Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಪಡೆಯಲು(Marriage Assistane Scheme-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Marriage Assistane Scheme-2024

ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಪಡೆಯಲು(Marriage Assistane Scheme-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಮೊದಲನೆ ಮದುವೆಗೆ ಅಥವಾ ಅವನ/ಅವಳ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ರೂ.60,000/- ಅರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ.

ಅರ್ಹ ಫಲಾನುಭವಿಗಳು ಕೊನೆಯ ದಿನಾಂಕದ ಒಳಗಾಗಿ ಈ ಲೇಖನದಲ್ಲಿ ವಿವರಿಸಿರುವ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಇದನ್ನೂ ಓದಿ: Karnataka dams water level: ಪ್ರಸ್ತುತ ರಾಜ್ಯದ ಯಾವ ಜಲಾಶಯಕ್ಕೆ ಎಷ್ಟು ನೀರು ಹರಿದು ಬರುತ್ತಿದೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

Required Documents for application-ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು?

1) ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ.

2) ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ.

3) ಬ್ಯಾಂಕ್ ಪಾಸ್ ಬುಕ್ ಪ್ರತಿ.

4) ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಿ ಪತ್ರ.

5) ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡವಿಟ್ ಸಲ್ಲಿಸಬೇಕು.

6) ರೇಷನ್ ಕಾರ್ಡ್ ಪ್ರತಿ.

7) ವರ ಮತ್ತು ವಧುವಿನ ಆಧಾರ್ ಕಾರ್ಡ್ ಪ್ರತಿ.

ಇದನ್ನೂ ಓದಿ: loan interest Subsidy-ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Marriage Assistane Application link-ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅರ್ಜಿದಾರರು ಮೇಲೆ ತಿಳಿಸಿರುವ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.

Marriage Assistane Yojana Application: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಈ ಯೋಜನೆಯಡಿ ಸಹಾಯಧನ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕನು ಮದುವೆಯ ಸಹಾಯ ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.

ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. (ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬದಲ್ಲಿ ಇರುವ ನೋಂದಾಯಿತ ನಿರ್ಮಾಣ ಕಾರ್ಮಿಕನ ಸದಸ್ಯರನ್ನು ಲೆಕ್ಕಿಸದೆ ಒಂದು ನಿರ್ದಿಷ್ಠವಾದ ಮದುವೆಗೆ ಒಂದೇ ಸಹಾಯ ಧನವಾಗಿ ಹಕ್ಕು ಸಾಧಿಸಬೇಕಾಗಿರುತ್ತದೆ)

ಇದನ್ನೂ ಓದಿ: Anganwadi Recruitment-2024: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ!

ನೋಂದಾಯಿತ ಕಟ್ಟಡ ಕಾರ್ಮಿಕನ ಮಗ ಅಥವಾ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.

ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ.

ಕಾರ್ಮಿಕ ಇಲಾಖೆ ಸಹಾಯವಾಣಿ: 155214
ಅಧಿಕೃತ ವೆಬ್ಸೈಟ್- Click here
ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now