Navodaya admission- 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ! ನವೋದಯ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನ!

Facebook
Twitter
Telegram
WhatsApp

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯವು(JNVST Class 6th Admission Form 2025) 2025-26ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಜವಾಹರ್ ನವೋದಯ ವಿದ್ಯಾಲಯವು ಅತ್ಯುತ್ತಮ ವಸತಿಯುತ ಶಾಲೆಗಳಲ್ಲಿ ಭಾರತ ದೇಶದಲ್ಲಿಯೇ ಮೊದಲನೇಯ ಸ್ಥಾನದಲ್ಲಿದೆ. ಈ ಶಾಲೆಗಳಿಗೆ ನಿಮ್ಮ ಮಕ್ಕಳು ಆಯ್ಕೆ ಆದರೆ ಆರನೆಯ ತರಗತಿಯಿಂದ ದ್ವಿತೀಯ ಪಿಯುಸಿ ತನಕ ಉಚಿತ ಶಿಕ್ಷಣ ಸಿಗಲಿದೆ. 

ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಈ ಮೊದಲು ಸೆಪ್ಟೆಂಬರ್ 23, 2024 ಕೊನೆ ದಿನಾಂಕವಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಸದೆ ಇರುವವರಿಗೆ 15 ದಿನಗಳಲ್ಲಿ ಕಾಲಾವಕಾಶ ನೀಡಿ ಅಕ್ಟೋಬರ್ 7, 2024ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶ ನೀಡಿದೆ.

ಇದನ್ನೂ ಓದಿ: Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೇ. 75 ಮೀಸಲಾತಿ:  

ಪ್ರತಿ ಜಿಲ್ಲೆಯಲ್ಲಿ ಒಂದು ನವೋದಯ ಶಾಲೆ ಇದೆ. ಪ್ರತಿಯೊಂದು ಶಾಲೆಗೆ ಪ್ರತಿ ವರ್ಷವೂ 6ನೇ ತರಗತಿಗೆ 80 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಈ 80 ಸೀಟುಗಳಲ್ಲಿ ಶೇ. 75 ರಷ್ಟು ಮೀಸಲಾತಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇರುತ್ತದೆ.  

Navodaya admission eligibility-ಅರ್ಜಿ ಸಲ್ಲಿಸಲು ಅರ್ಹತೆಗಳು : 

 2025 ನೇ ಸಾಲಿನ ಆರನೇ ತರಗತಿಯ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಮೇ 01, 2013 ರಿಂದ ಜುಲೈ 01, 2015 ರ ಅವಧಿಯಲ್ಲಿ ಜನಿಸಿರಬೇಕು.  

ಇದನ್ನೂ ಓದಿ: Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!

ಇದನ್ನೂ ಓದಿ: Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

Navodaya school selection process-ನವೋದಯ ಶಾಲೆಗೆ ವಿದ್ಯಾರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ? 

ನವೋದಯ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮೊದಲು ಪ್ರವೇಶಾತಿ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳ ಮೆರಿಟ್ ಲಿಸ್ಟ್ ಸಿದ್ಧ ಪಡಿಸಿ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುವುದು. ದಾಖಲಾತಿ ಪರಿಶೀಲನೆ ನಂತರ ಅರ್ಹ ವಿದ್ಯಾರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

ಇದನ್ನೂ ಓದಿ: Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!
  
Important dates- ಪ್ರಮುಖ ದಿನಾಂಕ – 

• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 7 ಅಕ್ಟೋಬರ್ 2024
• ಲಿಖಿತ ಪರೀಕ್ಷೆ ದಿನಾಂಕ : ಜನವರಿ 18, 2024

ಅರ್ಜಿ ಸಲ್ಲಿಸಲು ಲಿಂಕ್ – Click here
ಅಧಿಸೂಚನೆ – Download Now

Facebook
Twitter
Telegram
WhatsApp
Picture of siddesh

siddesh

Leave a Comment

Top Stories

Bele parihara

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು.

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