Parihara payment-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಬಂತು ರೂ 2,000 ಬೆಳೆ ನಷ್ಟ ಪರಿಹಾರ!

2023-24 ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಗೆ ಮೊದಲ ಕಂತಿನ ಬೆಳೆ ನಷ್ಟ ಪರಿಹಾರ(Parihara payment) ರೂ 2,000 ಅರ್ಥಿಕ ನೆರವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾವಣೆ.

ಈಗಾಗಲೇ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು FID ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾ ಮಾಡಲಾಗಿರುತ್ತದೆ.

ಕೆಳವೊಂದಿಷ್ಟು ಅರ್ಹ ರೈತರಿಗೆ ತಾಂತ್ರಿಕ ಕಾರಣಗಳಿಂದ ಮೊದಲ ಕಂತಿನ ಹಣ ವರ್ಗಾವಣೆ ಮಾಡಲು ಸಾಧ್ಯವಾಗಿರುವುದಿಲ್ಲ ಇಂತಹ ಅರ್ಹ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಿ ಆ ರೈತರಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿಕೊಳ್ಳುವಂತೆ ಕಂದಾಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿತ್ತು.

ಇದನ್ನೂ ಓದಿ: RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.

ಇದರಂತೆ ತಾಂತ್ರಿಕ ಸಮಸ್ಯೆ ಪರಿಹಾರಿಸಿಕೊಂಡ ಬಳಿಕ ನನ್ನ ಖಾತೆಗೆ ರೂ 2,000 ಬೆಳೆ ನಷ್ಟ ಪರಿಹಾರ ಜಮಾ ಅಗಿರುತ್ತದೆ ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

Parihara payment-2024: ಬೆಳೆ ನಷ್ಟ ಪರಿಹಾರ ರೂ 2,000 ಬರದೇ ಇರುವವರು ಈ ಕೆಳಗಿನ ದಾಖಲಾತಿಗಳು ಸರಿಯಾಗಿವೇ ಎಂದು ತಿಳಿದುಕೊಳ್ಳಬೇಕು:

1) ನಿಮ್ಮ ಜಮೀನಿನ ದಾಖಲೆ ಮತ್ತು ನಿಮ್ಮ ಬ್ಯಾಂಕ್ ವಿವರವನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಿ FID ನಂಬರ್ ರಚನೆ ಅಗಿದಿಯೇ ಎಂದು ಖಚಿತಪಡಿಸಿಕೊಳ್ಳಬೇಕು.

2) ನಿಮ್ಮ ಹೆಸರಿನಲ್ಲಿ FID ನಂಬರ್ ರಚನೆ ಆಗಿದ್ದರೆ ಆ ನಂಬರ್ ಗೆ ನಿಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಅಗಿವೆಯೇ? ಎಂದು ಒಮ್ಮೆ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಚೆಕ್ ಮಾಡಿಕೊಳ್ಳುವುದು.

3) ಮುಖ್ಯವಾಗಿ ಯಾವುದೇ ಯೋಜನೆಯಡಿ ನೇರ ನಗದು ವರ್ಗಾವಣೆ(DBT) ಮೂಲಕ ಹಣ ಪಡೆಯಲು ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಅಗಿರಬೇಕು ಅಂದರೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿರಬೇಕು ಆದ್ದರಿಂದ ಒಮ್ಮೆ ನಿಮ್ಮ ಬ್ಯಾಂಕ್ ಶಾಖೆಯನ್ನು ಭೇಟಿ ಮಾಡಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿದಿಯೋ? ಇಲ್ಲವೋ? ಎಂದು ಚೆಕ್ ಮಾಡಿಕೊಳ್ಳಿ.

ಇದನ್ನೂ ಓದಿ: village administrative officer recruitment 2024: ಸರಕಾರಿ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್! 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ!

4) ನಿಮ್ಮ ಹೆಸರಿನಲ್ಲಿ FID ನಂಬರ್ ಇದ್ದು ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಇದ್ದರು ನಿಮಗೆ ರೂ 2,000 ಬೆಳೆ ನಷ್ಟ ಪರಿಹಾರ ಜಮಾ ಅಗದಿದ್ದಲ್ಲಿ ಒಮ್ಮೆ ನಿಮ್ಮ ಹಳ್ಳಿಯ ಗ್ರಾಮ ಆಡಳಿತ ಅಧಿಕಾರಿ(VA) ಅವರನ್ನು ಭೇಟಿ ಮಾಡಿ ವಿಚಾರಣೆ ಮಾಡಿ.

