Scholarship Application- ವಿದ್ಯಾರ್ಥಿವೇತಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಮೂಂದುಡಿಕೆ!

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”(Scholarship Application), “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, 

Scholarship Application- ವಿದ್ಯಾರ್ಥಿವೇತಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಮೂಂದುಡಿಕೆ!
Scholarship Application-2024

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ

“ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”(Scholarship Application), “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, 

ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು 15 ಫೆಬ್ರವರಿ 2024ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಕೆ.ಜಲಾಲಪ್ಪ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Panchayat raj job- 51 ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗೆ ಅರ್ಜಿ ಆಹ್ವಾನ! ತಿಂಗಳಿಗೆ 61,500/- ವೇತನ.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ದೂ. 08392-275751 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Parihara list-ಬೆಳೆ ಪರಿಹಾರದ ಹಣ ಜಮಾ ಅಗಿರುವ ಫಲಾನುಭವಿ ರೈತರ ಪಟ್ಟಿ ಬಿಡುಗಡೆ!

Required Documents for scholarship Application: ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಖಾತೆ ಸೃಜಿಸಿ ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ / ದಾಖಲೆಗಳು

1) ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು.

2) ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ.

3) ವಿದ್ಯಾರ್ಥಿಗಳ ಇ-ಮೇಲ್ ಐಡಿ.

4) ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ.

5) ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆ‌ರ್.ಡಿ ಸಂಖ್ಯೆ.

6) ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ.

7) ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ.

8) ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ

9) ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )

10) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )

ಇದನ್ನೂ ಓದಿ: Swavalambi Yojana application-ಸ್ವಾವಲಂಬಿ ಯೋಜನೆಯಡಿ 1.00 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ವಿಶೇಷ ಸೂಚನೆ:

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಿ ಕುಟುಂಬ ಗುರುತಿನ ಸಂಖ್ಯೆಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ. ನಿಮ್ಮ ಕುಟುಂಬ ಗುರುತಿನ ಸಂಖ್ಯೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ - Click here

ಅರ್ಜಿ ಸಲ್ಲಿಸಲು ಲಿಂಕ್:

ಹೊಸದಾಗಿ ಅರ್ಜಿ ಸಲ್ಲಿಸಲು ಹೊಸ ಎಸ್.ಎಸ್.ಪಿ ಖಾತೆಯನ್ನು ಸೃಜಿಸಿಕೊಳ್ಳಲು ಲಿಂಕ್: Click here

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಲಿಂಕ್:  Apply Now