Labour card: ಮಂಡಳಿಯಿಂದ ಮದುವೆಗೆ 60,000 ರೂ ಸಹಾಯಧನ ಪಡೆಯಲು ಅರ್ಜಿ ಅಹ್ವಾನ! ಎಲ್ಲಿ ಅರ್ಜಿ ಸಲ್ಲಿಸಬೇಕು?

Labour card- ಅರ್ಥಿಕವಾಗಿ ಹಿಂದುಳಿದ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ ಸಹಾಯಧನ ಪಡೆಯಲು ಅರ್ಜಿ ಅಹ್ವಾನ ಮಾಡಲಾಗಿದೆ.

ಅರ್ಥಿಕವಾಗಿ ಹಿಂದುಳಿದ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ ಸಹಾಯಧನ ಪಡೆಯಲು ಅರ್ಜಿ ಅಹ್ವಾನ ಮಾಡಲಾಗಿದೆ.

ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ನೋಂದಾವಣೆ ಮಾಡಿಕೊಂಡಿರುವ ಕಾರ್ಮಿಕನಿಗೆ ಅಥವಾ ಅವರ ಮಕ್ಕಳ ಮದುವೆಗೆ ಮಂಡಳಿಯಿಂದ 60,000 ರೂ ಸಹಾಯಧನವನ್ನು ಹೇಗೆ ಪಡೆಯಬವುದು ಎಂದು ವಿವರಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬವುದು?

ಕಾರ್ಮಿಕ ಇಲಾಖೆಯಡಿ ಕಾರ್ಮಿಕ ಕಾರ್ಡ ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.

ಒಂದು ಕುಟುಂಬವು ಎರಡು ಬಾರಿ ಮಾತ್ರ ಈ ಸೌಲಭ್ಯ ಪಡೆಯಬಹುದು. ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು.

ಮದುವೆಯ ದಿನಾಂಕದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಿ, ಈ ಸೌಲಭ್ಯ ಪಡೆಯಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

> ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ.
> ಉದ್ಯೋಗ ದೃಡೀಕರಣ ಪತ್ರ.
> ಬ್ಯಾಂಕ್ ಖಾತೆ ವಿವರಗಳು.
> ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಾ ಪತ್ರ.
> ಮದುವೆಯ ಆಮಂತ್ರಣ ಪತ್ರ.
> ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡೆವಿಟ್ ಸಲ್ಲಿಸಬೇಕು.
> ರೇಷನ್ ಕಾರ್ಡ್.

ಈ ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ  ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅರ್ಜಿ ಸಮೂನೆ ಪಡೆದು ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Gruhalakshmi Amount: ಗೃಹಲಕ್ಷ್ಮೀ ಯೋಜನೆಯಡಿ ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ? ಅಂತಿಮ ಪಟ್ಟಿ ಬಿಡುಗಡೆ!

Karmika card- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ  ಕಲ್ಯಾಣ ಮಂಡಳಿಯಲ್ಲಿ ಫಲಾನುಭವಿಯಾಗಿ ನೊಂದಣಿ ಮಾಡಿಕೊಳ್ಳುವುದು ಹೇಗೆ? 

ಕಾರ್ಮಿಕನು ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಈ ಮಂಡಳಿಯಡಿ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿ ನೊಂದಣಿ ಮಾಡಿಕೊಳ್ಳಬವುದು.

ಅಗತ್ಯ ದಾಖಲಾತಿಗಳು:

1. ಉದ್ಯೋಗ ದೃಡೀಕರಣಪತ್ರ (ನಮೂನೆ V(A) / V(B) / V(C)/ V(D))
2. ಆಧಾರ್  ಕಾರ್ಡ್  (ಸ್ವಯಂ ದೃಡೀಕೃತ ಪ್ರತಿ)
4. ರೇಷನ ಕಾರ್ಡ್(non Mandatory)
5. ವಯಸ್ಸಿನದೃಡೀಕರಣಪತ್ರ (ಯಾವುದಾದರೊಂದು ಆಧಾರ್  ಕಾರ್ಡ್ ,ಗುರುತಿನ ಚೀಟಿ)

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳ ಸಮೇತ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬವುದು ಅರ್ಜಿ ಸಲ್ಲಿಸಿದ 45 ದಿನದ ಒಳಗಾಗಿ ನಿಮಗೆ ಸದಸ್ಯತ್ವ ಪ್ರಮಾಣ ಪತ್ರ ಸಿಗುತ್ತದೆ.

ಉದ್ಯೋಗ ದೃಡೀಕರಣಪತ್ರ (ನಮೂನೆ V(A) / V(B) / V(C)/ V(D)) ಡೌನ್ಲೋಡ್ ಮಾಡಲು ಮತ್ತು ಹೆಚ್ಚಿನ ಮಾಹಿತಿಗಾಗಿ ಈ https://karbwwb.karnataka.gov.in/42/schemes/kn ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅರ್ಜಿ ವಿಲೇವಾರಿ ಪ್ರಕ್ರಿಯೆ:

ಆನ್ಲೈನ್ ಮೂಲಕ ನೀವು ಸಲ್ಲಿಸಿದ ಅರ್ಜಿಯನ್ನು  ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ ಮಾಡಿ ಕೊನೆಯಲ್ಲಿಅನುಮೋದನೆ ನೀಡುತ್ತಾರೆ.

ಮದುವೆ ಸಹಾಯಧನ ಯೋಜನೆಯ ಮಾರ್ಗಸೂಚಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಕೃಷಿಕರಿಗೆ ಸಂಬಧಿಸಿದ ಇತರೆ ಯೋಜನೆಗಳ ಅಂಕಣಗಳು:

ಇದನ್ನೂ ಓದಿ: ಮೀನುಗಾರಿಕೆ ಇಲಾಖೆಯಿಂದ ಶೇ. 40% ಮತ್ತು ಶೇ. 60% ರಷ್ಟು ಸಹಾಯಧನ ಯೋಜನೆಗಳಿಗೆ ಅರ್ಜಿ ಅಹ್ವಾನ.

ಇದನ್ನೂ ಓದಿ: Sheep Farming schemes: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆಯಬವುದು?

ಇದನ್ನೂ ಓದಿ: Nrega scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

ಇದನ್ನೂ ಓದಿ: ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು

ಇದನ್ನೂ ಓದಿ: Chaff cutter subsidy: ಶೇ 50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ಇದನ್ನೂ ಓದಿ: ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

ಇದನ್ನೂ ಓದಿ: ನಿಮ್ಮ ಹಳ್ಳಿಯಲ್ಲಿ ಯಾವ ಸರ್ವೆ ನಂಬರ್ ಎಲ್ಲಿ ಬರುತ್ತದೆ ಎಂದು ಹೇಗೆ ತಿಳಿಯುವುದು?

ಇದನ್ನೂ ಓದಿ: ನಿಮ್ಮ ಹಳ್ಳಿಯಲ್ಲಿ ಯಾವ ಸರ್ವೆ ನಂಬರ್ ಎಲ್ಲಿ ಬರುತ್ತದೆ ಎಂದು ಹೇಗೆ ತಿಳಿಯುವುದು?