RTC adhar link-2024: ರೈತರು ಸರಕಾರದ ಯಾವುದೇ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

May 31, 2024 | Siddesh
RTC adhar link-2024: ರೈತರು ಸರಕಾರದ ಯಾವುದೇ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!
Share Now:

ರೈತರು ಸರಕಾರದಿಂದ ವಿವಿಧ ಇಲಾಖೆಯಡಿ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಯಾವುದು ಆ ಕೆಲಸ? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿ ಹೀಗಿದೆ, ಕಳೆದ 2 ತಿಂಗಳಿಂದ ಕಂದಾಯ ಇಲಾಖೆಯಿಂದ RTC ಗೆ ಅಂದರೆ ಪಹಣಿಗೆ ಆಧಾರ್ ಕಾರ್ಡ ಲಿಂಕ್(RTC Aadhar link) ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿತ್ತು ಈಗ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಆರಂಭವಾಗಿದ್ದು ಸಹಾಯಧನದಲ್ಲಿ ಬಿತ್ತನೆ ಬೀಜ ಪಡೆಯಲು ರೈತರು ತಮ್ಮ ಎಲ್ಲಾ ಜಮೀನಿನ ಸರ್ವೆ ನಂಬರ್ ಗಳಿಗೆ ಆಧಾರ್ ಜೋಡಣೆ ತಪ್ಪದೇ ಮಾಡಿಸಬೇಕು.

ಪಹಣಿ ಅಧಾರ್ ಲಿಂಕ್ ಎಲ್ಲಿ ಮಾಡಿಸಬೇಕು? ಯಾವೆಲ್ಲ ಸೌಲಭ್ಯ ಪಡೆಯಲು ಇದು ಕಡ್ಡಾಯ? ಈಗಾಗಲೇ ಪಹಣಿಗೆ ಆಧಾರ್ ಲಿಂಕ್ ಅಗಿರುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಕುರಿತು ವಿವರವಾದ ಮಾಹಿತಿ ಹೀಗಿದೆ.

ಇದನ್ನೂ ಓದಿ: How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್!

RTC Aadhar link-ಪಹಣಿ/RTCಗೆ ಆಧಾರ್ ಕಾರ್ಡ ಲಿಂಕ್ ಎಲ್ಲಿ ಮಾಡಿಸಬೇಕು?

ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರಿನ ಎಲ್ಲಾ ಪಹಣಿ/RTC/ಉತಾರ್, ನಿಮ್ಮ ಆಧಾರ್ ಕಾರ್ಡ ಪ್ರತಿ ಹಾಗೂ ಆಧಾರ್ ಗೆ ಲಿಂಕ್ ಇರುವ ಮೊಬೈಲ್ ಪೋನ್  ಅನ್ನು ತೆಗೆದುಕೊಂಡು ನಿಮ್ಮ ಗ್ರಾಮ/ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ/VA ಅವರನ್ನು ನೇರವಾಗಿ ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಸಬಹುದು.

ಅಥವಾ

ನಿಮ್ಮ ಹೋಬಳಿಯ ನಾಡಕಚೇರಿಯನ್ನು ಮೇಲೆ ತಿಳಿಸಿರುವ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿಯು ಸಹ ಪಹಣ/RTC ಗೆ ಆಧಾರ್ ಕಾರ್ಡ ಲಿಂಕ್ ಮಾಡಿಸಬಹುದು.

ಇದನ್ನೂ ಓದಿ: Crop insurance-2024:ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು?ಸಂಪೂರ್ಣ ವಿವರ ಬಿಡುಗಡೆ!

How to link rtc and adhar card-2024: ಮೊಬೈಲ್ ನಲ್ಲೇ ಪಹಣಿ/RTC ಗೆ ಆಧಾರ್ ಲಿಂಕ್ ಮಾಡಬಹುದೇ?

ಹೌದು, ರೈತರು ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ತಮ್ಮ ತಮ್ಮ ಮೊಬೈಲ್ ನಲ್ಲಿ ಆನ್ಲೈನ್ ಮೂಲಕ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಬಹುದು.

ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡುವ ವಿಧಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: Click here
ಈಗಾಗಲೇ ಪಹಣಿಗೆ ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವ ವಿಧಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: Click here

ಇದನ್ನೂ ಓದಿ: Karnataka Apex Bank Recruitment-2024: ಕರ್ನಾಟಕ ಅಪೇಕ್ಸ್ ಬ್ಯಾಂಕ್ ನಲ್ಲಿ ನೇಮಕಾತಿ!

ಯಾವೆಲ್ಲ ಸೌಲಭ್ಯ ಪಡೆಯಲು ಪಹಣಿಗೆ ಅಧಾರ್ ಲಿಂಕ್ ಮಾಡುವುದು ಕಡ್ಡಾಯ:

1) ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ಪಡೆಯಲು.
2) ಬರ ಪರಿಹಾರ, ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ ಪರಿಹಾರ ಇತರೆ ಬಗ್ಗೆಯ ಹಾನಿ ಪರಿಹಾರಗಳನ್ನು ಪಡೆಯಲು.
3) ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣ ಪಡೆಯಲು ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ತೋಟಗಾರಿಕೆ, ಕೃಷಿ, ಪಶುಸಂಗೋಪನೆ, ಅರಣ್ಯ, ರೇಷ್ಮೆ ಇಲಾಖೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸಹಾಯಧನ ಯೋಜನೆಗಳ ಸೌಲಭ್ಯ ಪಡೆಯಲು RTC ಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ.

ಪಹಣಿ/RTCಗೆ ಆಧಾರ್ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್: rtc adhar link

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: