2024 ರಿಂದ 14 ಜೂಲೈ 2024 ರವರೆಗೆ ನಡೆಯಲಿದೆ.
2) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (KUWSDB) ಖಾಲಿ ಇರುವ ಸಹಾಯಕ ಇಂಜಿನಿಯರ್ ಹಾಗೂ ಎಫ್ ಡಿ ಎ ಸೇರಿ ಒಟ್ಟು 64 ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಫೆಬ್ರುವರಿ 5, 2024 ರಂದು ಬಿಡುಗಡೆ ಮಾಡಿತ್ತು.  ಇದರ ಒಂದು ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವು 11 ಆಗಸ್ಟ್ 2024.

3) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಖಾಲಿ ಇರುವ 2500 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಏಪ್ರಿಲ್ 3, 2024 ರಂದು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಈ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ 01 ಸೆಪ್ಟೆಂಬರ್ 2024 ಆಗಿದೆ.

ಇದನ್ನೂ ಓದಿ: Free mashroom training-ಉಚಿತ 10 ದಿನದ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!

4) ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 42 ಪಿಎಸ್ಐ (PSI) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಮಾರ್ಚ್ 3, 2021 ರಂದು ಬಿಡುಗಡೆಯಾಗಿತ್ತು. ಈ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ 22 ಸೆಪ್ಟೆಂಬರ್ 2024 ಆಗಿದೆ.

5) ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫೆಬ್ರುವರಿ 21, 2024ರಂದು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವು 27 ಅಕ್ಟೋಬರ್ 2024 ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದೆ. 

ಈ ಮಾಹಿತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಅಧಿಸೂಚನೆಯನ್ನು ಕೆಳಗೆ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ.

KEA Exams Timetable : Download Now

ಇದನ್ನೂ ಓದಿ: BPNL Recruitment 2024: 10th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ 5250 ಹುದ್ದೆಗಳಿಗೆ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!