Karnataka budget 2023: ಕರ್ನಾಟಕ ಬಜೆಟ್ ನಲ್ಲಿ ಕೃಷಿ ಪೂರಕ ಕ್ಷೇತ್ರಗಳಿಗೆ ಸಿಕ್ಕ ಅನುದಾನ ಎಷ್ಟು?

Karnataka budget 2023 highlights: ಕೃಷಿ(Agriculture), ತೋಟಗಾರಿಕೆ(Horticulture), ಪಶುಸಂಗೋಪನೆ(Veterinary), ಮೀನುಗಾರಿಕೆ(Fisheries), ಜಲಸಂಪನ್ಮೂಲ(Waterresources), ಸಹಕಾರ(Department of Cooperation) ಇಲಾಖೆಗಳಿಗೆ ಎಷ್ಟು ಅನುದಾನ ಮೀಸಲಿಡಲಾಗಿದೆ ಹೊಸ ಯೋಜನೆಗಳು ಯಾವುವು? ನೀರಾವರಿ ಯೋಜನೆಗಳಿಗೆ ಎಷ್ಟು ಅನುದಾನ ಒದಗಿಸಲಾಗಿದೆ. ರೈತರು ಕೃಷಿ, ಸಹಕಾರ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಇಲಾಖೆಯಿಂದ ಯಾವೆಲ್ಲ ಸೌಲಭ್ಯ ಒದಗಿಸಲಾಗಿದೆ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ರಾಜ್ಯದಲ್ಲಿ ನಿನ್ನೆ ಜರುಗಿದ 2023-24 ನೇ ಸಾಲಿನ ಬಜೆಟ್(Karnataka budget 2023 ) ನಲ್ಲಿ ಕೃಷಿ ಪೂರಕ ಕ್ಷೇತ್ರಗಳಿಗೆ ರಾಜ್ಯ ಸರಕಾರದಿಂದ ಬಜೆಟ್ ನಲ್ಲಿ ಒದಗಿಸಿರುವ ಅನುದಾನ ಮತು ನೂತನ ಯೋಜನೆ ಘೋಷಣೆಗಳನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಕೃಷಿ(Agriculture), ತೋಟಗಾರಿಕೆ(Horticulture), ಪಶುಸಂಗೋಪನೆ(Veterinary), ಮೀನುಗಾರಿಕೆ(Fisheries), ಜಲಸಂಪನ್ಮೂಲ(Waterresources), ಸಹಕಾರ(Department of Cooperation) ಇಲಾಖೆಗಳಿಗೆ ಎಷ್ಟು ಅನುದಾನ ಮೀಸಲಿಡಲಾಗಿದೆ ಹೊಸ ಯೋಜನೆಗಳು ಯಾವುವು? ನೀರಾವರಿ ಯೋಜನೆಗಳಿಗೆ ಎಷ್ಟು ಅನುದಾನ ಒದಗಿಸಲಾಗಿದೆ.

ರೈತರು ಕೃಷಿ, ಸಹಕಾರ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಇಲಾಖೆಯಿಂದ ಯಾವೆಲ್ಲ ಸೌಲಭ್ಯ ಒದಗಿಸಲಾಗಿದೆ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ಕರ್ನಾಟಕ ಬಜೆಟ್-2023 ಮುಖ್ಯಾಂಶಗಳು ಹೀಗಿವೆ- Karnataka budget 2023 highlights:

ಕೃಷಿ-Agriculture Department:

ಕೃಷಿ ಭಾಗ್ಯ(krishi bhagya yojane) ಯೋಜನೆ ಮರು ಜಾರಿಗೊಳಿಸಲಾಗಿದೆ: ರಾಜ್ಯ ಸರ್ಕಾರದಿಂದ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಆತ್ಯಂತ ಜನಪ್ರಿಯ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗಿದೆ.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು 'ನವೋದ್ಯಮ' ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗಿದೆ.

ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ(Internatinal market) ಮಾರಾಟ ಮಾಡಲು ಅನುಕೂಲವಾಗುವಂತೆ 'ನಂದಿನಿ' ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗಿದೆ.

ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು(Bank loan) ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ(interest rate) ಸಹಾಯಧನ ನೀಡಲಾಗಿದೆ.

ರೈತ ಉತ್ಪಾದಕ ಸಂಸ್ಥೆಗಳ(FPO) ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ(cold storage) ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗಿದೆ.

ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು(export vegetables from india) ಉತ್ತೇಜಿಸಲು ಕೆಪೆಕ್‌(KAPPEC) ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ಒದಗಿಸಲಾಗುವುದು. ನೀಡಲು

ಕೃಷಿ ಯಂತ್ರೋಪಕರಣಗಳನ್ನು(Agriculture machinery)ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್‌ ಹಾರ್ವೆಸ್ಟರ್ ಹಬ್‌ ಗಳನ್ನು ಹಂತ ಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು. 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗಿದೆ.

ಸಹಕಾರ-Department of Cooperation:

ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ(0% interest loan) ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ(Short term loan) ಮತ್ತು ದೀರ್ಘಾವಧಿ ಸಾಲದ(long term loans) ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಪ್ರಸಕ್ತ ಹಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಉಲೇಖಿಸಲಾಗಿದೆ.

ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂ. ವರೆಗಿನ ಸಾಲಕ್ಕೆ ರಾಜ್ಯ ಸರ್ಕಾರವು ಶೇ. 1 ರಷ್ಟು ಬಡ್ಡಿ ಸಹಾಯಧನ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್ ವ್ಯಾನ್ (Pick-up Van loan) ಖರೀದಿಸಲು 7 ಲಕ್ಷ ರೂ. ವರೆಗಿನ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ವಿತರಿಸಲಾಗಿದೆ.

ಶೀಘ್ರ ಹಾಳಾಗುವ ಹಣ್ಣು, ಹೂವು, ತರಕಾರಿಗಳ ಬೆಲೆ ಕುಸಿತದಿಂದ ರೈತರು ಒತ್ತಡದ ಮಾರಾಟ ಮಾಡುವುದನ್ನು ತಪ್ಪಿಸಿ, ನ್ಯಾಯಯುತ ಬೆಲೆ ಒದಗಿಸುವುದಕ್ಕೆ ನೆರವಾಗಲು ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ KAPPEC ಸಹಯೋಗದೊಂದಿಗೆ ಮಿನಿ ಶೀತಲ ಗೃಹಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

'ಕಾಯಕ ನಿಧಿ' ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂ. ಗಳಿಂದ 25,000 ರೂ. ಗಳಿಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: Arecanut crop insurance: ಅಡಿಕೆ ಸೇರಿ ಇತರೆ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ.


ತೋಟಗಾರಿಕೆ-Horticulture Department:

ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲು. 2023-24ನೇ ಸಾಲಿನಲ್ಲಿ ಐದು ಕೋಟಿ ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂ ರಾಜ್ಯ ಸರಕಾರದಿಂದ ತಿಳಿಸಲಾಗಿದೆ. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ.

ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಆರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬಾಂಡಿಂಗ್(coffe branding) ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಲಾಗಿದೆ.

ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ, ಹಾಗೂ ಮೈಸೂರು ವೀಳ್ಯದೆಲೆಗಳು Gl Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ.

ವಾಣಿಜ್ಯ ಹೂವಿನ ರಫ್ತಿನಲ್ಲಿ(flowers export) ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು “ವಿದ್ಯಾರ್ಥಿಗಳಿಗಾಗಿ ತೋಟಗಾರಿಕೆ " ಯೋಜನೆಯನ್ನು ಜಾರಿಗೆ ತರಲು ಕ್ರಮವಹಿಸಲಾಗಿದೆ.

ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಷ್ಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ.

ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.

ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಬಜೆಟ್ ನಲ್ಲಿ ಉಲೇಖಿಸಲಾಗಿದೆ.

ಇದನ್ನೂ ಓದಿ: ನಿಮ್ಮ ರೇಶನ್ ಕಾರ್ಡ್ ಸಕ್ರಿಯವಾಗಿರುವುದನ್ನು ತಿಳಿಯುವುದು ಹೇಗೆ? ಕುಟುಂಬದ ಮುಖ್ಯಸ್ಥರ ವಿವರ ತಿಳಿಯುವ ವಿಧಾನ.

ಪಶುಸಂಗೋಪನೆ-Veterinary Department:

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ 'ಅನುಗ್ರಹ' ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರ ಅದನ್ನು ನಿರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್‌ಸ್ಥಾಪಿಸಿ ಕುರಿ ಮತ್ತು ಮೇಕೆಗಳಿಗೆ 5,000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂ. ಪರಿಹಾರ ಒದಗಿಸಲಾಗುವುದು ಎಂದು ಹೇಳಲಾಗಿದೆ.

ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ ಚರ್ಮಗಂಟು ರೋಗದ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಇಳುವರಿಯಲ್ಲಿ ಇಳಿಕೆಯಾಗಿರುತ್ತದೆ. ಉತ್ತಮ ಹಾಲು ನೀಡುವ ತಳಿಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೋಗಗಳಿ೦ದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಅಸಿಸಿಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಲಾಗಿದೆ.

ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಚರ್ಮಗಂಟು ರೋಗದಿಂದ ಒಟ್ಟು 32,045 ಜಾನುವಾರುಗಳು ಮರಣ ಹೊಂದಿರುತ್ತವೆ. ಈ ಪೈಕಿ ಒಟ್ಟು 25,859 ಮರಣ ಹೊಂದಿದ ಜಾನುವಾರುಗಳಿಗೆ 53 ಕೋಟಿ ರೂ. ಪರಿಹಾರಧನವನ್ನು ವಿತರಿಸಲಾಗಿದೆ. ಬಾಕಿ ಇರುವ 5,851 ಮರಣಹೊಂದಿದ ಜಾನುವಾರುಗಳ ಮಾಲೀಕರಿಗೆ 12 ಕೋಟಿ ರೂ. ಪರಿಹಾರಧನವನ್ನು ವಿತರಿಸಲು ಕ್ರಮ ವಹಿಸಲಾಗಿದೆ.

ಗ್ರಾಹಕರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಪ್ರೋಟೀನ್‌ಯುಕ್ತ ಮಾಂಸ ಮತ್ತು ಮೊಟ್ಟೆ ಪೂರೈಕೆಗೆ ಅವಕಾಶ ಕಲ್ಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳು ಹಾಗೂ ಉತ್ತಮವಾದ ಮಾರುಕಟ್ಟೆ ಅಭಿವೃದ್ಧಿ ಮಾಡಲಾಗುವುದು ಎಂದು ಉಲ್ಲೇಖಿಸಲಾಗಿದೆ.

ಮೀನುಗಾರಿಕೆ-Fisheries Department:

ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ನೆರವಾಗಲಿದೆ. 250 ಕೋಟಿ ರೂ.ಗಳಷ್ಟು ಸರ್ಕಾರದಿಂದ

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.

ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು.

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು,

ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪಟ್ಟುಗೊಳಿಸಲು ಸಾರ್ವಜನಿಕ  ಖಾಸಗಿ ಶೈತ್ಯಾಗಾರಗಳನ್ನು ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಲಾಗಿದೆ.

ಜಲಸಂಪನ್ಮೂಲ-Waterresources Department:


ಜಲಸಂಪನ್ಮೂಲ ಇಲಾಖೆಯಡಿ ದಿನಾಂಕ:1-4-2023ರವರೆಗೆ ಅನುಮೋದಿಸಲಾಗಿರುವ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ. ಗಳನ್ನು ಒದಗಿಸುವ ಅವಶ್ಯಕತೆಯಿದೆ. ಈ ಯೋಜನೆಗಳ ವೆಚ್ಚವು ಕಾಮಗಾರಿ ಹಾಗೂ ಭೂಸ್ವಾಧೀನ ವೆಚ್ಚ ಹೆಚ್ಚಳದ ಕಾರಣ 25.000 ರಿಂದ 40,000 ಕೋಟಿ ರೂ. ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೇ ಕಳೆದ 6 ತಿಂಗಳ ಅವಧಿಯಲ್ಲಿ 25,548 ಕೋಟಿ ರೂ. ಅಂದಾಜು ವೆಚ್ಚದ 1,274 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆಯವ್ಯಯ ಹಂಚಿಕೆ ವಾರ್ಷಿಕ ಸರಾಸರಿ 20,000 ಕೋಟಿ ರೂ. ಗಳಷ್ಟಿದ್ದು, ಅನುಮೋದಿಸಿರುವ ಯೋಜನೆಗಳ ಅಂದಾಜು ಮೊತ್ತ ಇದರ ಐದು ಪಟ್ಟು ಹೆಚ್ಚಾಗಿರುವುದು ವಿತ್ತೀಯ ಶಿಸ್ತಿನ ಉಲ್ಲಂಘನೆಗೆ ಸ್ಪಷ್ಟ ನಿದರ್ಶನವಾಗಿದೆ. ಅಲ್ಲದೆ ಕಳೆದ ಆರು ತಿಂಗಳ ಅವಧಿಯಲ್ಲಿಯೇ ಇಲಾಖೆಯ ವಾರ್ಷಿಕ ಆಯವ್ಯಯ ಹಂಚಿಕೆಗಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲಗೆ ನೀಡಿರುವುದು ವಿತ್ತೀಯ ಅಶಿಸ್ತಿನ ಪರಮಾವಧಿಯಲ್ಲದೆ ಇನ್ನೇನು? ಹಿಂದಿನ ಸರ್ಕಾರದ ಈ ವಿವೇಚನಾ ರಹಿತ ಕ್ರಮಗಳಿಂದಾಗಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲದಂತಾಗಿದೆ ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯಡಿ ಮಂದಗತಿಯಲ್ಲಿ ಸಾಗುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಕಮ ವಹಿಸುವುದರೊಂದಿಗೆ ಪ್ರಸಕ್ತ ಸಾಲಿನಲ್ಲಿ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ಸುಮಾರು 25,948 ಹೆಕ್ಟೇರ್ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಕುಲಹಳ್ಳಿ-ಹನ್ನೂರು, ಸಸಾಲಟ್ಟಿ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ, ಏಷ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಸುಮಾರು 39,134 ಪೆಕ್ಟೇರ್ ಅಚ್ಚುಕಟ್ಟು ರೀಕರಣ ಮಾಡಲಾಗಿದೆ. 

ರಾಜ್ಯದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 172 ಇವುಗಳಲ್ಲಿ 19 ಕೆರೆ ತುಂಬಿಸುವ ಯೋಜನೆಗಳನ್ನು 770 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ತುಂಬಿಸಲಾಗುವುದು. ಜಿಲ್ಲೆಗಳ 899 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ತಿಳಿಸಲಾಗಿದೆ.

