SSC Stenographers recruitment 2023: PUC ಮುಗಿಸಿದವರಿಗೆ SSC ಯಿಂದ ನೇಮಕಾತಿಗೆ ಅರ್ಜಿ ಆಹ್ವಾನ | Group 'c' 297 ಹುದ್ದೆಗಳು. 

SSC Stenographer's recruitment 2023: ಸಿಬ್ಬಂದಿ ನೇಮಕಾತಿ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಿಬ್ಬಂದಿ ನೇಮಕಾತಿ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

SSC Stenographer's recruitment-2023 ನೇಮಕಾತಿಯ ಮಾಹಿತಿ :

ಹುದ್ದೆಯ ಹೆಸರು: ಸ್ಟೆನೋಗ್ರಾಫರ್
ನೇಮಕಾತಿ ಮಾಡಿಕೊಳ್ಳುವ ಸಂಸ್ಥೆ: ಸಿಬ್ಬಂದಿ ನೇಮಕಾತಿ ಆಯೋಗ
ಒಟ್ಟು ಖಾಲಿ ಹುದ್ದೆಗಳು : 297
ಅರ್ಜಿ ಸಲ್ಲಿಸುವ ವಿಧಾನ : ಆನ್ ಲೈನ್ ಮುಖಾಂತರ

ಹುದ್ದೆಗಳ ಮಾಹಿತಿ ಮತ್ತು ಸ್ಟೆನೋಗ್ರಾಫರ್ ಕರ್ತವ್ಯಗಳು:

ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಾದ ಭಾರತೀಯ ವಿದೇಶಾಂಗ ಸೇವಾ ವಿಭಾಗ, ಸಶಸ್ತ್ರ ಪಡೆಗಳ ಪ್ರಧಾನ ಕಛೇರಿ, ರೈಲ್ವೆ ಬೋರ್ಡ್ ಸೆಕ್ರೆಟರಿಯೇಟ್ ಮತ್ತು ಭಾರತೀಯ ಚುನಾವಣಾ ಆಯೋಗದಲ್ಲಿ ಒಟ್ಟು 297 ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಿರಿಯ ಅಧಿಕಾರಿಗಳ ಅಧೀನದಲ್ಲಿ ಕೆಲಸ ಮಾಡಬೇಕಾಗುತ್ತದೆ. ಸಚಿವರು ನೀಡುವ ಮಾಹಿತಿಗಳ ಕುರಿತು ಟಿಪ್ಪಣಿ ಮಾಡುವ ಕರ್ತವ್ಯ ಇವರದಾಗಿರುತ್ತದೆ.

ಇದನ್ನೂ ಓದಿ: Gram panchayat jobs-2023: PUC ಮುಗಿಸಿದವರಿಗೆ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ!

Educational qualification-ವಿದ್ಯಾರ್ಹತೆ :

SSC Recruitment ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿರಬೇಕು.

Age limit ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 50 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲಾತಿಗಳು:

  • Identity card
  • marks card
  • passport size photo and signature

Selection procedure - ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ನಂತರ ಕೌಶಲ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ ನಡೆಸಿ ಅಂತಿಮವಾಗಿಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Pension eKYC: ಇನ್ನು ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Salary-ಮಾಸಿಕ ವೇತನ:

SSC Stenographer's recruitment 2023 - ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 9300ರೂ. ಯಿಂದ -34800 ರೂ. ವರೆಗೆ ಇರುತ್ತದೆ.

How to apply? ಅರ್ಜಿ ಸಲ್ಲಿಸುವ ವಿಧಾನ:

• ನಾವು ಕೆಳಗೆ ನೀಡಿರುವ ಸಿಬ್ಬಂದಿ ನೇಮಕಾತಿ ಆಯೋಗಕ್ಕೆ ಸಂಬಂಧಿಸಿದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಲಾಗಿನ್ ಆಗಬೇಕು.
• ಅಗತ್ಯವಿರುವ ಸಂಪೂರ್ಣ ಮತ್ತು ನಿಕರ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

Application fees - ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ₹100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Business loan- ಸ್ವಂತ ಬಿಸಿನೆಸ್ ಆರಂಭಿಸಲು ಸಬ್ಸಿಡಿಯಲ್ಲಿ ರೂ.2.00ಲಕ್ಷಗಳವರೆಗೆ ಸಾಲ ನೀಡಲು ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸಲು ಬೇಕಾಗಿರುವ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 27.09.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 21.10.2023

SSC Stenographer Notification-ಹುದ್ದೆಯ ಅಧಿಕೃತ ಅಧಿಸೂಚನೆ: Download Now

ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ : Apply Now
ಸಹಾಯವಾಣಿ ಸಂಖ್ಯೆ : 080-25502520