Public exam-2024: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಕರಣ ತೆರೆ ಎಳೆದ ಹೈಕೋರ್ಟ್!

ರಾಜ್ಯದಲ್ಲಿ ಸ್ಥಗಿತಗೊಂಡಿದ್ದ 5, 8, 9, 11 ನೇ ತರಗತಿ ಬೋರ್ಡ್ ಪರೀಕ್ಷೆ(Public exam-2024) ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು ಪರೀಕ್ಷೆ ಮುಂದುವರೆಸಲು ಆದೇಶ ಹೊರಡಿಸಿ ಪ್ರಕರಣ ತೆರೆ ಎಳೆದಿದೆ.

Public exam-2024: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಕರಣ ತೆರೆ ಎಳೆದ ಹೈಕೋರ್ಟ್!
Public exam-2024

ರಾಜ್ಯದಲ್ಲಿ ಸ್ಥಗಿತಗೊಂಡಿದ್ದ 5, 8, 9, 11 ನೇ ತರಗತಿ ಬೋರ್ಡ್ ಪರೀಕ್ಷೆ(Public exam-2024) ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು ಪರೀಕ್ಷೆ ಮುಂದುವರೆಸಲು ಆದೇಶ ಹೊರಡಿಸಿ ಪ್ರಕರಣ ತೆರೆ ಎಳೆದಿದೆ.

ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದ್ದು.

ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ಈ ಮೂಲಕ ಸ್ಥಗಿತಗೊಂಡಿದ್ದ ಪರೀಕ್ಷೆ(Public exam)ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. 

ಇದನ್ನೂ ಓದಿ: Intelligence Bureau Recruitement 2024- ಗುಪ್ತಚರ ಇಲಾಖೆಯಲ್ಲಿ SSLC ಪಾಸಾದವರಿಗೂ ಭರ್ಜರಿ ಅವಕಾಶ! ಒಟ್ಟು 660 ಹುದ್ದೆಗಳಿಗೆ ನೇಮಕಾತಿ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಎರಡು ಸುತ್ತೋಲೆಗಳು ಪ್ರಕಟವಾಗಿತ್ತು. ನಂತರ 5, 8, 9, 11ನೇ ತರಗತಿಗೆ ಬೋರ್ಡ್ ಎಕ್ಸಾಂ ನಡೆಸಲು ಸರ್ಕಾರ ನಿರ್ಧಾರವನ್ನು ಅಧಿಕೃತವಾಗಿ ಸೂಚಿಸಲಾಯಿತು.

ಸರ್ಕಾರದ ಸುತ್ತೋಲೆಗಳನ್ನು ವಿರೋಧಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ’ (ರುಪ್ಪಾ) ಹಾಗೂ "ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ’ ಕೋರ್ಟ್ನಲ್ಲಿ ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದರು. ಬೋರ್ಡ್ ಪರೀಕ್ಷೆಗೆ ಸಂಬಂಧಿಸಿ ಸರ್ಕಾರ ಪ್ರಕಟಿಸಿದ ಎರಡೂ ಸುತ್ತೋಲೆಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿತು. ಇದರಿಂದಾಗಿ, ಮಾರ್ಚ 11ರಿಂದ ನಡೆಯಬೇಕಿದ್ದ ಬೋರ್ಡ್ ಪರೀಕ್ಷೆ ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: Free mushroom training- ಉಚಿತ ಅಣಬೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Public exam case in high court- ಪ್ರಕರಣದ ಹಿನ್ನೆಲೆ: 

ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ( ಅಕ್ಟೋರ್ಬ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5,8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿತ್ತು.

ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, ಸರ್ಕಾರದ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್‌ಗಳ ಉಲ್ಲಂಘನೆಯಾಗಿದ್ದು ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದರು.

5, 8 ಮತ್ತು  9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಪ್ರಕರಣ: ವಿಸ್ತ್ರತ ಪೀಠಕ್ಕೆ ವರ್ಗಾಯಿಸಲು ಹೈಕೋರ್ಟ್ ನಕಾರ

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿ ಆದೇಶಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಮೇಲ್ಮನವಿ ಸಲ್ಲಿಸಿತ್ತು.

ಇದನ್ನೂ ಓದಿ: IPPB Recruitment 2024: ಅಂಚೆ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ!

ದ್ವಿಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದ ಮುಂದೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಿ, ಸೂಕ್ತ ಆದೇಶ ನೀಡುವಂತೆ ಆದೇಶಿಸಿತ್ತು.