ನಮ್ಮ ಸರ್ಕಾರದ ಅವಧಿಯಲ್ಲಿ ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಚಾಲನೆಗೊಳಿಸಿದ್ದ 12,912 ಕೋಟಿ ರೂ. ಮೊತ್ತದ ಎತ್ತಿನ ಹೊಳೆ ಯೋಜನೆಯನ್ನು ಹಿಂದಿನ ಸಕಾಲದಲ್ಲಿ ಪೂರ್ಣಗೊಳಿಸದ ಕಾರಣ ದರ ಹೆಚ್ಚಳಗೊಂಡು ಈ ಯೋಜನೆಯು 23,252 ಯೋಜನೆಯಡಿ ಬಾಕಿ ಸರ್ಕಾರವು ಪೂರ್ಣಗೊಳಿಸಲು ಕ್ರಮವಹಿಸಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ವಿವರವಾದ ಯೋಜನಾ ವರದಿ ಹಾಗೂ ಪರಿಸರ ಹೀರುವಳಿ ಪ್ರಸ್ತಾವನೆಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಶೀಘ್ರವಾಗಿ ತೀರುವಳಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. Compensatory afforestation ಅಗತ್ಯವಿರುವ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಗಳನ್ನು ಕ್ರಮವಹಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ.

ಮಧ್ಯ ಕರ್ನಾಟಕದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರವಿದ್ದಾಗ, ರಾಷ್ಟ್ರೀಯ ಯೋಜನೆಯನ್ನಾಗಿ ಇಲ್ಲಿಯವರೆಗೂ ಅಧಿಕೃತವಾಗಿ ಅನುಮೋದಿಸಿರುವುದಿಲ್ಲ. ಕೇಂದ್ರ ಸರ್ಕಾರವು 2023-24ನೇ ಸಾಲಿನ ತನ್ನ ಆಯವ್ಯಯದಲ್ಲಿ 5,300 ಕೋಟಿ ರೂ.ಗಳ ಅನುದಾನವನ್ನು ಭದ್ರಾ ಯೋಜನೆಗೆ ಘೋಷಿಸಿದ್ದು ಸದರಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಯೋಜನೆಯ ಅನುಷ್ಠಾನಕ್ಕೆ ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು ಎಂದು ತಿಳಿಸಲಾಗಿದೆ.

ಮಹದಾಯಿ ನ್ಯಾಯಾಧಿಕರಣದಿಂದ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ 3.90 ಟಿ.ಎಂ.ಸಿ. ನೀರಿನ ಬಳಕೆಗಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದ್ದು, ಅವಶ್ಯಕವಿರುವ ಅರಣ್ಯ ತೀರುವಳಿ ಪಡೆದು, ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಯತ್ನಿಸಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಸರ್ಕಾರದ PMKSY-AIBP ಯೋಜನೆಯಡಿ 2021-26ನೇ ಅವಧಿಗೆ ಪರಿಗಣಿಸಲಾದ ಪಟ್ಟಿಯಲ್ಲಿ ರಾಜ್ಯದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 1 ಮತ್ತು 2ರ ವಿಸ್ತರಣೆ ಹಾಗೂ ಸನ್ನತಿ ಏತ ನೀರಾವರಿ ಯೋಜನೆಗಳನ್ನು ಗುರುತಿಸಲಾಗಿದೆ. ಸದರಿ ಯೋಜನೆಗಳಿಗೆ ಸಕ್ಷಮ ಪ್ರಾಧಿಕಾರಗಳ ತೀರುವಳಿ ಪಡೆದು, ಕೇಂದ್ರ ಸಹಾಯಧನ ಪಡೆಯಲು ಆದ್ಯತೆಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ (Balancing reservoir) ನಿರ್ಮಾಣ ಯೋಜನೆಯನ್ನು ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ, ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಕೃಷ್ಣಾ ನ್ಯಾಯಾಧಿಕರಣ 2ರ ತೀರ್ಪಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಹಂಚಿಕೆಯಾಗಿರುವ 130 ಟಿ.ಎಂ.ಸಿ ನೀರಿನ ಬಳಕೆಗಾಗಿ ಯೋಜನಾ ಕಾಮಗಾರಿಗಳ ಜೊತೆಗೆ ಭೂಸ್ವಾಧೀನತೆ ಹಾಗೂ ಪುನ‌ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉಲ್ಲೇಖಿಸಲಾಗಿದೆ.