Parihara payment list-ಈ ತಾಲ್ಲೂಕಿನ ರೈತರಿಗೆ ಮಾತ್ರ ಸಿಗಲಿದೆ ಬೆಳೆ ನಷ್ಟ ಪರಿಹಾರ:

ರಾಜ್ಯ ಸರಕಾರದಿಂದ ಈ ಹಿಂದೆ ಘೋಷಣೆ ಮಾಡಿರುವ ಬರಪೀಡಿತ ತಾಲ್ಲೂಕಿನ ರೈತರಿಗೆ ಮಾತ್ರ ಬೆಳೆ ನಷ್ಟ ಪರಿಹಾರವನ್ನು ಹಾಕಲಾಗುತ್ತದೆ. ಇತರೆ ಭಾಗದ ರೈತರಿಗೆ ಈ ಪರಿಹಾರದ ಹಣ ಸಿಗುವುದಿಲ್ಲ.

Parihara payment status-ಮೊಬೈಲ್ ನಲ್ಲೇ ಬೆಳೆ ನಷ್ಟ ಪರಿಹಾರದ ಹಣ ಬಂದಿರುವುದನ್ನು ಚೆಕ್ ಮಾಡುವ ವಿಧಾನ:

DBT karnataka ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ನಷ್ಟ ಪರಿಹಾರ ರೂ 2,000 ಜಮಾ ಅಗಿರುವ ವಿವರವನ್ನು ರೈತರು ತಮ್ಮ ಮೊಬೈಲ್ ನಲ್ಲೇ ಪಡೆಯಬಹುದಾಗಿದೆ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿಯಬಹುದು.

Step-1: ಪ್ರಥಮದಲ್ಲಿ ಈ ಲಿಂಕ್ Download Now ಮೇಲೆ ಕ್ಲಿಕ್ ಮಾಡಿ DBT karnataka ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. ಇದಾದ ಬಳಿಕ ನಿಮ್ಮ  ಆಧಾರ್ ಕಾರ್ಡ ನಂಬರ್ ಮತ್ತು OTP ಅನ್ನು ಹಾಕಿ ಮುಂದುವರೆಯಬೇಕು. 

Step-2: ಮೇಲಿನ ಹಂತವನ್ನು ಪೂರ್ಣಗೊಳಿಸಿದ ಬಳಿಕ 4 ಅಂಕಿಯ ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಈ ಪೇಜ್ ನ ಬಲ ಬದಿಯಲ್ಲಿ ಕನ್ನಡ/English ಎನ್ನುವ ಎರಡು ಆಯ್ಕೆಗಳು ಇದ್ದು ಇದರಲ್ಲಿ ಕನ್ನಡವನ್ನು ಆಯ್ಕೆ ಮಾಡಿಕೊಳ್ಳಬಹುದು.

Step-3: ತದನಂತರ “ಪಾವತಿ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿ ಇಲ್ಲಿ “ಬೆಳೆ ನಷ್ಟಕ್ಕೆ ಇನ್ಪುಟ್ ಸಬ್ಸಿಡಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮ್ಮ ಯಾವ ದಿನದಂದು ರೂ 2,000 ಪರಿಹಾರದ ಹಣ ಜಮಾ ಅಗಿದೆ ಮತ್ತು UTR details, ಬ್ಯಾಂಕ್ ವಿವರ ಗೋಚರಿಸುತ್ತದೆ.

ಇದನ್ನೂ ಓದಿ: Gruhalakshmi february amount- ಈ ಪಟ್ಟಿಯಲ್ಲಿರುವವರಿಗೆ ಫೆಬ್ರವರಿ-2024 ತಿಂಗಳ ಗೃಹಲಕ್ಷ್ಮಿ ಹಣ ಜಮಾ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

ಇದನ್ನೂ ಓದಿ: Morarji desai school- ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

ಗಮನಿಸಿ: ಈ ಮೇಲಿನ ವಿಧಾನವನ್ನು ಅನುಸರಿಸಿ ಚೆಕ್ ಮಾಡಿದಾಗ “ಬೆಳೆ ನಷ್ಟಕ್ಕೆ ಇನ್ಪುಟ್ ಸಬ್ಸಿಡಿ” ಎನ್ನುವ ಆಯ್ಕೆ ನಿಮ್ಮ ಮೊಬೈಲ್ ನಲ್ಲಿ ತೋರಿಸದೇ ಇದ್ದರೆ ನಿಮಗೆ ಪರಿಹಾರದ ಹಣ ಜಮಾ ಅಗಿರುವುದಿಲ್ಲ ಎಂದು.

ಉಪಯುಕ್ತ ಲಿಂಕ್ ಗಳು:

ಪರಿಹಾರ ವರ್ಗಾವಣೆ ಕುರಿತು ನಮ್ಮ ಪುಟದ ಇತರೆ ಅಂಕಣಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ: click here

DBT karnataka mobile app: Download Now